ಸರ್ಕಾರಿ ಶಾಲೆಗಳ ಬಲವರ್ಧನೆ ನಮ್ಮೆಲ್ಲರ ಜವಾಬ್ದಾರಿ

KannadaprabhaNewsNetwork |  
Published : Oct 26, 2026, 01:30 AM IST
25ಎಚ್ಎಸ್ಎನ್7 : ರಾಮನಾಥಪುರ ಹೋಬಳಿ ಹನ್ಯಾಳು ಗ್ರಾಮದಲ್ಲಿ ಮಕ್ಕಳ ಮನೆ ಶಾಲೆಯ ಶಿಕ್ಷಕಿಯರ ಜೊತೆಯಲ್ಲಿ ಶಾಸಕರ ಪತ್ನಿ ತಾರಾಮಂಜು. | Kannada Prabha

ಸಾರಾಂಶ

ರಾಮನಾಥಪುರ ಹೋಬಳಿಯಲ್ಲಿರುವ ಶಾಸಕರ ಸ್ವಗ್ರಾಮ ಹನ್ಯಾಳು ಗ್ರಾಮದಲ್ಲಿರುವ ಮಕ್ಕಳ ಮನೆ ಶಾಲೆಯಲ್ಲಿ ತಾಲೂಕಿನ ಮಕ್ಕಳ ಮನೆ ಶಿಕ್ಷಕಿಯರ ಜೊತೆಯಲ್ಲಿ ಸಂವಾದದ ನಂತರ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹನ್ಯಾಳು ಹಿರಿಯ ವಿದ್ಯಾರ್ಥಿಗಳ ಬಳಗದ ಕೊಡುಗೆ ರಾಜ್ಯಕ್ಕೆ ಮಾದರಿಯಾಗಿದೆ. ಅರಕಲಗೂಡು ತಾಲ್ಲೂಕಿನಾದ್ಯಂತ ಪ್ರಗತಿಪರ ಸಾಮಾಜಿಕ ಕಳಕಳಿಯ ವಿಭಿನ್ನ ಹಾಗೂ ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಹನ್ಯಾಳು ಹಿರಿಯ ವಿದ್ಯಾರ್ಥಿಗಳ ಬಳಗ ಇದೀಗ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಮತ್ತೊಂದು ಮಹತ್ವದ ಕೊಡುಗೆ ನೀಡಿದೆ ಎಂದರು.

ಕನ್ನಡಪ್ರಭ ವಾರ್ತೆ ರಾಮನಾಥಪುರ

ಗ್ರಾಮೀಣ ಮಕ್ಕಳ ಭವಿಷ್ಯ ರೂಪಿಸುವುದು ನಮ್ಮೆಲ್ಲರ ಕರ್ತವ್ಯ ಎಂಬ ಆಶಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಹನ್ಯಾಳು ಹಿರಿಯ ವಿದ್ಯಾರ್ಥಿಗಳ ಬಳಗವು ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನಲ್ಲಿ ಸಾಮಾಜಿಕ ಹೊಣೆಗಾರಿಕೆ ಮತ್ತು ಸಮುದಾಯದ ಸಹಭಾಗಿತ್ವಕ್ಕೆ ಹೊಸ ಮಾದರಿಯನ್ನು ನಿರ್ಮಿಸಿದೆ ಎಂದು ಶಾಸಕರ ಎ. ಮಂಜು ಅವರ ಪತ್ನಿ ತಾರಾಮಂಜು ತಿಳಿಸಿದರು. ರಾಮನಾಥಪುರ ಹೋಬಳಿಯಲ್ಲಿರುವ ಶಾಸಕರ ಸ್ವಗ್ರಾಮ ಹನ್ಯಾಳು ಗ್ರಾಮದಲ್ಲಿರುವ ಮಕ್ಕಳ ಮನೆ ಶಾಲೆಯಲ್ಲಿ ತಾಲೂಕಿನ ಮಕ್ಕಳ ಮನೆ ಶಿಕ್ಷಕಿಯರ ಜೊತೆಯಲ್ಲಿ ಸಂವಾದದ ನಂತರ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹನ್ಯಾಳು ಹಿರಿಯ ವಿದ್ಯಾರ್ಥಿಗಳ ಬಳಗದ ಕೊಡುಗೆ ರಾಜ್ಯಕ್ಕೆ ಮಾದರಿಯಾಗಿದೆ. ಅರಕಲಗೂಡು ತಾಲ್ಲೂಕಿನಾದ್ಯಂತ ಪ್ರಗತಿಪರ ಸಾಮಾಜಿಕ ಕಳಕಳಿಯ ವಿಭಿನ್ನ ಹಾಗೂ ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಹನ್ಯಾಳು ಹಿರಿಯ ವಿದ್ಯಾರ್ಥಿಗಳ ಬಳಗ ಇದೀಗ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಮತ್ತೊಂದು ಮಹತ್ವದ ಕೊಡುಗೆ ನೀಡಿದೆ ಎಂದರು. ರಾಮನಾಥಪುರ ಹೋಬಳಿ ಸೇರಿದಂತೆ ಕ್ಷೇತ್ರದ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ವಿನೂತನ ಪ್ರಯತ್ನವಾಗಿದೆ. ಸರ್ಕಾರಿ ಶಾಲೆಗಳ ಮಕ್ಕಳಿಗೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಕಲಿಕೆಗೆ ನೆರವಾಗುತ್ತಿರುವ ಈ ಕಾರ್ಯಕ್ರಮವು ರಾಜ್ಯಕ್ಕೆ ಮಾದರಿಯಾಗಿದೆ.ಮಕ್ಕಳ ಮನೆ – ಗ್ರಾಮೀಣ ಶಿಕ್ಷಣದ ಯಶೋಗಾಥೆ

