ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ, ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ೬ನೇ ದಿನಕ್ಕೆ ಕಾಲಿಟ್ಟಿದೆ.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ, ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ೬ನೇ ದಿನಕ್ಕೆ ಕಾಲಿಟ್ಟಿದೆ.ಮಂಗಳವಾರ ರಾತ್ರಿ ಸುರಿದ ಮಳೆಯಿಂದ ಧರಣಿ ನಿರತರು ಸಂಕಷ್ಟಕ್ಕೆ ಸಿಲುಕಿದರು. ಮಲಗುವ ಜಾಗಕ್ಕೆ ಮಳೆನೀರು ನುಗ್ಗಿದ ಪರಿಣಾಮ ಚಳಿಯಲ್ಲಿ ನಡುಗುವಂತಾಯಿತು. ೬ನೇ ದಿನವೂ ಯಾವುದೇ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಧರಣಿ ಸ್ಥಳಕ್ಕೆ ಭೇಟಿ ನೀಡಲಿಲ್ಲ. ಜಿಲ್ಲಾಡಳಿತ ಸತಾಯಿಸಿ, ಬಡ ಕಾರ್ಮಿಕರ ಹೋರಾಟವನ್ನು ಹತ್ತಿಕ್ಕುವ ತಂತ್ರವನ್ನು ಮಾಡುತ್ತಿರುವ ಬಗ್ಗೆ ಸಂಶಯವಿದೆ. ಇದೆಲ್ಲಾ ವಿಷಯವನ್ನು ತಿಳಿದುಕೊಂಡು ಸಿದ್ದತೆ ಮಾಡಿಕೊಂಡೆ, ಅಹೋರಾತ್ರಿ ಧರಣಿಗೆ ಇಳಿದಿದ್ದೇವೆ ಎಂದು ಕಾರ್ಮಿಕ ಸಂಘಟನೆಯ ಅಧ್ಯಕ್ಷ ಕೆ.ಮೊಣ್ಣಪ್ಪ ಹೇಳಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.