ಕಬ್ಬಿನ ಬೆಳೆಗಾರರಿಗೆ ಆಗುತ್ತಿರುವ ಅನ್ಯಾಯ ನಿಲ್ಲಿಸಿ: ಲೋಕಾಯುಕ್ತ ನ್ಯಾ. ಸಂತೋಷ್‌ ಹೆಗ್ಡೆ

KannadaprabhaNewsNetwork | Published : Mar 13, 2025 12:46 AM

ಸಾರಾಂಶ

ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದಿಂದ ಹಂಪಿಯಿದ ಹೊಸಪೇಟೆವರೆಗೆ ಬುಧವಾರ ಪಾದಯಾತ್ರೆ ನಡೆಸಲಾಯಿತು.

ಸಕ್ಕರೆ ಕಾರ್ಖಾನೆಗೆ ಒತ್ತಾಯಿಸಿ ರೈತರ ಪಾದಯಾತ್ರೆಗೆ ಚಾಲನೆಕನ್ನಡಪ್ರಭ ವಾರ್ತೆ ಹೊಸಪೇಟೆ

ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದಿಂದ ಹಂಪಿಯಿದ ಹೊಸಪೇಟೆವರೆಗೆ ಬುಧವಾರ ಪಾದಯಾತ್ರೆ ನಡೆಸಲಾಯಿತು.

ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಪಾದಯಾತ್ರೆಗೆ ಚಾಲನೆ ನೀಡಿದರು.

ಮರಿಯಮ್ಮನಹಳ್ಳಿಯ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯರು, ಗರಗ ನಾಗಲಾಪುರದ ಒಪ್ಪತ್ತೇಶ್ವರ ಮಠದ ಶ್ರೀನಿರಂಜನ ಸ್ವಾಮೀಜಿ, ಹಂಪಿ ಗ್ರಾಪಂ ಅಧ್ಯಕ್ಷೆ ರಜನಿ ಷಣ್ಮುಖಗೌಡ ಹಾಗೂ ಕರವೇ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಸಕ್ಕರೆ ಕಾರ್ಖಾನೆ, ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಹಸ್ತಾಂತರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ನೂರಾರು ರೈತರು, ರೈತ ಮಹಿಳೆಯರು, ಸಾರ್ವಜನಿಕರು ಒತ್ತಾಯಿಸಿದರು. ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಬೆಳೆ ಬೆಳೆಯಲಾಗುತ್ತಿದೆ. ಹೀಗಾಗಿ ಸಕ್ಕರೆ ಕಾರ್ಖಾನೆ ಸ್ಥಾಪನೆ ಆಗಲೇಬೇಕು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಒತ್ತಾಯಿಸಿದರು.

ಪಾದಯಾತ್ರೆಯು ಹಂಪಿ, ಕಮಲಾಪುರ, ಕಡ್ಡಿರಾಂಪುರ ಕ್ರಾಸ್, ಗಾಳೆಮ್ಮನಗುಡಿ, ಮಲಪನಗುಡಿ, ಕೊಂಡನಾಯಕನಹಳ್ಳಿ, ಅನಂತಶಯನಗುಡಿ ಮೂಲಕ ಡಾ. ಪುನೀತ್ ರಾಜಕುಮಾರ್ ವೃತ್ತಕ್ಕೆ ಬಂದು ತಲುಪಿತು. ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

ನ್ಯಾ. ಸಂತೋಷ್ ಹೆಗ್ಡೆ ಮಾತನಾಡಿ, ಈ ಭಾಗದ ರೈತರಿಗೆ ಸಕ್ಕರೆ ಕಾರ್ಖಾನೆ ಇಲ್ಲದಿರುವುದು ಅವರಿಗೆ ಅನ್ಯಾಯ ಮಾಡಿದಂತೆ. ಕಬ್ಬಿಗೆ ತಕ್ಕ ಬೆಲೆಯೂ ಸಿಗುವುದಿಲ್ಲ. ಇಲ್ಲಿ ಕಾರ್ಖಾನೆ ಆರಂಭವಾಗುವವರೆಗೆ ಹೋರಾಟ ನಡೆಯಲಿದೆ. ಕಬ್ಬಿನ ಬೆಳೆಗಾರರಿಗೆ ಅನ್ಯಾಯ ಆಗುತ್ತಿರುವುದನ್ನು ಕೂಡಲೇ ನಿಲ್ಲಿಸಿ ಬೆಳೆಗೆ ತಕ್ಕ ಫಲ ಸಿಗುವಂತೆ ಮಾಡಬೇಕಿದೆ ಎಂದು ಒತ್ತಾಯಿಸಿದರು. ಇದಕ್ಕೂ ಮುನ್ನ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಶ್ರೀವಿರೂಪಾಕ್ಷೇಶ್ವರಸ್ವಾಮಿ ದರ್ಶನ ಪಡೆದರು.

ಕುಸಿದುಬಿದ್ದ ರೈತ ಮುಖಂಡ:

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ರೈತರ ಪಾದಯಾತ್ರೆಯಲ್ಲಿ ಬಿರು ಬಿಸಿಲಿಗೆ ರೈತ ಮುಖಂಡರೊಬ್ಬರು ಕುಸಿದು ಬಿದ್ದ ಘಟನೆ ನಡೆದಿದೆ. ಇಲ್ಲಿನ ಡಾ. ಪುನಿತ್ ರಾಜ್‌ಕುಮಾರ್ ವೃತ್ತದಲ್ಲಿ ಪಾದಯಾತ್ರೆ ಮುಗಿದ ಬಳಿಕ ಮಾತನಾಡುವ ವೇಳೆ, ಬಿರು ಬಿಸಿಲಿಗೆ ರಾಜ್ಯ ಉಪಾಧ್ಯಕ್ಷ ಎಸ್.ಎ. ಖಾದರಿ ಕುಸಿದು ಬಿದ್ದರು. ಗರಿಷ್ಠ 38 ಡಿಗ್ರಿ ಉಷ್ಣಾಂಶವಿದ್ದು, ಬಿಸಿಲಿನ ತಾಪಮಾನ ಹೆಚ್ಚಾಗಿದ್ದರಿಂದ ನಿತ್ರಾಣಗೊಂಡಿದ್ದ ಅವರನ್ನು ಪೊಲೀಸರು ಕೂಡಲೇ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿದರು.

Share this article