ಹಾಸ್ಟೆಲ್‌ ಮೇಲೆ ಕಲ್ಲು ತೂರಾಟ: ಕ್ರಮಕ್ಕೆ ಒತ್ತಾಯ

KannadaprabhaNewsNetwork |  
Published : Feb 06, 2024, 01:36 AM IST
ಹರಪನಹಳ್ಳಿ ತಾಲೂಕು ಕುರುಬ ಸಮಾಜದ ಮುಖಂಡರು ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಕುರುಬರ ಹಾಸ್ಟೆಲ್ ಮೇಲಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಕನಕದಾಸರ ಭಾವಚಿತ್ರಕ್ಕೂ ಕಿಡಿಗೇಡಿಗಳು ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಹರಪನಹಳ್ಳಿ: ಮಂಡ್ಯ ಜಿಲ್ಲಾ ಕುರುಬರ ವಿದ್ಯಾರ್ಥಿನಿಲಯದ ಮೇಲೆ ಕಲ್ಲು ತೂರಾಟ ನಡೆಸಿ ಶಾಂತಿ ಕದಡಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ ತಾಲೂಕು ಕುರುಬ ಸಮಾಜದ ಮುಖಂಡರು ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಇತ್ತೀಚೆಗೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಹನುಮ ಧ್ವಜ ತೆರವು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ವೇಳೆ ಮಂಡ್ಯ ಜಿಲ್ಲಾ ಕುರುಬರ ಸಂಘದ ವಿದ್ಯಾರ್ಥಿನಿಲಯದ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿ, ಕಟ್ಟಡದ ಕಿಟಕಿಗಳ ಗಾಜುಗಳನ್ನು ಧ್ವಂಸಗೊಳಿಸಿದ್ದಾರೆ. ದುಷ್ಕರ್ಮಿಗಳು ಯಾರೇ ಆಗಿದ್ದರೂ ಕೂಡಲೇ ಸರ್ಕಾರ ಪತ್ತೆ ಮಾಡಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಮುಖಂಡರು ಒತ್ತಾಯಿಸಿದರು.

ಕುರುಬರ ಹಾಸ್ಟೆಲ್ ಮೇಲಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಕನಕದಾಸರ ಭಾವಚಿತ್ರಕ್ಕೂ ಕಿಡಿಗೇಡಿಗಳು ಅವಮಾನಿಸಿದ್ದಾರೆ. ಸ್ಥಳದಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚುವ ಮೂಲಕ ವಿವಾದವನ್ನು ರಾಜಕೀಯ ದುರುದ್ದೇಶಕ್ಕೆ ಬಳಸಲು ಪ್ರಯತ್ನಿಸಿದ್ದಾರೆ. ಇಂತಹ ಕೃತ್ಯಗಳಿಂದ ಯುವಕರನ್ನು ದಾರಿ ತಪ್ಪಿಸುವ ಕೆಲಸ ಮೊದಲು ನಿಲ್ಲಬೇಕು. ಈ ಕೃತ್ಯಕ್ಕೆ ಪ್ರಚೋದನೆ ನೀಡಿದ ಮತ್ತು ಕೃತ್ಯ ಎಸಗಿದ ಸಮಾಜಘಾತುಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪ್ರದೇಶ ಕುರುಬ ಸಮಾಜದ ರಾಜ್ಯ ಉಪಾಧ್ಯಕ್ಷ ಎಚ್.ಬಿ. ಪರಶುರಾಮಪ್ಪ, ತಾಲೂಕು ಅಧ್ಯಕ್ಷ ಗೋಣಿಬಸಪ್ಪ, ಯುವ ಘಟಕದ ಅಧ್ಯಕ್ಷ ಬಸವರಾಜ್ ಹುಲಿಯಪ್ಪನವರ್, ಕಾರ್ಯದರ್ಶಿ ಪರಶುರಾಮ್, ಅರುಣ್ ಕುಮಾರ್, ಪುರಸಭೆ ಸದಸ್ಯರಾದ ಉದ್ದಾರ ಗಣೇಶ, ಭರತೇಶ್, ಮುಖಂಡರಾದ ಎಚ್. ಪರಶುರಾಮ್, ಸಣ್ಣವೀರಪ್ಪ, ನಾಗರಾಜ್ ಚಿರಸ್ತಳ್ಳಿ, ಮೈಲಜ್ಜ, ಇಟ್ಟಿಗುಡಿ ರಮೇಶ್, ಭರತ್ ಉದ್ದಾರ, ರಮೇಶ್ ಉದ್ದಾರ್, ಅಭಿ, ಗೋಣಿ, ಮಾಲತೇಶ, ಪ್ರವೀಣ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾದಿಗ ಅಧಿಕಾರಿಗಳು ಜನಾಂಗ ಅಭಿವೃದ್ಧಿ ಚಿಂತಿಸುತ್ತಿಲ್ಲ: ಜಗದೀಶ್
ಸಮೃದ್ಧಿ ಶಿಕ್ಷಣ ಟ್ರಸ್ಟ್ ನಿಂದ ವೃದ್ಧರಿಗೆ ಬೆಡ್ ಶೀಟ್, ಸ್ವೇಟರ್ ವಿತರಣೆ