ಸ್ವಾಮಿ ಕೈ ಬಲಪಡಿಸಿ ಶಾಸಕರಾಗಲು ಶ್ರಮಿಸಿ: ಶಾಸಕ ಅಶ್ವತ್ಥ ನಾರಾಯಣ

KannadaprabhaNewsNetwork |  
Published : Apr 23, 2026, 01:45 AM IST
22ಕೆಎಂಎನ್ ಡಿ18 | Kannada Prabha

ಸಾರಾಂಶ

ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮುಂದಿನ ಚುನಾವಣೆಯಲ್ಲಿ ಮುಖಂಡ ಎಸ್.ಪಿ.ಸ್ವಾಮಿ ಅವರ ಕೈಬಲಪಡಿಸಿ ಶಾಸಕರನ್ನಾಗಿ ಆಯ್ಕೆ ಮಾಡಲು ಶ್ರಮಿಸಬೇಕು ಮಾಜಿ ಉಪಮುಖ್ಯಮಂತ್ರಿ, ಶಾಸಕ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಕಾರ್ಯಕರ್ತರು, ಮುಖಂಡರಿಗೆ ತಿಳಿಸಿದರು.

ಕನ್ನಡಪ್ರಭ ವಾರ್ತೆ ಮದ್ದೂರುಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮುಂದಿನ ಚುನಾವಣೆಯಲ್ಲಿ ಮುಖಂಡ ಎಸ್.ಪಿ.ಸ್ವಾಮಿ ಅವರ ಕೈಬಲಪಡಿಸಿ ಶಾಸಕರನ್ನಾಗಿ ಆಯ್ಕೆ ಮಾಡಲು ಶ್ರಮಿಸಬೇಕು ಮಾಜಿ ಉಪಮುಖ್ಯಮಂತ್ರಿ, ಶಾಸಕ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಕಾರ್ಯಕರ್ತರು, ಮುಖಂಡರಿಗೆ ತಿಳಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಎಸ್.ಪಿ.ಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳದಲ್ಲಿ ಪಾಲ್ಗೊಂಡ ಉದ್ಯೋಗಕಾಂಕ್ಷಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.ಕಳೆದ ಹಲವಾರು ವರ್ಷಗಳಿಂದಲೂ ತಾಲೂಕಿನಾದ್ಯಂತ ನಿರಂತರ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಕೊಂಡು ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿರುವ ಎಸ್.ಪಿ.ಸ್ವಾಮಿ ಅವರ ಕಾರ್ಯ ಶ್ಲಾಘನೀಯ. ಮುಂದಿನ ವಿಧಾನಸಭೆ ಚುನಾವಣೆಗೆ ಕಾರ್ಯಕರ್ತರು, ಮುಖಂಡರು ಪ್ರತಿ ಗ್ರಾಮಗಳತ್ತ ತೆರಳಿ ಪಕ್ಷ ಸಂಘಟನೆ ಜತೆಗೆ ಅವರಿಗೆ ಶಕ್ತಿ ತುಂಬುವ ಕೆಲಸವಾಗಬೇಕು ಎಂದು ಕರೆ ನೀಡಿದರು. ರಾಜ್ಯದ ರಾಜಕೀಯ ನಿರ್ಧಾರ ಆಗುವುದು ಮಂಡ್ಯ ಜಿಲ್ಲೆಯಿಂದಲೇ ಎಂಬುದನ್ನು ಅರಿತು ಕಾರ್ಯಕರ್ತರು ತಮ್ಮಲ್ಲಿರುವ ಬಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷವನ್ನು ಅಧಿಕಾರಕ್ಕೆ ತರಲು ನಿರಂತರವಾಗಿ ಶ್ರಮಿಸಬೇಕು ಎಂದು ಕೋರಿದರು. ಜತೆಗೆ ಪ್ರಾಮಾಣಿಕವಾಗಿ ಪ್ರಯತ್ನ ನಡೆಸುತ್ತಿರುವ ಸ್ವಾಮಿಯವರ ಕೈಬಲಪಡಿಸಿ ಶಾಸಕರನ್ನಾಗಿ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು. ಇದೇ ವೇಳೆ ಬೃಹತ್ ಉದ್ಯೋಗ ಮೇಳದಲ್ಲಿ ಉದ್ಯೋಗ ಗಿಟ್ಟಿಸಿಕೊಂಡವರಿಗೆ ಪ್ರಮಾಣ ಪತ್ರ ವಿತರಿಸಿದರು. ನಂತರ ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಅವರು ಅಪಾರ ಸಂಖ್ಯೆಯ ಕಾರ್ಯಕರ್ತರು, ಮುಖಂಡರು ರವರಿಂದ ಬೃಹತ್‌ಕಾರದ ಕೇಕ್ ಕತ್ತಿರಿಸಿ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.

ಈ ವೇಳೆ ಬಿಜೆಪಿ ಮುಖಂಡರಾದ ಡಾ.ಸಿದ್ಧರಾಮಯ್ಯ, ಇಂಡುವಾಳು ಸಚ್ಚಿದಾನಂದ, ಅಶೋಕ್‌ ಜಯರಾಂ, ಜಿಪಂ ಮಾಜಿ ಸದಸ್ಯರಾದ ಬೋರಯ್ಯ, ಕೃಷ್ಣೇಗೌಡ, ಮರಿಹೆಗಡೆ, ಮನುಕುಮಾರ್, ತಾಲೂಕು ಬಿಜೆಪಿ ಅಧ್ಯಕ್ಷ ಸಿ.ಕೆ.ಸತೀಶ್, ಯುವ ಮೋರ್ಚಾ ತಾಲೂಕು ಅಧ್ಯಕ್ಷ ಸಿ.ಡಿ.ಸಂತೋಷ್, ಉಪಾಧ್ಯಕ್ಷ ಎಸ್.ಕೆ.ಅಭಿಷೇಕ್‌ಗೌಡ, ನಾಗೇಶ್, ಮಧು, ಸುಧಾಕರ್, ಹಾಗಲಹಳ್ಳಿ ರಘು ಇತರರಿದ್ದರು.157 ಮಂದಿಗೆ ಸ್ಥಳದಲ್ಲೇ ಉದ್ಯೋಗ ನೇಮಕಾತಿ ಪತ್ರ

