ಮಹಿಳಾ ಕೂಲಿಕಾರರಿಗಾಗಿ ಸ್ತ್ರೀ ಚೇತನ ಅಭಿಯಾನ

KannadaprabhaNewsNetwork |  
Published : Mar 12, 2025, 12:47 AM IST
ಫೋಟೋ: 11 ಹೆಚ್‌ಎಸ್‌ಎ 4ಹೊಸಕೋಟೆ ತಾಲೂಕಿನ ನೆಲವಾಗಿಲು ಗ್ರಾಪಂನಲ್ಲಿ ನಡೆದ ನರೇಗಾ ಸ್ತ್ರೀ ಚೇತನ ಅಭಿಯಾನದಲ್ಲಿ ನರೇಗಾದಲ್ಲಿ ನೂರು ದಿನ ಕೂಲಿ ಪೂರೈಸಿದ ಮಹಿಳೆಯರಿಗೆ ಇಓ ಡಾ.ಸಿ.ಎನ್.ನಾರಾಯಣಸ್ವಾಮಿ ಅಭಿನಂದಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ತಾಲೂಕಿನಲ್ಲಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಶೇ.10ರಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ತಾಲೂಕಿನ ಎಲ್ಲಾ ಗ್ರಾಪಂಗಳಲ್ಲಿ 3 ತಿಂಗಳವರೆಗೆ 'ಸ್ತ್ರೀ ಚೇತನ ಅಭಿಯಾನ' ಆಯೋಜಿಸಲಾಗಿದೆ ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ.ಸಿ.ಎನ್.ನಾರಾಯಣಸ್ವಾಮಿ ತಿಳಿಸಿದರು.

ಹೊಸಕೋಟೆ: ತಾಲೂಕಿನಲ್ಲಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಶೇ.10ರಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ತಾಲೂಕಿನ ಎಲ್ಲಾ ಗ್ರಾಪಂಗಳಲ್ಲಿ 3 ತಿಂಗಳವರೆಗೆ ''''''''ಸ್ತ್ರೀ ಚೇತನ ಅಭಿಯಾನ'''''''' ಆಯೋಜಿಸಲಾಗಿದೆ ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ.ಸಿ.ಎನ್.ನಾರಾಯಣಸ್ವಾಮಿ ತಿಳಿಸಿದರು.

ತಾಲೂಕಿನ ನೆಲವಾಗಿಲು ಗ್ರಾಪಂ ವತಿಯಿಂದ ನಡೆದ ನರೇಗಾ ಸ್ತ್ರೀ ಚೇತನ ಅಭಿಯಾನಕ್ಕೆ ಚಾಲನೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 100 ದಿನ ಪೂರೈಸಿರುವ ಮಹಿಳೆಯರನ್ನು ಸನ್ಮಾನಿಸಿ ಮಾತನಾಡಿದ ಅವರು, ಮನರೇಗಾ ಯೋಜನೆಯಡಿ ಶೇ.52ರಷ್ಟು ಮಹಿಳಾ ಕೂಲಿಕಾರರು ಭಾಗವಹಿಸುತ್ತಿದ್ದು, ಜಾಗೃತಿ ಮೂಡಿಸುತ್ತಿದ್ದರೂ ಶೇ.೫೫ರಷ್ಟು ತಲುಪಲು ಸಾಧ್ಯವಾಗಿಲ್ಲ. ಮಹಿಳಾ ಕೂಲಿಕಾರರ ಪ್ರಮಾಣ ಹೆಚ್ಚಿಸಲು 3 ತಿಂಗಳ ಸ್ತ್ರೀ-ಚೇತನ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಶೇ.10ರಷ್ಟು ಹೆಚ್ಚಿಸುವುದು ಹಾಗೂ ಮಹಿಳಾ ಕಾಯಕ ಬಂಧುವಿಗೆ ಪ್ರೋತ್ಸಾಹಧನ ಕಡ್ಡಾಯವಾಗಿ ಪಾವತಿಸುವ ಉದ್ದೇಶ ಹೊಂದಲಾಗಿದೆ. ಅರ್ಹ ಮಹಿಳಾ ಕೂಲಿಕಾರರಿಗೆ ಜಾಗೃತಿ ಮೂಡಿಸುವುದು, ಮೂರು ತಿಂಗಳ ಕಾಲ ಮಹಿಳಾ ಕೂಲಿಕಾರರಿಗೆ ನಿರಂತರ ಕೆಲಸ ನೀಡಲು ಕಾಮಗಾರಿಗಳನ್ನು ಸಿದ್ಧತೆ ಮಾಡಿ ಕೊಳ್ಳುವುದು., ಮಹಿಳಾ ಕೂಲಿಕಾರರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ವಿಶೇಷ ಪ್ರಯತ್ನಗಳನ್ನು ನಡೆಸುವ ಚುನಾಯಿತ ಪ್ರತಿನಿಧಿಗಳು, ಅಧಿಕಾರಿ, ಸಿಬ್ಬಂದಿಗಳನ್ನು ಗುರುತಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಜಾಗೃತಿ ಕಾರ್ಯಕ್ರಮಗಳಾದ ರಂಗೋಲಿ ಸ್ವರ್ಧೆ, ವೈಯಕ್ತಿಕ ಕಾಮಗಾರಿಗಳ ಅರಿವು ಮತ್ತು ಫಲಾನುಭವಿಗಳಗೆ ಆದೇಶ ಪತ್ರ ವಿತರಣೆ, ಮಹಿಳಾ ಕೂಲಿ ಕಾರ್ಮಿಕರಿಗೆ ಗ್ರಾಮೀಣ ಕ್ರೀಡಾಕೂಟ ಆಯೋಜನೆ, ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ವಸಂತ ಲೋಕೇಶ್, ಪಿಡಿಒ ಕಾಂತರಾಜ್ ಸೇರಿದಂತೆ ಗ್ರಾಪಂ ಸದಸ್ಯರು, ಸ್ವಸಾಹಯ ಸಂಘದ ಸದಸ್ಯರು, ಆಶಾ ಕಾರ್ಯಕರ್ತೆಯರು, ಗ್ರಾಪಂ ಸಿಬ್ಬಂದಿ ವರ್ಗ ಹಾಜರಿದ್ದರು.

ಫೋಟೋ: 11 ಹೆಚ್‌ಎಸ್‌ಎ 4

ಹೊಸಕೋಟೆ ತಾಲೂಕಿನ ನೆಲವಾಗಿಲು ಗ್ರಾಪಂನಲ್ಲಿ ನಡೆದ ನರೇಗಾ ಸ್ತ್ರೀ ಚೇತನ ಅಭಿಯಾನದಲ್ಲಿ ನರೇಗಾದಲ್ಲಿ ನೂರು ದಿನ ಕೂಲಿ ಪೂರೈಸಿದ ಮಹಿಳೆಯರಿಗೆ ಇಒ ಡಾ. ನಾರಾಯಣಸ್ವಾಮಿ ಅಭಿನಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!