ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಂಡರೆ ಕಠಿಣ ಕ್ರಮ: ಕೆ. ರಾಜು

KannadaprabhaNewsNetwork |  
Published : Mar 19, 2024, 12:56 AM IST

ಸಾರಾಂಶ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಾಖಲೆಗಳಿಲ್ಲದೆ 50 ಸಾವಿರಕ್ಕಿಂತ ಅಧಿಕ ಮೊತ್ತವನ್ನು ವಶಪಡಿಸಿಕೊಳ್ಳಲಾಗುವುದು. ಹಾಗೆಯೇ ಸಂಶಯಾಸ್ಪದವಾಗಿ ಸಾಗಿಸಲ್ಪಡುವ ಉಡುಗೊರೆ, ವಸ್ತುಗಳು ಕಂಡು ಬಂದಲ್ಲಿ ಅವುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗುವುದು. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬೆಳುವಾಯಿ, ಮಾರೂರು ಮತ್ತು ಬಪ್ಪನಾಡುವಿನಲ್ಲಿ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ‌ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಪ್ರಚಾರಕ್ಕೆ ಯಾವುದೇ ರಾಜಕೀಯ ಪಕ್ಷಗಳು ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ. ಈ ಕುರಿತು ದೂರುಗಳು ಬಂದಲ್ಲಿ ಸಂಬಂಧಪಟ್ಟವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಚುನಾವಣಾಧಿಕಾರಿ ಕೆ. ರಾಜು ಹೇಳಿದರು.

ಅವರು ಭಾನುವಾರ ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ದಾಖಲೆಗಳಿಲ್ಲದೆ 50 ಸಾವಿರಕ್ಕಿಂತ ಅಧಿಕ ಮೊತ್ತವನ್ನು ವಶಪಡಿಸಿಕೊಳ್ಳಲಾಗುವುದು. ಹಾಗೆಯೇ ಸಂಶಯಾಸ್ಪದವಾಗಿ ಸಾಗಿಸಲ್ಪಡುವ ಉಡುಗೊರೆ, ವಸ್ತುಗಳು ಕಂಡು ಬಂದಲ್ಲಿ ಅವುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗುವುದು. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬೆಳುವಾಯಿ, ಮಾರೂರು ಮತ್ತು ಬಪ್ಪನಾಡುವಿನಲ್ಲಿ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.ಲೋಕಸಭಾ ಕ್ಷೇತ್ರದ 201ನೇ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ 100376 ಪುರುಷ ಮತದಾರರು, 107404 ಮಹಿಳಾ ಮತದಾರರು ಹಾಗೂ ಇತರ 35 ಮತದಾರರು ಸೇರಿದಂತೆ ಒಟ್ಟು 207783 ಮತದಾರರು ಇದ್ದಾರೆ ಎಂದರು. ಯುವ ಮತದಾರರ ಪೈಕಿ ಗಂಡುಮಕ್ಕಳು 1900 ಮತ್ತು ಹೆಣ್ಣುಮಕ್ಕಳು 2002ರಷ್ಟಿದ್ದು ಕ್ಷೇತ್ರದಲ್ಲಿ ಪುರುಷರಿಗಿಂತ ಮಹಿಳಾ ಮತದಾರರೆ ಹೆಚ್ಚು ಇದ್ದಾರೆ . 85 ವರ್ಷ ಮೇಲ್ಪಟ್ಟು ಮತ್ತು ವಿಕಲಚೇತನ ಮತದಾರರು 4487 ಇದ್ದು ಇವರಲ್ಲಿ ಮತದಾನ ಕೇಂದ್ರಕ್ಕೆ ಬರಲು ಸಾಧ್ಯವಾಗದವರಿಗೆ ಮನೆಯಲ್ಲೆ ಮತ ಚಲಾಯಿಸುವ ವ್ಯವಸ್ಥೆಯನ್ನು ಮಾಡಲಾಗುವುದು ಎಂದರು. ಮನೆಗಳಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮಗಳು, ಜಾತ್ರೆ, ಉತ್ಸವಗಳಿಗೆ ಕಡ್ಡಾಯವಾಗಿ ಅನುಮತಿಯನ್ನು ಪಡೆದುಕೊಳ್ಳಬೇಕು.ಮೂಡುಬಿದಿರೆಯಲ್ಲಿ 96, ಸುರತ್ಕಲ್ 54 ಮತ್ತು ಮೂಲ್ಕಿಯಲ್ಲಿ 69 ಮತಕೇಂದ್ರಗಳಿದ್ದು ಇವುಗಳಲ್ಲಿ 20 ಸೂಕ್ಷ್ಮಮತಗಟ್ಟೆಗಳನ್ನು ಗುರುತಿಸಲಾಗಿದೆ. 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ಮತದಾರರಿಗೆ ಮನೆಯಲ್ಲಿಯೇ ಮತ ಚಲಾಯಿಸಲು ಅವಕಾಶ ನೀಡಲಾಗಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ತಹಸೀಲ್ದಾರ್ ಶ್ರೀಧರ ಎಸ್ ಮಂಗಲಮನಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೀವಮಾನದ ಕಲಾಶ್ರೇಷ್ಠ ಸಾಧಕರ ಪ್ರಶಸ್ತಿಗೆ ನಾಡೋಜ ಡಾ.ವಿ.ಟಿ. ಕಾಳೆ ಆಯ್ಕೆ
ಸಾಂಸ್ಕೃತಿಕ ಪರಂಪರೆ ಉಳಿಸಿಕೊಳ್ಳಲು ರಂಗಭೂಮಿ ಸಹಕಾರಿ: ಜೆ. ನರಸಿಂಹಮೂರ್ತಿ