ಕನ್ನಡಪ್ರಭ ವಾರ್ತೆ ಕಲಬುರಗಿ
ಬುಧವಾರ ತಮ್ಮ ಕಚೇರಿಯ ಸಭಾಂಗಣದಲ್ಲಿ ಚುನಾವಣೆ ಸಮಿತಿಯ ವಿವಿಧ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳ ಸಭೆ ನಡೆಸಿದ ಅವರು, ವಿಶೇಷವಾಗಿ ಆಳಂದ, ಅಫಜಲ್ಪುರ, ಚಿಂಚೋಳಿ ಅಂತಾರಾಜ್ಯ ಗಡಿಯಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದರು.
ಎಸ್.ಎಸ್.ಟಿ ಮತ್ತು ಅಬಕಾರಿ ತಂಡಗಳು ಪ್ರತಿನಿತ್ಯ ಸೀಜರ್ ಬಗ್ಗೆ ಕೂಡಲೆ ವರದಿ ನೀಡಬೇಕು. ಚೆಕ್‌ಪೋಸ್ಟ್‌ನಲ್ಲಿ 10 ಲಕ್ಷ ರು. ಮೇಲ್ಪಟ್ಟ ಹಣ ದೊರೆತಲ್ಲಿ, ಕೂಡಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಬೇಕು. ವಾಣಿಜ್ಯ ತೆರಿಗೆ ಇಲಾಖೆಯವರು ಉಚಿತ ಉಡುಗೊರೆ ಸಾಗಾಟ ಕುರಿತು ಎಸ್.ಎಸ್.ಟಿ. ತಂಡಕ್ಕೆ ಮಾಹಿತಿ ನೀಡಬೇಕು. ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.ಆಯಾ ತಾಲೂಕಿನ ಸಹಾಯಕ ಚುನಾವಣಾಧಿಕಾರಿಗಳು ಮುಂದಿನ ಎರಡ್ಮೂರು ದಿನದಲ್ಲಿ ಅಬಕಾರಿ, ವಾಣಿಜ್ಯ ತೆರಿಗೆ, ಪ್ರಿಂಟರ್ಸ್, ಬ್ಯಾಂಕರ್ಸ್, ಆದಾಯ ತೆರಿಗೆ ಅಧಿಕಾರಿಗಳ ಸಭೆ ಕರೆದು ಚುನಾವಣಾ ನೀತಿ ಸಂಹಿತೆ ಪಾಲನೆ ಬಗ್ಗೆ ತಿಳಿಹೇಳಬೇಕು. ತಾಲೂಕಿನಲ್ಲಿ ಸಿಂಗಲ್ ವಿಂಡೋ ಕಾರ್ಯಪ್ರವೃತ್ತಗೊಳಿಸಿ ಕಾಲಮಿತಿಯಲ್ಲಿ ಅರ್ಜಿ ವಿಲೇವಾರಿ ಮಾಡಬೇಕು ಎಂದರು.
ಸಿ-ವಿಜಿಲ್ ದೂರು 1 ಗಂಟೆಯಲ್ಲಿ ಕ್ರಮ: ಚುನಾವಣಾ ಕುರಿತಂತೆ ಸಿ-ವಿಜಿಲ್‌ನಲ್ಲಿ ಏನೇ ದೂರು ಬಂದಲ್ಲಿ ಒಂದು ಗಂಟೆಯಲ್ಲಿ ಅದರ ಮೇಲೆ ಕ್ರಮ ವಹಿಸಬೇಕು. ವಿಳಂಬ ನೀತಿ ಸಹಿಸಲ್ಲ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಸೋಷಿಯಲ್ ಮೀಡಿಯಾ ಮೇಲೆ ಹದ್ದಿನ ಕಣ್ಣಿಡಿ: ಇತ್ತೀಚೆಗೆ ಸಾಮಾಜಿಕ ಜಾಲತಾಣದ ಮೂಲಕ ಡಿಜಿಟಲ್ ಪ್ರಚಾರ ಹೆಚ್ಚಾಗಿದೆ. ಹೀಗಾಗಿ ರಾಜಕೀಯ ಪಕ್ಷ, ಅಭ್ಯರ್ಥಿಗಳ ಫೇಸ್ಬುಕ್, ಟ್ವಿಟರ್, ಯೂಟ್ಯೂಬ್, ಇನ್ಸ್ಟಾಗ್ರಾಂ ಖಾತೆಗಳ ಮೇಲೆ ನಿಗಾ ವಹಿಸಬೇಕು. ಅಲ್ಲಿ ಎಂ.ಸಿ.ಸಿ ಉಲ್ಲಂಘನೆ ಕಂಡುಬಂದಲ್ಲಿ ಸಕ್ಷಮ ಪ್ರಾಧಿಕಾರದ ಗಮನಕ್ಕೆ ತರಬೇಕು ಎಂದು ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಹೇಳಿದರು.