ಕನ್ನಡಪ್ರಭ ವಾರ್ತೆ ಉಡುಪಿ
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ದನ, ಎಮ್ಮೆ,ಕರು ಹಾಗೂ ಒಂಟೆಗಳನ್ನು ಅಕ್ರಮವಾಗಿ ದಾಸ್ತಾನು ಸಾಗಾಣಿಕೆ ಹಾಗೂ ವಧೆ ಮಾಡುವ ಸಾಧ್ಯತೆ ಇರುವುದರಿಂದ ಇವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ವಿವಿಧ ಅಧಿಕಾರಿಗಳನ್ನು ಒಳಗೊಂಡ ತಪಾಸಣಾ ತಂಡಗಳನ್ನು ರಚಿಸಲಾಗಿದೆ. ಇದಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿಕೊಂಡು ತಮ್ಮ ಕಾರ್ಯಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಪ್ರವೃತ್ತರಾಗಿರಬೇಕು ಎಂದರು.ಅನಧಿಕೃತ ಜಾನುವಾರು ಸಾಗಾಣಿಕೆಯಲ್ಲಿ ವಶಪಡಿಸಿಕೊಂಡ ಜಾನುವಾರುಗಳನ್ನು ಸಂರಕ್ಷಿಸಿ, ಹತ್ತಿರದ ಗೋಶಾಲೆಗೆ ಬಿಡಲು ಸಮೀಪದ ಗೋಶಾಲೆಗಳನ್ನು ಗುರುತಿಸುವಂತೆ ಹಾಗೂ ವಶಪಡಿಸಿಕೊಂಡ ಜಾನುವಾರುಗಳಿಗೆ ಅಗತ್ಯವಿರುವ ಚಿಕಿತ್ಸೆ ನೀಡಲು ಪಶುವೈದ್ಯಾಧಿಕಾರಿಗಳು ಸನ್ನದ್ಧರಾಗಿರಬೇಕು ಹಾಗೂ ಜಾನುವಾರುಗಳಿಗೆ ಅಗತ್ಯವಿರುವ ಮೇವು ಮತ್ತು ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.ತಾಲೂಕು ಮಟ್ಟದಲ್ಲಿ ತಹಸೀಲ್ದಾರ್‌ರು ಶಾಂತಿ ಸಭೆಗಳನ್ನು ನಡೆಸಬೇಕು. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿಯುತವಾಗಿ ಬಕ್ರೀದ್ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಎಲ್ಲಾ ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ನಗರಸಭೆ ಆಯುಕ್ತ ಮಹೇಶ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
...............24 ಗಂಟೆ ತಪಾಸಣೆ: ಎಸ್ಪಿಜಿಲ್ಲಾ ಪೋಲಿಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾತನಾಡಿ, ಜಿಲ್ಲಾದ್ಯಂತ ತಪಾಸಣಾ ಕೇಂದ್ರಗಳು ದಿನದ 24 ಗಂಟೆ ಕಾರ್ಯನಿರ್ವಹಿಸಲಿವೆ. ಈ ಕೇಂದ್ರಗಳು ಜಾನುವಾರು ಸಾಗಾಣಿಕೆ ಮಾಡುವ ಕುರಿತು ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಕಾನೂನು ಉಲ್ಲಂಘನೆ ಮಾಡಿ ಜಾನುವಾರು ಸಾಗಣಿಕೆ ಮಾಡಿದ್ದಲ್ಲಿ ಕ್ರಮ ಕೈಗೊಳ್ಳಲಾಗುದು ಎಂದರು.