ಕನ್ನಡಪ್ರಭ ವಾರ್ತೆ ಬೈಂದೂರು
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ 447 ಗೋವು ಕಳ್ಳತನ ಪ್ರಕರಣಗಳು ಹಾಗೂ 657 ಅಕ್ರಮ ಗೋವು ಸಾಗಾಟ ಪ್ರಕರಣಗಳು ದಾಖಲಾಗಿವೆ. ಉಡುಪಿ ಜಿಲ್ಲೆಯಲ್ಲಿ 2023-24ರಲ್ಲಿ 8 ಗೋವು ಕಳ್ಳತನ ಹಾಗೂ 12 ಅಕ್ರಮ ಸಾಗಾಟ ಪ್ರಕರಣ ದಾಖಲಾಗಿವೆ ಎಂದರು.
ಗೋವು ಕಳ್ಳತನ, ಅಕ್ರಮ ಗೋವು ಸಾಗಾಟ ಮತ್ತು ಗೋ ಹತ್ಯೆ ಪ್ರಕಾರಣಗಳಲ್ಲಿ ಭಾಗಿಯಾದವರ ವಿರುದ್ಧ ಈ ಕೆಳಗಿನಂತೆ ಕ್ರಮ ಜಾರಿಗೊಳಿಸಲಾಗಿದೆ.ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದ್ದು. ಅನುಮಾನಾಸ್ಪದ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.
ದನ ಕಳವು / ಸಾಗಾಟ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿತರ ಪರೇಡನ್ನು ನಡೆಸಿದ್ದು ಅವರು ಮುಂದೆ ಇಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುತ್ತದೆ. ಈ ಹಿಂದೆ ವರದಿಯಾದ ಪ್ರಕರಣಗಳಲ್ಲಿ ಆರೋಪಿತರಿಗೆ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಸೂಕ್ತ ಸಮಯದವರೆಗೆ ಬಾಂಡ್ ಪಡೆದುಕೊಳ್ಳಲಾಗುತ್ತಿದೆ.ಬೀಟ್ ಸಿಬ್ಬಂದಿಗೆ ಈ ಬಗ್ಗೆ ಸೂಕ್ತ ಸೂಚನೆಗಳನ್ನು ನೀಡಿದ್ದು, ಅವರ ಬೀಟ್ ವ್ಯಾಪ್ತಿಯಲ್ಲಿ ನಿಗಾ ಇಡಲು ಸೂಚಿಸಲಾಗಿದೆ. ರಾತ್ರಿ ಗಸ್ತು, ರಾತ್ರಿ ಬೀಟ್ ಕಡ್ಡಾಯವಾಗಿ ನಡೆಸಲಾಗುತ್ತಿದೆ ಎಂದು ಸಚಿವರು ಬೈಂದೂರು ಶಾಸಕರ ಪ್ರಶ್ನೆಗೆ ಉತ್ತರಿಸಿದ್ದಾರೆ.