ಸೇಂಟ್ ಸಿಸಿಲಿ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಲೋಕಸಭಾ ಚುನಾವಣಾ ದಿನದಂದು ಕರ್ತವ್ಯಕ್ಕೆ ಆಯೋಜಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮೊದಲನೇ ಸುತ್ತಿನ ತರಬೇತಿ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಚುನಾವಣಾ ಆಯೋಗ ನೀಡಿರುವ ಮಾರ್ಗದರ್ಶನವನ್ನು ಮತದಾನ ಕೇಂದ್ರದಲ್ಲಿ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಚಾಚು ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು.ಅವರು ಭಾನುವಾರ ನಗರದ ಸೇಂಟ್ ಸಿಸಿಲಿ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಲೋಕಸಭಾ ಚುನಾವಣಾ ದಿನದಂದು ಕರ್ತವ್ಯಕ್ಕೆ ಆಯೋಜಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮೊದಲನೇ ಸುತ್ತಿನ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಲೋಕಸಭಾ ಚುನಾವಣೆಯು ಪಾರದರ್ಶಕ, ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ನಡೆಯಬೇಕು. ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಚಾಚೂ ತಪ್ಪದೇ ತಮಗೆ ವಹಿಸಿರುವ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.ಚುನಾವಣಾ ಕರ್ತವ್ಯದಲ್ಲಿ ಯಾವುದೇ ಒಂದು ಸಣ್ಣ ದೋಷ ವಾಗದಂತೆ, ಜಾಗರೂಕತೆಯಿಂದ ತಮ್ಮ ಕಾರ್ಯಗಳನ್ನು ನಿರ್ವಹಿಸಬೇಕು. ಮತದಾನ ಕೇಂದ್ರದಲ್ಲಿ ಅಳವಡಿಸಿರುವ ವೆಬ್ ಕಾಸ್ಟ್‌ನಿಂದ ವೀಡಿಯೋ ಚಿತ್ರೀಕರಣವನ್ನು ಜಿಲ್ಲಾ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ವೀಕ್ಷಣೆ ಮಾಡುತ್ತಿರುತ್ತಾರೆ. ಆದ್ದರಿಂದ ಎಲ್ಲಿಯೂ ಕರ್ತವ್ಯ ಲೋಪವಾಗದಂತೆ ಎಚ್ಚರದಿಂದ ಕಾರ್ಯ ನಿರ್ವಹಿಸಬೇಕು ಎಂದರು.ರಾಜ್ಯಮಟ್ಟದ ಚುನಾವಣಾ ತರಬೇತುದಾರರಾದ ಅಶೋಕ್ ಕಾಮತ್ ಮಾತನಾಡಿ, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ವಿಶ್ವದಲ್ಲಿ ಅತ್ಯಂತ ಶ್ರೇಷ್ಠವಾಗಿದ್ದು, ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲ ತೊಡಗಿಕೊಳ್ಳುತ್ತಿರುವುದು ಹೆಮ್ಮೆಯ ಸಂಗಾತಿಯಾಗಿದೆ. ಹೀಗಾಗಿ ಚುನಾವಣಾ ಕರ್ತವ್ಯದಲ್ಲಿ ತೊಡಗಿಕೊಂಡಿರುವ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಬದ್ಧತೆಯೊಂದಿಗೆ ನಿರ್ವಹಿಸಬೇಕು ಎಂದು ಹೇಳಿದರು.ಸಹಾಯಕ ಚುನಾವಣಾ ಅಧಿಕಾರಿ ಗಾಂವ್ಕರ್, ಡಿಡಿಪಿಐ ಗಣಪತಿ ಕೆ., ತಹಸೀಲ್ದಾರ್ ಗುರುರಾಜ್, ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.