ಚುನಾವಣೆ ಗೆಲುವಿಗೆ ಜೆಡಿಎಸ್ ಬಲವರ್ಧನೆ

KannadaprabhaNewsNetwork |  
Published : Nov 19, 2026, 01:15 AM IST
ಿಿಿ | Kannada Prabha

ಸಾರಾಂಶ

ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಯಲ್ಲಿ ಎನ್‌ಡಿಎಯನ್ನು ಅಧಿಕಾರಕ್ಕೆ ತರಲು, ಹಾಗೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ 11 ಸ್ಥಾನಗಳನ್ನು ಗೆಲ್ಲಲು ಜೆಡಿಎಸ್ ಪಕ್ಷವನ್ನು ಜಿಲ್ಲೆಯಾದ್ಯಂತ ಸದೃಢವಾಗಿ ಸಂಘಟನೆ ಮಾಡಲು ಕಾರ್ಯ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ತಾವು ಜಿಲ್ಲೆಯಾದ್ಯಂತ ಹಳ್ಳಿಹಳ್ಳಿಯಲ್ಲಿ ಪ್ರವಾಸ ಮಾಡುವುದಾಗಿ ಜೆಡಿಎಸ್‌ನ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಬೆಳಗುಂಬ ವೆಂಕಟೇಶ್ ಹೇಳಿದರು.

ಕನ್ನಡಪ್ರಭ ವಾರ್ತೆ, ತುಮಕೂರುಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಯಲ್ಲಿ ಎನ್‌ಡಿಎಯನ್ನು ಅಧಿಕಾರಕ್ಕೆ ತರಲು, ಹಾಗೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ 11 ಸ್ಥಾನಗಳನ್ನು ಗೆಲ್ಲಲು ಜೆಡಿಎಸ್ ಪಕ್ಷವನ್ನು ಜಿಲ್ಲೆಯಾದ್ಯಂತ ಸದೃಢವಾಗಿ ಸಂಘಟನೆ ಮಾಡಲು ಕಾರ್ಯ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ತಾವು ಜಿಲ್ಲೆಯಾದ್ಯಂತ ಹಳ್ಳಿಹಳ್ಳಿಯಲ್ಲಿ ಪ್ರವಾಸ ಮಾಡುವುದಾಗಿ ಜೆಡಿಎಸ್‌ನ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಬೆಳಗುಂಬ ವೆಂಕಟೇಶ್ ಹೇಳಿದರು.ಬುಧವಾರ ನಗರದ ಜಿಲ್ಲಾ ಜೆಡಿಎಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆ, ಇತ್ತೀಚೆಗೆ ನಡೆದ ಆಗ್ನೇಯ ಪದವಿಧರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿಗಳು ದಾಖಲೆ ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ. ಜಿ.ಪಂ, ತಾ.ಪಂ ಹಾಗೂ ವಿಧಾನಸಭಾ ಚುನಾವಣೆಯಲ್ಲೂ ಇದೇ ಫಲಿತಾಂಶ ಬರಲಿದ್ದು, ಎನ್‌ಡಿಎಅಧಿಕಾರ ಹಿಡಿಯುವುದು ಖಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಜಿಲ್ಲೆಯ ಎರಡೂ ಪಕ್ಷಗಳ ಶಾಸಕರು, ಮಾಜಿ ಶಾಸಕರು, ಲೂಕುಗಳ ಮುಖಂಡರ ವಿಶ್ವಾಸದೊಂದಿಗೆ ಜಿಲ್ಲೆಯಾದ್ಯಂತ ಪರಿಶಿಷ್ಟ ಜಾತಿ ಸಮುದಾಯವನ್ನು ಪಕ್ಷದ ಪರವಾಗಿ ಸಂಘಟನೆ ಮಾಡುವ ಕಾರ್ಯಕ್ರಮ ರೂಪಿಸಲಾಗಿದೆ. ಈ ಬಾರಿ ತಾವು ಜಿಲ್ಲಾ ಪಂಚಾಯ್ತಿ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಆಗಿದ್ದು ಊರ್ಡಿಗೆರೆ ಅಥವಾ ಹೊನ್ನುಡಿಕೆ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಬೆಳಗುಂಬ ವೆಂಕಟೇಶ್ ಹೇಳಿದರು.

ಈ ವೇಳೆ ಜೆಡಿಎಸ್‌ ಜಿಲ್ಲಾ ಕಾರ್ಯಧ್ಯಕ್ಷ ಟಿ.ಆರ್.ನಾಗರಾಜ್, ರಾಜ್ಯಉಪಾಧ್ಯಕ್ಷ ಸೋಲಾರ್‌ ಕೃಷ್ಣಮೂರ್ತಿ, ಭೈರೇಶ್, ರೇಖಾ ರಾಜ್‌ ಗೌಡ, ಮೋಹನ್‌ಕುಮಾರ್‌ ಮಧು, ಲಕ್ಷ್ಮೀ ನಾಯಕ್, ಪ್ರಮೋದ್‌ಗೌಡ, ತಾಹೇರಾ ಮೊದಲಾದವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳಾ ನಾಯಕತ್ವ ಪ್ರಜಾಪ್ರಭುತ್ವಕ್ಕೆ ಅಡಿಪಾಯ: ಸುಧಾ
‘ಸರ್ಕಾರವೇ ಮೊದಲ ಗ್ರಾಹಕ’ ಅಡಿ 8 ನವೋದ್ಯಮ