ಕನ್ನಡಪ್ರಭ ವಾರ್ತೆ ವಿಜಯಪುರ
ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಸೇವಾ ಸೌಲಭ್ಯಗಳನ್ನು ಒದಗಿಸಲು ಮತ್ತು ಮೊಬೈಲ್ ಅಪ್ಲಿಕೇಷನ್‌ಗಳಲ್ಲಿ ನಿರಂತರವಾಗಿ ಕೆಲಸ ಮಾಡುವಂತೆ ಹೇರಲಾಗುತ್ತಿರುವ ಒತ್ತಡವನ್ನು ನಿಲ್ಲಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿಗೆ ಕೆಲಸ ಸ್ಥಗಿತಗೊಳಿಸಿ ಮುಷ್ಕರ ಹಮ್ಮಿಕೊಳ್ಳಲಾಗಿದೆ.ಈ ವೇಳೆ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಎಸ್.ರಾಜಾಪುರ ಹಾಗೂ ಪ್ರಧಾನ ಕಾರ್ಯಾದರ್ಶಿ ಗಣೇಶ ಡೋಬಳೆ ಭಾಗವಹಿಸಿ ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದರು. ಮುಷ್ಕರದಲ್ಲಿ ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಸುನೀಲ ರಾಠೋಡ, ಸಂಘದ ಪದಾಧಿಕಾರಿಗಳು, ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ತಾಲೂಕಿನ ಎಲ್ಲ ಗ್ರಾಮ ಸಹಾಯಕರು ಪಾಲ್ಗೊಂಡಿದ್ದರು.