ಕನ್ನಡಪ್ರಭ ವಾರ್ತೆ ಮದ್ದೂರುಮನ್ಮುಲ್ ನಿರ್ದೇಶಕ, ಬಿಜೆಪಿ ಮುಖಂಡ ಎಸ್‍.ಪಿ.ಸ್ವಾಮಿ ಹುಟ್ಟುಹಬ್ಬದ ಅಂಗವಾಗಿ ನಡೆದ ಬೃಹತ್ ಉದ್ಯೋಗ ಮೇಳದಲ್ಲಿ 468 ಉದ್ಯೋಗಾಕ್ಷಿಗಳ ಪೈಕಿ 157 ಮಂದಿಯನ್ನು ಸ್ಥಳದಲ್ಲೇ ಆಯ್ಕೆ ಮಾಡಿ ಉದ್ಯೋಗ ನೇಮಕಾತಿ ಪತ್ರ ವಿತರಿಸಲಾಯಿತು.

ಮಳವಳ್ಳಿ ರಸ್ತೆಯ ಬಿಜೆಪಿ ಕಚೇರಿಯಲ್ಲಿ ಶ್ರೀನಿಧಿಗೌಡ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸೇವಾ ಟ್ರಸ್ಟ್, ಅಕ್ಷರ ಫೌಂಡೇಶನ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಪದವಿ, ಇಂಜಿನಿಯರಿಂಗ್, ಡಿಪ್ಲೋಮೋ, ಐಟಿಐ, ಎಸ್ಸೆಸ್ಸೆಲ್ಸಿ, ಪಿಯುಸಿ ಸೇರಿದಂತೆ ವಿವಿಧ ಕೋರ್ಸ್‌ಗಳನ್ನು ಪೂರ್ಣಗೊಳಿಸಿದವರು ಮೇಳಕ್ಕೆ ಆಗಮಿಸಿದ್ದರು. ಮೂವರು ಅಂಗವಿಕಲರು ಸೇರಿದಂತೆ 157 ಮಂದಿ ಯುವಜನರು ಸ್ಥಳದಲ್ಲಿಯೇ ನೇಮಕಾತಿ ಪತ್ರ ದೊಂದಿಗೆ ಉದ್ಯೋಗ ಪಡೆದುಕೊಂಡರು. 151 ಮಂದಿ ಉದ್ಯೋಗ ಆಕಾಂಕ್ಷಿಗಳಿಗೆ ಎರಡನೇ ಹಂತದ ಉದ್ಯೋಗಕ್ಕೆ ಆಯ್ಕೆ ಮಾಡಲಾಯಿತು. ಎಲ್ಐಸಿ, ಆಕ್ಸಿಸ್ ಬ್ಯಾಂಕ್, ಎಸ್. ಬಿ .ಐ, ಎಚ್. ಡಿ .ಎಫ್. ಸಿ. ಬ್ಯಾಂಕ್, ಕೋಟಕ್, ಟಿವಿಎಸ್, ಎನ್. ಟಿ .ಟಿ .ಎಫ್, ಅರವಿಂದ್, ಟಾಟಾ ಸ್ಕೈ ಸೇರಿದಂತೆ ರಾಜ್ಯದ 65 ವಿವಿಧ ಜಿಲ್ಲೆಗಳ ಹೆಸರಾದಂತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದವು.

ಈ ವೇಳೆ ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಮಾತನಾಡಿ, ಕೇವಲ ಉದ್ಯೋಗ ಪಡೆಯುವುದು ಮಾತ್ರವಲ್ಲದೆ ನಾವು ಕೆಲಸ ನಿರ್ವಹಿಸುವ ಕಂಪನಿಗಳಿಗೆ ನಿಷ್ಠೆಯಿಂದ ದುಡಿಯಬೇಕು ಆಗಮಾತ್ರ ಕಂಪನಿಯ ಅಭಿವೃದ್ಧಿ ಜೊತೆಗೆ ನಿಮ್ಮ ಮತ್ತು ಕುಟುಂಬದ ನಿರ್ವಣೆಗೆ ಸಹಕಾರಿಯಾಗುತ್ತದೆ ಎಂದು ಕಿವಿಮಾತು ಹೇಳಿದರು. ಈ ವೇಳೆ ಉದ್ಯೋಗ ಮೇಳದ ಆಯೋಜಕಕುಮಾರ್, ಅಕ್ಷರಂ ಪೌಂಡೇಶನ್ ಅಕ್ಷರಂ ವೆಂಕಟೇಶ್, ಹಾಗಲಹಳ್ಳಿ ರಘು,ಮಧು, ಅಭಿಷೇಕ್, ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳಲ್ಲಿ ಕಾನೂನಿನ ಅರಿವು ಮೂಡಿಸುವ ಅವಶ್ಯಕತೆ ಇದೆ
ಗುಂಡ್ಲುಪೇಟೆಯ ಕಣಿಯರ ಬೀದೀಲಿ ರಸ್ತೆ ಮೇಲೆ ಕೊಳಚೆ ನೀರು ಹರಿವು!