ಕನ್ನಡಪ್ರಭ ವಾರ್ತೆ ಹಾಸನ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೇರಾ ಯುವ ಭಾರತ್ ಸಹಯೋಗದಲ್ಲಿಂದು ಹಾಸನಾಂಬೆ ಕಲಾ ಕ್ಷೇತ್ರದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಹುದೊಡ್ಡ ಮಾನವ ಸಂಪನ್ಮೂಲ ಹೊಂದಿರುವ ನಮ್ಮ ದೇಶದಲ್ಲಿ ಶೇ.67ರಷ್ಟು 40 ವರ್ಷದೊಳಗಿನ ಯುವ ಜನತೆ ಹೊಂದಿರುವುದು ಹೆಮ್ಮೆಯ ವಿಷಯ ಎಂದು ತಿಳಿಸಿದರು.
ನಮ್ಮ ದೇಶ ಪ್ರಪಂಚದ ನಾನಾ ರಾಷ್ಟ್ರಗಳಿಗೆ ಮಾನವ ಸಂಪನ್ಮೂಲ ರಪ್ತು ಮಾಡುವ ಸ್ಥಿತಿಯಲ್ಲಿರುವುದು ಸಂತೋಷ ತರುತ್ತದೆ. ಭಾರತೀಯರು ಎಲ್ಲಾ ರಂಗಗಳಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ, ಯುವ ಜನತೆ ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಿ ಪ್ರಜ್ವಲಿಸಿ ಎಂದು ಶುಭ ಹಾರೈಸಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಎಚ್.ಎಲ್.ಮಲ್ಲೇಶ್ ಗೌಡ ಮಾತನಾಡಿ, ಯುವ ಜನತೆಯ ಮೂಲಕ ದೇಶವನ್ನು ಎತ್ತರದ ಸ್ಥಾನದಲ್ಲಿ ಕಲ್ಪಿಸಿಕೊಳ್ಳುತ್ತಿದ್ದೇವೆ, ಈ ನಿಟ್ಟಿನಲ್ಲಿ ಯುವ ಜನತೆ ಪ್ರಾಮಾಣಿಕ ಪ್ರಯತ್ನ ಮಾಡಿದರೆ ಭಾರತ ವಿಶ್ವವನ್ನೇ ಆಳಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ತಮ್ಮನ್ನು ಗಟ್ಟಿಗೊಳಿಸಿಗೊಂಡು ದೇಶ ಕಟ್ಟಲು ಮುಂದಾಗಬೇಕು ಎಂದರಲ್ಲದೆ, ತಮ್ಮ ಕುಟುಂಬ ಮತ್ತು ಗ್ರಾಮವನ್ನು ಪ್ರೀತಿಸುವುದರ ಮೂಲಕ ದೇಶ ಪ್ರೀತಿ ಹಂಚುವ ಕಡೆಗೆ ಸಾಗಲಿ ಎಂದರು.
ಜಿಲ್ಲಾ ನೌಕರರ ಸಂಘದ ಕಾರ್ಯದರ್ಶಿ ಲಕ್ಷ್ಮೀಕಾಂತ್, ರಾಷ್ಟ್ರಪ್ರಶಸ್ತಿ ವಿಜೇತರಾದ ಬಿ.ಟಿ ಮಾನವ, ಹಿರಿಯ ಕಲಾವಿದರಾದ ಗ್ಯಾರಂಟಿ ರಾಮಣ್ಣ, ಶೇಖರಪ್ಪ, ಸಮಾಜ ಸೇವಕರಾದ ಕಟ್ಟಾಯ ಶಿವಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಚಂದ್ರಶೇಖರ್ ಉಪಸ್ಥಿತರಿದ್ದರು.