ಕನ್ನಡಪ್ರಭ ವಾರ್ತೆ ಜಮಖಂಡಿ
ಜಮಖಂಡಿ ನಗರದಲ್ಲಿ ನಡೆಯುತ್ತಿರುವ ಶರನ್ನವರಾತ್ರಿ ಉತ್ಸವದಲ್ಲಿ ಪಾಲ್ಗೊಳ್ಳಲು ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸ್ಟಿಂಗ್ ಆಪರೇಷನ್‌ನಂತಹ ಪ್ರಕರಣಗಳನ್ನು ಸಮರ್ಪಕವಾಗಿ ತನಿಖೆ ನಡೆಸಿ ಸತ್ಯಾಂಶ ಹೊರತರಬೇಕಾದ ಜವಾಬ್ದಾರಿ ಸರ್ಕಾರಕ್ಕಿದೆ. ಆದರೆ, ಮುಖ್ಯಮಂತ್ರಿಗಳೇ ಈ ವಿಚಾರವನ್ನು ಮಾಧ್ಯಮಗಳ ಮೂಲಕ ಪ್ರಸ್ತಾಪಿಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಬಲಿಪಶು ಮಾಡಲಾಗುತ್ತಿದೆ ಎಂದು ದೂರಿದರು.
ರೈತರ ಬೇಡಿಕೆಗಳು ನ್ಯಾಯಸಮ್ಮತ:ರೈತರ ಹೋರಾಟ ಮತ್ತು ಬೇಡಿಕೆಗಳು ವೈಜ್ಞಾನಿಕ ಹಾಗೂ ನ್ಯಾಯಸಮ್ಮತವಾಗಿವೆ. ರಾಜ್ಯ ಸರ್ಕಾರ ಕಬ್ಬಿಗೆ ನೀಡುವ ರಾಜ್ಯ ಸಲಹಾ ಬೆಲೆ (ಎಸ್‌ಎಪಿ) ಹೆಚ್ಚಿಸಬೇಕು. ಕೇಂದ್ರ ಸರ್ಕಾರ ನ್ಯಾಯಸಮ್ಮತ ಮತ್ತು ಲಾಭದಾಯಕ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಬಿಜೆಪಿ ಸಂಸದರು ಮತ್ತು ಸಚಿವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಎಂಎಸ್‌ಪಿ ಹೆಚ್ಚಳಕ್ಕೆ ಒತ್ತಾಯಿಸಿದ್ದಾರೆ ಎಂದು ತಿಳಿಸಿದರು.
ತಮಿಳುನಾಡು ಸರ್ಕಾರ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹700 ಸಹಾಯಧನ ಘೋಷಿಸಿರುವ ಮಾದರಿಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರವೂ ಪ್ರತಿ ಟನ್ ಕಬ್ಬಿಗೆ ₹1,000 ಸಹಾಯಧನ ನೀಡಬೇಕು. ರೈತರ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸಿ, ಅವರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಕೇಂದ್ರ ಸರ್ಕಾರವೂ ಎಂಎಸ್‌ಪಿ ಹೆಚ್ಚಳಕ್ಕೆ ಮುಂದಾಗಬೇಕು ಎಂದು ಜಗದೀಶ ಶೆಟ್ಟರ್ ಒತ್ತಾಯಿಸಿದರು.