ತಾಲೂಕಿನ ಅನೇಕ ಗ್ರಾಮಗಳಿಗೆ ಸಂಚರಿಸುವ ಸಾರಿಗೆ ಬಸ್ಸುಗಳು ಮಹಿಳೆಯರನ್ನು ಕಂಡರೆ ನಿಲ್ಲಿಸದಿರುವುದರಿಂದ ಮಹಿಳಾ ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಮಹಿಳೆಯರು ಮಾರ್ಗಮಧ್ಯೆ ಬಸ್ ನಿಲ್ಲಿಸುವಂತೆ ಮನವಿ ಮಾಡಿದರೂ, ಚಾಲಕರು ಹಾಗೂ ನಿರ್ವಾಹಕರು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ. ಇಂತಹ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಚಯ್ಯ ಸೂಚನೆ ನೀಡಿದರು.
- ಶಕ್ತಿಗಾಗಿ ಹೆಚ್ಚುವರಿ ಬಸ್ಸುಗಳ ಅಳವಡಿಕೆ
ಕನ್ನಡಪ್ರಭ ವಾರ್ತೆ ಹನೂರು
ತಾಲೂಕಿನ ಅನೇಕ ಗ್ರಾಮಗಳಿಗೆ ಸಂಚರಿಸುವ ಸಾರಿಗೆ ಬಸ್ಸುಗಳು ಮಹಿಳೆಯರನ್ನು ಕಂಡರೆ ನಿಲ್ಲಿಸದಿರುವುದರಿಂದ ಮಹಿಳಾ ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಮಹಿಳೆಯರು ಮಾರ್ಗಮಧ್ಯೆ ಬಸ್ ನಿಲ್ಲಿಸುವಂತೆ ಮನವಿ ಮಾಡಿದರೂ, ಚಾಲಕರು ಹಾಗೂ ನಿರ್ವಾಹಕರು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ. ಇಂತಹ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಚಯ್ಯ ಸೂಚನೆ ನೀಡಿದರು.
ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಚಯ್ಯ ಮಾತನಾಡಿದರು.
ಶಕ್ತಿ ಯೋಜನೆಯಡಿ ಹೆಚ್ಚಿನ ಬಸ್‌ಗಳನ್ನು ವ್ಯವಸ್ಥೆ ಮಾಡಿ ಸಾರ್ವಜನಿಕರ ಅನುಕೂಲಕ್ಕೆ ತಕ್ಕಂತೆ ಸಾರಿಗೆ ಸೌಲಭ್ಯ ಕಲ್ಪಿಸಬೇಕೆಂದೂ ಹೇಳಿದರು. ತಾಲೂಕಿನಲ್ಲಿ ಆಹಾರ ಶಿರಸ್ತೇದಾರ್ ಹುದ್ದೆ ಖಾಲಿ ಇರುವುದರಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಅನೇಕ ಲೋಪಗಳು ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಶೀಘ್ರದಲ್ಲೇ ಆಹಾರ ಶಿರಸ್ತೇದಾರ್ ನೇಮಕ ಮಾಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.
ಬಳಿಕ ಇ.ಒ. ಉಮೇಶ್ ಮಾತನಾಡಿ, ‘ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ಲೋಪಗಳಿಗೆ ಅವಕಾಶ ನೀಡುವುದಿಲ್ಲ. ಸಾರ್ವಜನಿಕರಿಂದ ಬಂದ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆವಿತ್ತರು.ಈ ವೇಳೆ ಕೆಎಸ್‌ಆರ್‌ಟಿಸಿ ವ್ಯವಸ್ಧಾಪಕ ಭೋಗನಾಯ್ಕ, ಚೆಸ್ಕಾಂ ಇಲಾಖೆ ಎಇಇ ರಂಗಸ್ವಾಮಿ, ಕಂದಾಯ ಇಲಾಖೆಯ ವಿಷ್ಣು, ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಮುಸೀರ್ ಅಹಮದ್, ಸಿದ್ದಪ್ಪಾಜಿ, ಗೋವಿಂದ, ನಾಗೇಶ್, ಸೋಮಶೇಖರ್ ಸೇರಿದಂತೆ ಇತರರು ಹಾಜರಿದ್ದರು.
---
20ಸಿಎಚ್ಎನ್18ಹನೂರು ಪಟ್ಟಣದ ತಾಲೂಕು ಪಂಚಾಯ್ತಿಯಲ್ಲಿ ನಡೆದ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ರಾಚಯ್ಯ ಅವರು ಮಾತನಾಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.