ಕನ್ನಡಪ್ರಭ ವಾರ್ತೆ ಲೋಕಾಪುರ ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆ ಗಟ್ಟಿಗೊಳಿಸುವಲ್ಲಿ ಪ್ರತಿಯೊಬ್ಬ ಮತದಾರ ಮತದಾನದ ಮಾಡಲೇಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನ ಸಾಮಾನ್ಯರನ್ನು ಮತ ಚಲಾಯಿಸಲು ಪ್ರೇರೆಪಿಸಬೇಕು. ಮೇ.೭ ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಶತ ನೂರರಷ್ಟು ಮತದಾನವಾಗುವಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸುನೀಲ ಗಾವಡೆ ಹೇಳಿದರು.
ಭಾರತದ ಸಂವಿಧಾನವು ರಾಷ್ಟ್ರದ ನಾಗರಿಕರಿಗೆ ನೀಡಿರುವ ಅಮೂಲ್ಯವಾದ ಹಕ್ಕು ಮತದಾನವಾಗಿದೆ. ಮತ್ತು ತಪ್ಪದೇ ಮತದಾನ ಮಾಡುವುದು ಪ್ರತಿಯೊಬ್ಬ ವಯಸ್ಕ ಪ್ರಜೆಯ ಕರ್ತವ್ಯವು ಆಗಿದೆ. ಆದ್ದರಿಂದ ಅರ್ಹ ಪ್ರತಿಯೊಬ್ಬರು ಬರುವ ಮೇ 7 ರಂದು ತಪ್ಪದೇ ಮತದಾನ ಮಾಡುವಂತೆ ಕೋರಿದರು.
ಪಟ್ಟಣ ಪಂಚಾಯತ ಆರೋಗ್ಯ ನಿರೀಕ್ಷಕ ಭಾಗ್ಯಾಶ್ರೀ ಪಾಟೀಲ ಮಾತನಾಡಿ, ಮತದಾರರು ಮತಟ್ಟೆಗೆ ಆಗಮಿಸಿ ಮತದಾನ ಮಾಡುವಂತೆ ಮನವೋಲಿಸಬೇಕು ಎಂದು ಹೇಳಿದರು.ಈ ವೇಳೆ ಎಲ್ಲರಿಗೂ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಪಟ್ಟಣದ ವಿವಿಧ ಬಡಾವಣೆಯಲ್ಲಿ ಮತದಾನದ ಜಾಗೃತಿ ಜಾಥಾ ಮುಖಾಂತರ ಚುನಾವಣೆಗೆ ಸಂಬಂಧಿಸಿದ ಹಾಡುಗಳನ್ನು, ಸ್ಲೋಗನ್‌ಗಳ ಮೂಲಕ ಸಾರ್ವಜನಿಕರಿಗೆ ತಿಳಿವಳಿಕೆ ಮೂಡಿಸಿ ಪ್ರತಿಯೊಬ್ಬರು ಮತದಾನದಲ್ಲಿ ಭಾಗವಹಿಸಿ ಅಂತಾ ಮನವಿ ಮಾಡಿದರು.
ಕೋಟ್...
ಭಾರತದ ಸಂವಿಧಾನವು ರಾಷ್ಟ್ರದ ನಾಗರಿಕರಿಗೆ ನೀಡಿರುವ ಅಮೂಲ್ಯವಾದ ಹಕ್ಕು ಮತದಾನವಾಗಿದೆ. ಮತ್ತು ತಪ್ಪದೇ ಮತದಾನ ಮಾಡುವುದು ಪ್ರತಿಯೊಬ್ಬ ವಯಸ್ಕ ಪ್ರಜೆಯ ಕರ್ತವ್ಯವು ಆಗಿದೆ. ಆದ್ದರಿಂದ ಅರ್ಹ ಪ್ರತಿಯೊಬ್ಬರು ಬರುವ ಮೇ 7 ರಂದು ತಪ್ಪದೇ ಮತದಾನ ಮಾಡಬೇಕು. ಮತದಾನ ಪ್ರಮಾಣ ಶೇ.100 ರಷ್ಟು ಹೆಚ್ಚಿಸಲು ಸೂಕ್ತ ಕ್ರಮ ವಹಿಸಬೇಕು.ಸುನೀಲ ಗಾವಡೆ. ಪಟ್ಟಣ ಪಂಚಾಯತ ಮುಖ್ಯಾಧಿಕಾರಿ