ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಮೂಡುಬಿದಿರೆ ವಲಯ ಸಮಿತಿ ವತಿಯಿಂದ ಭಾನುವಾರ ಮೂಡುಬಿದಿರೆ ಸಮುದಾಯ ಆಸ್ಪತ್ರೆ ಮುಂಭಾಗ ಮಾನವ ಸರಪಳಿ ನಡೆಸಲಾಯಿತು.
ಮೂಡುಬಿದಿರೆ: ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಮೂಡುಬಿದಿರೆ ವಲಯ ಸಮಿತಿ ವತಿಯಿಂದ ಭಾನುವಾರ ಮೂಡುಬಿದಿರೆ ಸಮುದಾಯ ಆಸ್ಪತ್ರೆ ಮುಂಭಾಗ ಮಾನವ ಸರಪಳಿ ನಡೆಸಲಾಯಿತು.ಮೂಡುಬಿದಿರೆ ಸಮುದಾಯ ಆಸ್ಪತ್ರೆಯನ್ನು ಖಾಸಗಿ ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸುವ ಆದೇಶ ರದ್ದುಪಡಿಸಬೇಕು, ಪೂರ್ಣ ಪ್ರಮಾಣದ ತಾಲೂಕು ಆಸ್ಪತ್ರೆ ಮಂಜೂರು ಮಾಡಬೇಕು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಮತ್ತು ಜಯದೇವ ಹೃದಯ ಆಸ್ಪತ್ರೆಯ ಘಟಕ ಸ್ಥಾಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ವಸಂತ ಆಚಾರಿ, ಸರ್ಕಾರಿ ಆಸ್ಪತ್ರೆಗಳನ್ನು ದುರ್ಬಲಗೊಳಿಸಿ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ನೀತಿಯನ್ನು ಸರ್ಕಾರ ಕೈಬಿಡಬೇಕು. ಆರೋಗ್ಯ ಸಚಿವ ಯು.ಟಿ. ಖಾದರ್ ಆದೇಶ ಹಿಂಪಡೆಯದಿದ್ದರೆ ಹೋರಾಟ ತೀವ್ರ ಸ್ವರೂಪ ಪಡೆಯಲಿದೆ ಎಂದು ಎಚ್ಚರಿಸಿದರು.ಸಿಪಿಐಎಂ ಹಿರಿಯ ನಾಯಕ ಯಾದವ ಶೆಟ್ಟಿ ಮಾತನಾಡಿ, ಮೂಡುಬಿದಿರೆಗೆ ಪೂರ್ಣ ಪ್ರಮಾಣದ ತಾಲೂಕು ಆಸ್ಪತ್ರೆ ಮಂಜೂರು ಮಾಡುವುದು ಜನರ ಹಕ್ಕಾಗಿದ್ದು, ಶಾಸಕರು ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಸಿಪಿಐಎಂ ತಾಲೂಕು ಮುಖಂಡರಾದ ರಾಧಾ ಪುತ್ತಿಗೆ, ಲಕ್ಷ್ಮಿ, ಗಿರಿಜಾ, ಶಂಕರ ವಾಲ್ಪಾಡಿ ಸಹಿತ ಕಾರ್ಯಕರ್ತರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.