ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಗಟ್ಟಿಗೊಳಿ

KannadaprabhaNewsNetwork |  
Published : Jan 22, 2026, 01:30 AM IST
ಹೊಳಲ್ಕೆರೆ ಮಂಡಲದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ. | Kannada Prabha

ಸಾರಾಂಶ

ಪ್ರತಿ ಬೂತ್‍ನಲ್ಲಿಯೂ ಪಕ್ಷದ ಕಾರ್ಯಕರ್ತರನ್ನು ಪ್ರೀತಿ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಗಟ್ಟಿಗೊಳಿಸುವಂತೆ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ನೂತನ ಅಧ್ಯಕ್ಷರಿಗೆ ಕರೆ ನೀಡಿದರು.

ಹೊಳಲ್ಕೆರೆ: ಪ್ರತಿ ಬೂತ್‍ನಲ್ಲಿಯೂ ಪಕ್ಷದ ಕಾರ್ಯಕರ್ತರನ್ನು ಪ್ರೀತಿ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಗಟ್ಟಿಗೊಳಿಸುವಂತೆ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ನೂತನ ಅಧ್ಯಕ್ಷರಿಗೆ ಕರೆ ನೀಡಿದರು.

ಬಿಜೆಪಿ ಹೊಳಲ್ಕೆರೆ ಮಂಡಲ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸಾಮಾನ್ಯ ಕಾರ್ಯಕರ್ತನನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷನಾಗಿ ಮಾಡುವ ಪಕ್ಷ ಯಾವುದಾದರೂ ಇದ್ದರೆ ಅದು ಭಾರತೀಯ ಜನತಾಪಾರ್ಟಿ ಮಾತ್ರ. ಹತ್ತು ವರ್ಷಗಳ ನಂತರ ರಾಮಗಿರಿ ಕುಮಾರಣ್ಣನವರಿಗೆ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಲಾಗಿದೆ. ಆಲದ ಮರದ ರೀತಿಯಲ್ಲಿ ಬೆಳೆದಿರುವ ಪಕ್ಷದ ಅಡಿಯಲ್ಲಿ ಕೆಲಸ ಮಾಡುತ್ತಿರುವ ಕಾರ್ಯಕರ್ತರು ಆರು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಪಕ್ಷವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವಂತೆ ಮನವಿ ಮಾಡಿದರು.

ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್ ಮಾತನಾಡಿ, ಕುಟುಂಬ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್‍ನಿಂದ ದೇಶಕ್ಕೆ ಭವಿಷ್ಯವಿಲ್ಲ. ನಮ್ಮ ಪಕ್ಷ ಒಂದು ಕುಟುಂಬಕ್ಕೆ ಸೀಮಿತವಾಗಿಲ್ಲ. ಸಾಮಾನ್ಯ ಕಾರ್ಯಕರ್ತನಿಗೂ ಅಧಿಕಾರ ನೀಡುತ್ತದೆ. ಹಾಗಾಗಿ ಬಿಜೆಪಿ. ನಂ.ಒನ್ ಪಾರ್ಟಿ ಎಂದು ಹರ್ಷವ್ಯಕ್ತಪಡಿಸಿದರು.

ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ಮುಂಬರುವ ಜಿಪಂ, ತಾಪಂ, ಗ್ರಾಪಂ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷ ಅಧಿಕಾರವನ್ನು ಹಿಡಿಯಬೇಕಾಗಿರುವುದರಿಂದ ಕಾರ್ಯಕರ್ತರು ಈಗಿನಿಂದಲೇ ಸಿದ್ಧರಾಗಬೇಕು ಎಂದು ಕರೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಹೊಳಲ್ಕೆರೆ ಮಂಡಲ ನೂತನ ಅಧ್ಯಕ್ಷ ಡಿ.ಬಿ.ಕುಮಾರಣ್ಣ, ಭರಮಸಾಗರ ಮಂಡಲ ಅಧ್ಯಕ್ಷ ಎನ್.ಟಿ.ಬಸವರಾಜ್, ಮಾಜಿ ಮಂಡಲ ಅಧ್ಯಕ್ಷ ಸಿದ್ದೇಶ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್, ಮಲ್ಲಿಕಾರ್ಜುನ್, ಅನಿತ್‍ಕುಮಾರ್, ಮಹೇಶಣ್ಣ, ತಿಪ್ಪೇಸ್ವಾಮಿ, ಪಾರ್ವತಮ್ಮ, ಪುರಸಭೆ ಮಾಜಿ ಸದಸ್ಯರುಗಳಾದ ಆರ್.ಎ.ಅಶೋಕ್, ಮುರುಗೇಶ್, ಮಲ್ಲಿಕಾರ್ಜುನ್ ಮತ್ತಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬ್ಯಾಲೆಟ್‌ನಲ್ಲಿ ಮತದಾನ ನಡೆಸಿದರೆ ತಪ್ಪೇನು? ರಾಜ್ಯ ಚುನಾವಣಾ ಆಯುಕ್ತ
ಜಾಗತಿಕ ಸವಾಲಿಗೆ ನವೋದ್ಯಮ ಉತ್ತರ : ರಾಧಾಕೃಷ್ಣನ್‌