ಕಳ್ಳತನವಾಗಿದ್ದ ₹6.36 ಕೋಟಿ ಮೌಲ್ಯದ ಸ್ವತ್ತು ಹಸ್ತಾಂತರ

KannadaprabhaNewsNetwork |  
Published : Mar 18, 2026, 03:00 AM IST
ಕಳ್ಳತನ, ಸರಗಳ್ಳತನ, ಮನೆ ಕಳ್ಳತನ ಹಾಗೂ ವಾಹನ ಕಳ್ಳತನ ಪ್ರಕರಣಗಳಲ್ಲಿ ಪತ್ತೆಯಾದ ವಸ್ತುಗಳನ್ನು ನ್ಯಾಯಾಲಯದ ಆದೇಶದಂತೆ ಹಸ್ತಾಂತರಿಸುವ ಕಾರ್ಯ ನಡೆಯಿತು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಬೆಳಗಾವಿ ನಗರ ಪೊಲೀಸ್ ಆಯುಕ್ತಾಲಯದಿಂದ ಪ್ರಾಪರ್ಟಿ ಪರೇಡ್ ನಡೆಸುವ ಮೂಲಕ ಕಳವು ಪ್ರಕರಣಗಳಲ್ಲಿ ವಶಪಡಿಸಿಕೊಂಡ ಸ್ವತ್ತುಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿ ನಗರ ಪೊಲೀಸ್ ಆಯುಕ್ತಾಲಯದಿಂದ ಪ್ರಾಪರ್ಟಿ ಪರೇಡ್ ನಡೆಸುವ ಮೂಲಕ ಕಳವು ಪ್ರಕರಣಗಳಲ್ಲಿ ವಶಪಡಿಸಿಕೊಂಡ ಸ್ವತ್ತುಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ಕಳೆದ 2025ನೇ ಸಾಲಿನಲ್ಲಿ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕಳ್ಳತನ, ಸರಗಳ್ಳತನ, ಮನೆ ಕಳ್ಳತನ ಹಾಗೂ ವಾಹನ ಕಳ್ಳತನ ಪ್ರಕರಣಗಳಲ್ಲಿ ಪತ್ತೆಯಾದ ವಸ್ತುಗಳನ್ನು ನ್ಯಾಯಾಲಯದ ಆದೇಶದಂತೆ ಹಸ್ತಾಂತರಿಸಲಾಯಿತು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್‌ ಆಯುಕ್ತ ಭೂಷಣ ಬೋರಸೆ ಅವರು, ಈ ವೇಳೆ ಒಟ್ಟು ₹6.36 ಕೋಟಿ ಮೌಲ್ಯದ ವಿವಿಧ ವಸ್ತುಗಳನ್ನು ಮಾಲೀಕರಿಗೆ ಒಪ್ಪಿಸಲಾಯಿತು. ಇದರಲ್ಲಿ ಸುಮಾರು ₹2.36 ಕೋಟಿ ಮೌಲ್ಯದ 2 ಕೆಜಿ 332 ಗ್ರಾಂ ಚಿನ್ನಾಭರಣ, ₹13,059 ಮೌಲ್ಯದ 294 ಗ್ರಾಂ ಬೆಳ್ಳಿ ಆಭರಣ, ₹3.99 ಕೋಟಿ ಮೌಲ್ಯದ 85 ವಾಹನಗಳು, ₹1.10 ಲಕ್ಷ ನಗದು ಹಾಗೂ ಸಿಇಐಆರ್‌ ಪೋರ್ಟಲ್ ಮೂಲಕ ಪತ್ತೆಯಾದ ₹20 ಲಕ್ಷ ಮೌಲ್ಯದ 140 ಮೊಬೈಲ್ ಹ್ಯಾಂಡ್‌ಸೆಟ್‌ಗಳು ಸೇರಿವೆ.

ಪೊಲೀಸರು ತನಿಖೆ ವೇಳೆ ಆರೋಪಿಗಳನ್ನು ಬಂಧಿಸಿ, ಕಳುವಾದ ವಸ್ತುಗಳನ್ನು ಪತ್ತೆಹಚ್ಚಿ ವಶಪಡಿಸಿಕೊಂಡು, ಕಾನೂನು ಪ್ರಕಾರ ಮಾಲೀಕರಿಗೆ ಹಿಂತಿರುಗಿಸಿದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥ ಹೊರತರುವ ಮುಹೂರ್ತ, ಜಾತ್ರೆಗೆ ಕ್ಷಣಗಣನೆ
ಮಧ್ಯಪ್ರಾಚ್ಯ ಯುದ್ಧ ಬೆನ್ನಿಗೇ ಕೈಸುಡುತ್ತಿದೆ ಮೊಬೈಲ್‌ ಫೋನ್‌ ದರ!