ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಕಳ್ಳಬಟ್ಟಿ ನಿರ್ಮೂಲನೆ ಕುರಿತು ರಚಿಸಲಾದ ಜಿಲ್ಲಾ ಮಟ್ಟದ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳ್ಳಬಟ್ಟಿ ನಿರ್ಮೂಲನೆಗೆ ಸಂಬಂಧಪಟ್ಟ ಇಲಾಖೆಗಳ ಜಂಟಿ ಸಹಭಾಗಿತ್ವದಲ್ಲಿ ಕಾರ್ಯಾಚರಣೆ, ಅರಿವು ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಗ್ರಾಮ ಮಟ್ಟದಲ್ಲಿ ಅನುಮಾನಾಸ್ಪದ ಕಳ್ಳಬಟ್ಟಿ ಚಟುವಟಿಕೆಗಳ ಬಗ್ಗೆ ತಕ್ಷಣ ಮಾಹಿತಿ ಸಂಗ್ರಹಿಸುವ ಕೆಲಸವಾಗಬೇಕು ಎಂದು ತಿಳಿಸಿದರು.
ಕಳ್ಳಬಟ್ಟಿ ಸೇವನೆಯಿಂದ ಜನರ ಆರೋಗ್ಯದ ಬಗ್ಗೆ ಗಂಭೀರವಾದ ಹಾನಿಯಾಗುತ್ತಿದೆ. ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು. ಸಾರ್ವಜನಿಕರೂ ಸಹಕರಿಸುವ ಮೂಲಕ ಮಾಹಿತಿ ನೀಡಲು ಮುಂದಾಗಬೇಕಿದೆ. ಅಕ್ರಮ ಚಟುವಟಿಕೆಗಳ ಬಗ್ಗೆ ನಿರಂತರ ಪರಿಶೀಲನೆ ನಡೆಸುವ ಕೆಲಸವಾಗಬೇಕು. ಅಂದಾಗ ಮಾತ್ರ ಕಳ್ಳಬಟ್ಟಿ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ಗ್ರಾಪಂ ಮಟ್ಟದಲ್ಲಿ ಗ್ರಾಮ ಪಂಚಾಯತಿ ಮತ್ತು ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಕಳ್ಳಬಟ್ಟಿ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು. ಇದರ ಜೊತೆಗೆ ಇಂತಹ ಚಟುವಟಿಕೆಗಳನ್ನು ನಡೆಸುವವರಿಗೆ ಕಾನೂನಿನಡಿ ಇರುವ ಶಿಕ್ಷೆ ಹಾಗೂ ದಂಡದ ಬಗ್ಗೆ ತಿಳಿಸುವ ಕಾರ್ಯವಾಗಬೇಕು. ಗ್ರಾಮ ಸಭೆಗಳಲ್ಲಿ ಇದರ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಕೆಲಸ ಮಾಡುವಂತೆ ನಿರ್ದೇಶಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಅಹಿರೆ, ಅಬಕಾರಿ ಅಧೀಕ್ಷಕ ಹನಮಪ್ಪ ಭಜಂತ್ರಿ, ಆರೋಗ್ಯ ಇಲಾಖೆಯ ಶಿವನಗೌಡ ಪಾಟೀಲ ಸೇರಿದಂತೆ ಜಿಲ್ಲೆಯ ಎಲ್ಲ ವಲಯದ ಅಬಕಾರಿ ನಿರೀಕ್ಷಕರು ಉಪಸ್ಥಿತರಿದ್ದರು.