ಪಕ್ಷದ ಸಂಘಟನೆ ತಳಮಟ್ಟದಿಂದ ಬಲಪಡಿಸಿ: ಜಿ.ಟಿ. ನಾಯ್ಕ

KannadaprabhaNewsNetwork |  
Published : Oct 07, 2026, 02:30 AM IST
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಜಿ.ಟಿ. ನಾಯ್ಕ ಅವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವುದು, ಕಾರ್ಯಕರ್ತರನ್ನು ಸಕ್ರಿಯವಾಗಿ ಸಂಘಟಿಸುವುದು ಹಾಗೂ ಪಕ್ಷದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಯಲ್ಲಾಪುರ: ಜಿಲ್ಲಾ ಕಾಂಗ್ರೆಸ್‌ನ ನೂತನ ಅಧ್ಯಕ್ಷ ಜಿ.ಟಿ. ನಾಯ್ಕ ಅವರ ಅಧ್ಯಕ್ಷತೆಯಲ್ಲಿ ಸಂಘಟನಾ ಸೃಜನ ೨.೦ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಮಂಗಳವಾರ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಜಿ.ಟಿ. ನಾಯ್ಕ ಅವರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು. ಅಭಿನಂದನೆ ಸ್ವೀಕರಿಸಿದ ಜಿ.ಟಿ. ನಾಯ್ಕ ಪಕ್ಷದ ಸಂಘಟನೆ, ಕಾರ್ಯಕರ್ತರ ಪಾತ್ರ ಹಾಗೂ ಸಂಘಟನಾ ಸೃಜನ ೨.೦ ಕಾರ್ಯಕ್ರಮದ ಉದ್ದೇಶಗಳ ಕುರಿತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವುದು, ಕಾರ್ಯಕರ್ತರನ್ನು ಸಕ್ರಿಯವಾಗಿ ಸಂಘಟಿಸುವುದು ಹಾಗೂ ಪಕ್ಷದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್. ಭಟ್ಟ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ರಾಥೋಡ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎನ್.ಕೆ. ಭಟ್ಟ, ಡಾ. ರವಿ ಭಟ್ಟ ಬರಗದ್ದೆ, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ನರಸಿಂಹ ನಾಯ್ಕ, ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಉಲ್ಲಾಸ ಶಾನಭಾಗ, ಹಿರಿಯರಾದ ಪ್ರೇಮಾನಂದ ನಾಯ್ಕ, ಟಿ.ಸಿ. ಗಾಂವ್ಕರ್, ಸೇವಾದಳದ ಜಿಲ್ಲಾಧ್ಯಕ್ಷ ಪ್ರಶಾಂತ ಸಭಾಹಿತ, ಮಹಿಳಾ ಕಾಂಗ್ರೆಸ್‌ನ ಸರಸ್ವತಿ ಗುನಗಾ, ಸುಜಾತಾ ಸಿದ್ಧಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಫೈರೋಜ್ ಶೇಖ್, ನಗರ ಘಟಕದ ಅಧ್ಯಕ್ಷ ಸತೀಶ ನಾಯ್ಕ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯುತ್‌ ತಾರತಮ್ಯ ಆರೋಪ, ರೈತರ ಪ್ರತಿಭಟನೆ
ನಾಯಕತ್ವ ಬೆಳೆಸಲು ಯುವ ಸಂಸತ್ ಸಹಕಾರಿ: ಎಂ.ಆರ್. ಕುಲಕರ್ಣಿ