ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಬಿಜಿಎಸ್ ಶಿಕ್ಷಣ ಸಂಸ್ಥೆಯಿಂದ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಚಿಣ್ಣರ ಜಾಣರ ಜಗುಲಿ ಎನ್ನುವ ಮಕ್ಕಳ ಹರಟೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಂದು ಮಗುವಿನಲ್ಲಿಯೂ ಒಂದೊಂದು ಪ್ರತಿಭೆಯಿದೆ. ಮಕ್ಕಳ ಸುಪ್ತ ಪ್ರತಿಭೆ ವಿಕಾಸಗೊಳ್ಳಲು ಅಗತ್ಯ ವೇದಿಕೆಗಳನ್ನು ಶಾಲೆಗಳು ಒದಗಿಸಬೇಕು. ಕಲಿಕೆಯೊಂದೇ ಶಿಕ್ಷಣದ ಗುರಿಯಲ್ಲ. ಮಕ್ಕಳು ಸಾಂಸ್ಕೃತಿಕ ಮತ್ತು ಕ್ರೀಡಾಪಟುಗಳಾಗಿ ಹೊರಹೊಮ್ಮಿದಾಗ ನಾವು ನಮ್ಮ ಮಕ್ಕಳಿಗೆ ನಿಜವಾದ ಶಿಕ್ಷಣ ನೀಡಿದಂತಾಗುತ್ತದೆ ಎಂದರು.ಹರಟೆ ಕಾರ್ಯಕ್ರಮದಲ್ಲಿ ಮಕ್ಕಳು ಭಾಗವಹಿಸುವುದರಿಂದ ಮಕ್ಕಳಲ್ಲಿ ವಿಚಾರಶೀಲತೆ ಬೆಳೆಯುವುದಲ್ಲದೆ ಮಕ್ಕಳನ್ನು ವೇದಿಕೆಗೆ ಸಜ್ಜುಗೊಳಿಸಿದ ಶಿಕ್ಷಕ ವರ್ಗವೂ ಬೌದ್ದಿಕವಾಗಿ ವಿಕಸನಗೊಳ್ಳುತ್ತದೆ. ಶಿಕ್ಷಕರು ಮತ್ತು ಮಕ್ಕಳನ್ನು ಗಟ್ಟಿಗೊಳಿಸುವ ಹರಟೆ ಕಾರ್ಯಕ್ರಮಗಳು ನಾಡಿನ ಎಲ್ಲಾ ಶಾಲಾ-ಕಾಲೇಜುಗಳಲ್ಲೂ ನಡೆಯುವಂತಾಗಬೇಕು. ಪೋಷಕರು, ಶಿಕ್ಷಕರು ಮತ್ತು ಸಮಾಜ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಉತ್ತೇಜಿಸುವ ಕೆಲಸ ಮಾಡುವಂತೆ ತಿಳಿಸಿದರು.
ಹೇಮಗಿರಿ ಶಾಖಾ ಮಠದ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕೇವಲ ಅಂಕ ಗಳಿಕೆಯಷ್ಟೇ ಮುಖ್ಯವಲ್ಲ. ಸಂಸ್ಕಾರ ಮುಖ್ಯ. ಬಾಲಗಂಗಾಧರನಾಥ ಸ್ವಾಮೀಜಿಗಳು ಸಮಾಜಕ್ಕೆ ನೀಡಿದ ಶಿಕ್ಷಣ ಮತ್ತು ಸಂಸ್ಕಾರದ ಸಂದೇಶವನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದರು.
ಕಾರ್ಯಕ್ರಮದಲ್ಲಿ ವಕೀಲ ಚಟ್ಟಂಗೆರೆ ಬಿ.ನಾಗೇಶ್, ಕುರುಬಹಳ್ಳಿ ನಾಗೇಶ್, ಬಿಜಿಎಸ್ ಸಂಸ್ಥೆಯ ನಿರ್ದೇಶಕ ಎಸ್.ಸಿ.ವಿಜಯಕುಮಾರ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಎಂ.ಕೆ.ಹರಿಚರಣತಿಲಕ್, ಕೆ.ಆರ್.ನೀಲಕಂಠ, ಪತ್ರಕರ್ತರಾದ ಬಳ್ಳೇಕೆರೆ ಮಂಜುನಾಥ್, ಮೊಸಳೆ ಕೊಪ್ಪಲು ದಿನೇಶ್ ಸೇರಿದಂತೆ ಸಂಸ್ತೆಯ ಶಿಕ್ಷಕ ವೃಂದ ಹಾಗೂ ಪೋಷಕ ವೃಂದದವರು ಉಪಸ್ಥಿತರಿದ್ದರು.