ರಾಷ್ಟ್ರೀಯ ಧ್ವಜಗಳನ್ನು ಆಗಸ್ಟ್ ೧೫ ಮತ್ತು ೨೬ ಜನವರಿಯಲ್ಲಿ ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ. ಆದರೆ ಅದೇ ದಿನ ಅದೇ ರಾಷ್ಟ್ರಧ್ವಜ ರಸ್ತೆ ಹಾಗೂ ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದನ್ನು ತಡೆಯಲು ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದು ಜನಜಾಗೃತಿ ಸಮಿತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಕನ್ನಡಪ್ರಭವಾರ್ತೆ ಹಾಸನ
ರಾಷ್ಟ್ರೀಯ ಧ್ವಜಗಳನ್ನು ಆಗಸ್ಟ್ ೧೫ ಮತ್ತು ೨೬ ಜನವರಿಯಲ್ಲಿ ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ. ಆದರೆ ಅದೇ ದಿನ ಅದೇ ರಾಷ್ಟ್ರಧ್ವಜ ರಸ್ತೆ ಹಾಗೂ ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದನ್ನು ತಡೆಯಲು ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದು ಜನಜಾಗೃತಿ ಸಮಿತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಇದೇ ವೇಳೆ ಎಚ್.ಎಸ್. ಪುಟ್ಟಸ್ವಾಮಿ ಮಾಧ್ಯಮದೊಂದಿಗೆ ಮಾತನಾಡಿ, ರಾಷ್ಟ್ರಧ್ವಜವೇ ರಾಷ್ಟ್ರದ ಆತ್ಮವಾಗಿದೆ. ಈ ರಾಷ್ಟ್ರೀಯ ಧ್ವಜಗಳನ್ನು ೧೫ ಆಗಸ್ಟ್ ಮತ್ತು ೨೬ ಜನವರಿಯಲ್ಲಿ ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ. ಆದರೆ ಅದೇ ದಿನ ಅದೇ ರಾಷ್ಟ್ರಧ್ವಜ ರಸ್ತೆ ಹಾಗೂ ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಪ್ಲಾಸ್ಟಿಕ್ ಧ್ವಜಗಳು ತಕ್ಷಣವೇ ನಾಶವಾಗುವುದಿಲ್ಲ. ಆದ್ದರಿಂದ ಈ ರಾಷ್ಟ್ರಧ್ವಜಗಳು ಅನೇಕ ದಿನಗಳವರೆಗೆ ಅಗೌರವವನ್ನು ಕಾಣಬೇಕಾಗಿದೆ. ರಾಷ್ಟ್ರಧ್ವಜದ ಈ ಅಗೌರವವನ್ನು ತಡೆಯಲು ಹಿಂದೂ ಜನಜಾಗೃತಿ ಸಮಿತಿಯಿಂದ ಮುಂಬೈ ಹೈಕೋರ್ಟ್‌ನಲ್ಲಿ ಸಲ್ಲಿಸಲಾಯಿತು. ಈ ಸಂಬಂಧ ವಿಚಾರಣೆ ವೇಳೆ ನ್ಯಾಯಾಲಯವು ಪ್ಲಾಸ್ಟಿಕ್ ರಾಷ್ಟ್ರಧ್ವಜದಿಂದ ಆಗುವ ಅವಮಾನವನ್ನು ನಿಲ್ಲಿಸುವಂತೆ ಸರ್ಕಾರಕ್ಕೆ ಆದೇಶ ನೀಡಿತ್ತು ಎಂದರು. ಅದರಂತೆ ಕೇಂದ್ರ ಮತ್ತು ರಾಜ್ಯ ಗೃಹ ಇಲಾಖೆ ಹಾಗೂ ಶಿಕ್ಷಣ ಇಲಾಖೆಯೂ ಈ ಸಂಬಂಧ ಸುತ್ತೋಲೆ ಹೊರಡಿಸಿತ್ತು. ಇದರೊಂದಿಗೆ ಕೇಂದ್ರ ಸರ್ಕಾರವೂ "ಪ್ಲಾಸ್ಟಿಕ್ ನಿಷೇಧ "ಕ್ಕೆ ಮುಂದಾಗಿದೆ. ಅದರ ಪ್ರಕಾರ, ಪ್ಲಾಸ್ಟಿಕ್ ರಾಷ್ಟ್ರಧ್ವಜಗಳನ್ನು ಮಾರಾಟ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಇದು ಲಾಂಛನಗಳು ಮತ್ತು ಹೆಸರುಗಳ (ಅನುಚಿತ ಬಳಕೆ ತಡೆ) ಕಾಯಿದೆ, ೧೯೫೦ ಮತ್ತು ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯ್ದೆ ೧೯೭೧ ಉಲ್ಲಂಘನೆಯಾಗಿದೆ ಎಂದು ತಿಳಿಸಿದರು.
