ಸಿದ್ದಾಪುರ: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ರಾಷ್ಟ್ರದ ಉಳಿವಿಗೆ ಅಗತ್ಯವಾಗಿದೆ. ಪುನಃ ದೇಶದ ಪ್ರಧಾನಿ ಆಗಬೇಕು ಎಂದು ಭಾರತದ ಪ್ರಜೆಗಳು ಮಾತ್ರ ಅಲ್ಲ, ಇಡೀ ವಿಶ್ವದ ನಾಯಕರು ಹೇಳುತ್ತಿದ್ದಾರೆ. ವಿಕಸಿತ ಭಾರತಕ್ಕಾಗಿ ಅವರ ಕೈಬಲಪಡಿಸಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಲೋಕಸಭಾ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಸಮಾವೇಶ ಉದ್ಘಾಟಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಅವರು, ಕಾರ್ಯಕರ್ತರು ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೇ ವ್ಯಕ್ತಿಗಿಂತ ಪಕ್ಷ ಮುಖ್ಯ. ಪಕ್ಷಕ್ಕಿಂತ ದೇಶ ಮುಖ್ಯ ಎನ್ನುವುದನ್ನು ಮನವರಿಕೆ ಮಾಡಿಕೊಂಡು ಬಿಜೆಪಿಯನ್ನು ಗೆಲ್ಲಿಸುವುದಕ್ಕೆ ಪ್ರಯತ್ನಿಸಬೇಕು ಎಂದರು.
ಜೆಡಿಎಸ್ ಮುಖಂಡ ಉಪೇಂದ್ರ ಪೈ ಮಾತನಾಡಿ, ಜೆಡಿಎಸ್‌ನ ಹಿರಿಯರಾದ ಹಾಗೂ ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ ಬಿಜೆಪಿಯೊಂದಿಗೆ ಸಕ್ರಿಯವಾಗಿ ಪಾಲ್ಗೊಂಡು ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ ಎಂದರು.ಮಾರುತಿ ನಾಯ್ಕ ಹೊಸೂರು, ಗುರುಪ್ರಸಾದ ಹೆಗಡೆ, ಪ್ರಶಾಂತ ನಾಯ್ಕ, ನಂದನ ಬೋರ್ಕರ್, ಇಲಿಯಾಸ್ ಸಾಬ್, ಎಂ.ಜಿ. ಹೆಗಡೆ ಗೆಜ್ಜೆ, ಸುಮನಾ ಕಾಮತ್, ನೇತ್ರಾವತಿ ನಾಯ್ಕ, ಮಾದೇವಿ ಗೌಡ, ಕೆ.ಬಿ. ನಾಯ್ಕ ಇತರರಿದ್ದರು.
ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ತಿಮ್ಮಪ್ಪ ಎಂ.ಕೆ. ಸ್ವಾಗತಿಸಿದರು. ಮಹಾಬಲೇಶ್ವರ ಹೆಗಡೆ ವಂದಿಸಿದರು. ತೋಟಪ್ಪ ನಾಯ್ಕ ನಿರ್ವಹಿಸಿದರು.