- ಹೊಸ ಕಾನೂನಿನಲ್ಲಿ ಅಧಿಕಾರಿಗಳ ವಿರುದ್ಧ ನೇರ ಶಿಸ್ತು ಕ್ರಮದ ಶಕ್ತಿಯುತ ಅಧಿಕಾರ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ - ದಾವಣಗೆರೆ ಜಿಲ್ಲಾಧಿಕಾರಿ ಕನ್ನಡಪ್ರೇಮ, ಇಲ್ಲಿನ ಕನ್ನಡಪರ ಕೆಲಸ ಸಿಎಂ ಗಮನಕ್ಕೂ ತರುತ್ತೇವೆ
ಕನ್ನಡಪ್ರಭ ವಾರ್ತೆ ದಾವಣಗೆರೆ
ಕನ್ನಡ ಅನುಷ್ಠಾನ ವಿಧೇಯಕ-2022 ರಡಿ ಕನ್ನಡ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನೇರ ಶಿಸ್ತು ಕ್ರಮ ಕೈಗೊಳ್ಳುವ ಶಕ್ತಿಯುತ ಅಧಿಕಾರ ಹೊಸ ಕಾನೂನಿನಲ್ಲಿದೆ. ಮುಂದಿನ ದಿನಗಳಲ್ಲಿ ಕಾಯ್ದೆಯು ಇನ್ನಷ್ಟು ಬಲಿಷ್ಠಗೊಳ್ಳುವ ಜೊತೆಗೆ ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮವನ್ನೂ ವಿಧಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಎಚ್ಚರಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈಗಾಗಲೇ ಕನ್ನಡ ಅನುಷ್ಠಾನದಲ್ಲೇ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿದ್ದು, ವರ್ಗಾವಣೆ ಸಹ ಮಾಡಲಾಗಿದೆ ಎಂದರು.
ಫ್ರೆಂಚ್, ಜರ್ಮನ್ ಅಥವಾ ಹಿಂದಿ ಸೇರಿದಂತೆ ಯಾವುದೇ ಭಾಷೆ ಕಲಿಯುವುದಕ್ಕೂ ಅಭ್ಯಂತರವಿಲ್ಲ. ಆದರೆ, ನಮ್ಮ ನೆಲದಲ್ಲಿ ಕನ್ನಡವೇ ಸಾರ್ವಭೌಮವಾಗಿರಬೇಕು. ನಾವು ಎಲ್ಲಿಯೇ ಹೋದರೂ ಕನ್ನಡವನ್ನು ಉಳಿಸಿಕೊಳ್ಳಬೇಕು. ವಿದೇಶಿ ಹೂಡಿಕೆ ಅಥವಾ ಬೇರೆ ರಾಜ್ಯದವರೇ ಕರ್ನಾಟಕದಲ್ಲಿ ಕೈಗಾರಿಕೆ, ಉದ್ಯಮ ನಡೆಸುತ್ತಿದ್ದರೂ ಅಲ್ಲಿ ಕನ್ನಡದ ವಾತಾವರಣವೇ ಇರಬೇಕು. ರಸ್ತೆಗಳು, ಬಡಾವಣೆಗಳಿಗೆ ನಾಡಿನ ಸಾಹಿತಿಗಳು, ಗಣ್ಯರ ಹೆಸರಿಡುವ ಮೂಲಕ ಕನ್ನಡದ ಅಸ್ಮಿತೆ ಎತ್ತಿಹಿಡಿಯಬೇಕು ಎಂದು ತಿಳಿಸಿದರು.
₹80 ಸಾವಿರ ದಂಡ ಮಾದರಿ ಕ್ರಮ:
ಪೋಸ್ಟ್ ಮಾರ್ಟಂ ವರದಿ ಕನ್ನಡದಲ್ಲಿ:
180 ಮದರಸಾಗಳಲ್ಲಿ ಪ್ರಾಥಮಿಕ ಕನ್ನಡ ಕಲಿಕಾ ಕೇಂದ್ರ ಆರಂಭಿಸಿದ್ದು, ಮಾರ್ಚ್ ವೇಳೆಗೆ ಒಟ್ಟು 1,200 ಮದರಸಾಗಳಿಗೆ ಇದನ್ನು ವಿಸ್ತರಿಸುವ ಗುರಿ ಇದೆ. ಇದು ಉರ್ದು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಸುಲಭವಾಗಲಿದೆ. ರಾಜ್ಯದ 3900 ಶಾಲೆಗಳು ಶತಮಾನ ಕಂಡಿವೆ. ಅಂತಹ ಅನೇಕ ಶಾಲೆಗಳು ಇಂದು ಮುಚ್ಚುವ ಸ್ಥಿತಿಯಲ್ಲಿವೆ. ಹರಪನಹಳ್ಳಿ ಶಾಲೆಗೆ ಮಹಾತ್ಮ ಗಾಂಧೀಜಿ ಭೇಟಿ ನೀಡಿದ್ದರು. ರಾಜ್ಯದ ಶಾಲೆಗಳ ಮೇಲೆ ಗಾಂಧಿ ಮತ್ತು ರವೀಂದ್ರನಾಥ್ ಠ್ಯಾಗೂರ್ ಪ್ರಭಾವವಿದೆ. ಇದು ಸಂತೋಷದ ವಿಷಯ ಎಂದು ತಿಳಿಸಿದರು.
ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್, ಸದಸ್ಯರಾದ ಡಾ. ಎ.ಬಿ. ರಾಮಚಂದ್ರಪ್ಪ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ, ಸದಸ್ಯರು ಇದ್ದರು.
(ಕೋಟ್) ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನವನ್ನು 2026-27ರ ಸಾಲಿನಲ್ಲಿ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಚನ್ನಗಿರಿ, ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಿಸಲು ಜಾಗವನ್ನು ಗುರುತಿಸಲಾಗಿದ್ದು, ಮುಂದಿನ ಬಜೆಟ್‌ನಲ್ಲಿ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು.
- ಡಾ.ಪುರುಷೋತ್ತಮ ಬಿಳಿಮಲೆ. ಅಧ್ಯಕ್ಷ, ಕನ್ನಡ ಅಭಿವೃದ್ಧಿ ಪ್ರಾಧಿಕಾರ- - -
-3ಕೆಡಿವಿಜಿ6, 7: ದಾವಣಗೆರೆ ಡಿಸಿ ಕಚೇರಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. -3ಕೆಡಿವಿಜಿ8: ಡಾ.ಪುರುಷೋತ್ತಮ ಬಿಳಿಮಲೆ.