ರಾಷ್ಟ್ರಧ್ವಜಕ್ಕೆ ಅವಮಾನವಾಗುವುದನ್ನು ತಡೆಯಲು ಕೃತಿ ಸಮಿತಿಯನ್ನು ಸ್ಥಾಪಿಸಲು ಮತ್ತು ಅದರಲ್ಲಿ ಸಾಮಾಜಿಕ ಸಂಘಟನೆಗಳನ್ನು ಸೇರಿಸಲು ಹೈಕೋರ್ಟ್ ಸರ್ಕಾರಕ್ಕೆ ನಿರ್ದಿಷ್ಟವಾಗಿ ಆದೇಶಿಸಿದೆ. ಇದರಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜದಿಂದ ಆಗುವ ಅವಮಾನವನ್ನು ತಡೆಯಲು ವಿವಿಧ ಮಾಧ್ಯಮಗಳ ಮೂಲಕ ಜನಜಾಗೃತಿ ಮೂಡಿಸುವ ಅಪೇಕ್ಷಿತವಿದೆ (ಉದಾಹರಣೆಗೆ ಕರಪತ್ರಗಳು, ಫಲಕಗಳು, ಬೋರ್ಡ್‌ಗಳು, ಜಾಹೀರಾತುಗಳ ಮೂಲಕ ಸಂಬೋಧನೆ) ಸಮಿತಿಯು ರಾಷ್ಟ್ರಧ್ವಜಕ್ಕೆ ಅವಮಾನಿಸುವುದರ ವಿರುದ್ಧ ಜನಜಾಗೃತಿ ಮೂಡಿಸುತ್ತಿದೆ. ಸಮಿತಿಯು ಶಾಲಾ-ಕಾಲೇಜುಗಳಲ್ಲಿ ಉಪನ್ಯಾಸ, ಪ್ರಶ್ನೋತ್ತರ ಸ್ಪರ್ಧೆಗಳನ್ನು ಆಯೋಜಿಸುವುದು, ಕರಪತ್ರಗಳನ್ನು ವಿತರಿಸುವುದು, ಪೋಸ್ಟರ್- ಫ್ಲೆಕ್ಸ್‌ಗಳನ್ನು ಹಾಕುವುದು, ಸ್ಥಳೀಯ ಕೇಬಲ್ ಚಾನೆಲ್‌ಗಳಲ್ಲಿ ವಿಡಿಯೋಗಳನ್ನು (ಸಿಡಿ) ತೋರಿಸುವುದು, ರಸ್ತೆಗಳಲ್ಲಿ ಬಿದ್ದಿರುವ ರಾಷ್ಟ್ರಧ್ವಜಗಳನ್ನು ಸಂಗ್ರಹಿಸುವುದು, ಸಾಮಾಜಿಕ ಜಾಲತಾಣದ ಮೂಲಕ ಪ್ರಚಾರ ಕಾರ್ಯಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದರು.
ನಾವು ಸರ್ಕಾರದಿಂದ ಈ ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವುದನ್ನು ತಡೆಯಲು ರಾಷ್ಟ್ರಧ್ವಜ ಗೌರವ ಕೃತಿ ಸಮಿತಿಯನ್ನು ಸ್ಥಾಪಿಸಬೇಕು. ಜಿಲ್ಲೆಯಲ್ಲಿ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದರೆ ಕೂಡಲೇ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಶಾಲೆಗಳಲ್ಲಿ ರಾಷ್ಟ್ರಧ್ವಜವನ್ನು ಗೌರವಿಸಿ ಎಂಬ ಉಪಕ್ರಮವನ್ನು ನಡೆಸಲು ಸೂಚನೆಗಳನ್ನು ನೀಡಬೇಕು ಎಂದು ಹೇಳಿದರು.
ಇದೇ ವೇಳೆ ಅನಂತು, ಸತೀಶ್, ಬ್ಯಾಟಚಾರಿ, ಅಶೋಕ್ ಕುಮಾರ್, ಯೋಗೀಶ್, ವೇದಕ್ಕ, ಪುಷ್ಪ, ಕುಸುಮಾ, ಮೇಧವಿ, ಇತರರು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.