ಶಾಸಕರಾದ ಎ. ಮಂಜು ಅವರ ಜನ್ಮದಿನದ ಪ್ರಯುಕ್ತ 2023ರಲ್ಲಿ ಹಿರಿಯ ವಿದ್ಯಾರ್ಥಿಗಳ ಬಳಗವು ಹನ್ಯಾಳು ಸರ್ಕಾರಿ ಶಾಲೆಯಲ್ಲಿ ‘ಮಕ್ಕಳ ಮನೆ’ ಪೂರ್ವ ಪ್ರಾಥಮಿಕ ಶಿಕ್ಷಣ ಕಾರ್ಯಕ್ರಮವನ್ನು ಆರಂಭಿಸಿತು. ಇಂದು ಈ ಯೋಜನೆಯು ಅರಕಲಗೂಡು ತಾಲ್ಲೂಕಿನ 20ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ವಿಸ್ತರಿಸಿದ್ದು, ಸುಮಾರು 527ಕ್ಕೂ ಹೆಚ್ಚು ಗ್ರಾಮೀಣ ಮಕ್ಕಳಿಗೆ ಎಲ್‌ಕೆಜಿ ಮತ್ತು ಯುಕೆಜಿ ಶಿಕ್ಷಣ ಒದಗಿಸುವ ಮೂಲಕ ಜನಪ್ರಿಯತೆ ಗಳಿಸಿದೆ. ಈ ಪ್ರಯತ್ನವು ಗ್ರಾಮೀಣ ವಿದ್ಯಾರ್ಥಿಗಳಿಗೆ ನೆರವಾಗುವುದರ ಜೊತೆಗೆ, ಯುವಜನತೆ ಮತ್ತು ಹಿರಿಯ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಪ್ರೇರಣೆ ನೀಡಿದೆ.ಶಾಸಕರಾದ ಎ ಮಂಜು ಅವರ ಹುಟ್ಟುಹಬ್ಬಕ್ಕೆ ಅದರಲ್ಲೂ ಓದಿದ ನನ್ನ ಸ್ವಗ್ರಾಮದ ಶಾಲೆಗೆ ಹಿರಿಯ ವಿದ್ಯಾರ್ಥಿಗಳ ಬಳಗದ ವತಿಯಿಂದ ಎಲ್.ಕೆ.ಜಿ- ಯು.ಕೆ.ಜಿ ಶಾಲೆ ನೀಡುತ್ತಿರುವುದು ತಾಲೂಕಿಗೆ ಮಾದರಿಯಾಗಿದ್ದು ಸರ್ಕಾರಿ ಶಾಲೆಗಳ ಬಲವರ್ಧನೆಗೆ ತಾಲೂಕಿನಾದ್ಯಂತ ಎಲ್ಲರೂ ಕೈ ಜೋಡಿಸುವಂತೆ ವಿನಂತಿಸಿದರು.ಹಿರಿಯ ವಿದ್ಯಾರ್ಥಿಗಳ ಬಳಗ ಹನ್ಯಾಳು ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ, ಅವುಗಳ ಗುಣಮಟ್ಟವನ್ನು ಖಾಸಗಿ ಶಾಲೆಗಳಿಗೆ ಸರಿಸಮನಾಗಿ ಬೆಳೆಸಲು ನೀಡುತ್ತಿರುವ ಸಹಕಾರವು ಹಾಸನ ಜಿಲ್ಲೆಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಅಭಿಪ್ರಾಯಪಟ್ಟರು. ಸರ್ಕಾರಿ ಶಾಲಾ ಅಭಿವೃದ್ಧಿಗೆ ಹಲವಾರು ವರ್ಷಗಳಿಂದ ನಾನು ಕೂಡ ಕೈ ಜೋಡಿಸಿದ್ದು ಜಿಲ್ಲೆಯ ಎಲ್ಲಾ ಗ್ರಾಮದ ಹಿರಿಯ ವಿದ್ಯಾರ್ಥಿಗಳು ತಮ್ಮ ತಮ್ಮ ಊರಿಗೆ ಕೈಲಾದಷ್ಟು ಸಹಾಯ ಮಾಡುವಂತೆ ವಿನಂತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಡಾನೆ ಹಾವಳಿ ತಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ತಾಲೂಕು ಟಿಎಪಿಎಂಎಸ್ ಅಧ್ಯಕ್ಷರಾಗಿ ತೋಟಿ ನಾಗರಾಜ್‌ ಆಯ್ಕೆ