ಬಾಲ್ಯವಿವಾಹ, ಪೋಕ್ಸೋ ಮುಕ್ತ ಜಿಲ್ಲೆಗೆ ಪ್ರಯತ್ನಿಸೋಣ: ಜಿಪಂ ಸಿಇಒ ಅಕ್ರಂ ಷಾ

KannadaprabhaNewsNetwork |  
Published : Jan 17, 2026, 03:30 AM IST
16ಎಚ್‌ಪಿಟಿ1- ಹೊಸಪೇಟೆಯಲ್ಲಿ ಪಿಡಿಒಗಳಿಗೆ ಏರ್ಪಡಿಸಿದ ಕಾರ್ಯಾಗಾರಕ್ಕೆ ಜಿಪಂ ಸಿಇಒ ಅಲಿ ಅಕ್ರಂ ಷಾ ಚಾಲನೆ ನೀಡಿದರು. | Kannada Prabha

ಸಾರಾಂಶ

ಇಂದಿಗೂ ಜಿಲ್ಲೆ ಹಾಗೂ ರಾಜ್ಯಾದ್ಯಂತ ಬಾಲ್ಯವಿವಾಹ, ಪೋಕ್ಸೊ ಪ್ರಕರಣಗಳು ದಾಖಲಾಗುತ್ತಿವೆ. ಗ್ರಾಮೀಣ ಭಾಗಗಳಲ್ಲಿ ಈ ಪ್ರಕರಣಗಳ ಹೆಚ್ಚಾಗಿ ಕಂಡು ಬರುತ್ತಿವೆ.

ಹೊಸಪೇಟೆ: ಜಿಲ್ಲೆಯಾದ್ಯಂತ ಬಾಲ್ಯವಿವಾಹ, ಪೋಕ್ಸೋ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವಲ್ಲಿ ಪಿಡಒಗಳ ಪಾತ್ರ ಪ್ರಮುಖವಾಗಿದೆ ಎಂದು ಜಿಪಂ ಸಿಇಒ ಅಲಿ ಅಕ್ರಂ ಷಾ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕೊಪ್ಪಳದ ಯುನಿಸೆಫ್ ಸಂಸ್ಥೆಯ ಸಹಯೋಗದಲ್ಲಿ ಬಾಲ್ಯ ವಿವಾಹ, ಪೋಕ್ಸೊ ಕಾಯ್ದೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಕಾವಲು ಸಮಿತಿ ಕುರಿತು ಪಿಡಿಒಗಳಿಗೆ ಏರ್ಪಡಿಸಿದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿಗೂ ಜಿಲ್ಲೆ ಹಾಗೂ ರಾಜ್ಯಾದ್ಯಂತ ಬಾಲ್ಯವಿವಾಹ, ಪೋಕ್ಸೊ ಪ್ರಕರಣಗಳು ದಾಖಲಾಗುತ್ತಿವೆ. ಗ್ರಾಮೀಣ ಭಾಗಗಳಲ್ಲಿ ಈ ಪ್ರಕರಣಗಳ ಹೆಚ್ಚಾಗಿ ಕಂಡು ಬರುತ್ತಿವೆ. ಸ್ಥಳೀಯ ಮಟ್ಟದಲ್ಲಿ ಇಂತಹ ಪ್ರಕರಣಗಳು ದಾಖಲಾಗದಂತೆ ಜಾಗ್ರತೆಯಿಂದ ಕಾರ್ಯ ನಿರ್ವಹಿಸಬೇಕಿದೆ. ಶಾಲಾ ಹಂತದಲ್ಲಿ ಯಾವುದೇ ಒಂದು ಮಗುವೂ ಶಾಲಾ ಶಿಕ್ಷಣದಿಂದ ಹೊರಗುಳಿಯದಂತೆ ಎಚ್ಚರ ವಹಿಸಬೇಕು. ಇದಕ್ಕಾಗಿ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಕಾವಲು ಸಮಿತಿ ರಚಿಸಿದ್ದು, ಕಾಲ ಕಾಲಕ್ಕೆ ಸರಿಯಾಗಿ ಸಭೆ ನಡೆಸಿ ಅಗತ್ಯ ಕ್ರಮ ವಹಿಸಬೇಕು ಎಂದರು.

ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮೀಣ ಪ್ರದೇಶದ ಶಾಲಾ, ಕಾಲೇಜುಗಳಲ್ಲಿ ಬಾಲ್ಯವಿವಾಹ, ಪೋಕ್ಸೋ ಕಾಯ್ದೆ, ಬಾಲ ಕಾರ್ಮಿಕ ಕಾಯ್ದೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಬಾಲ್ಯವಿವಾಹ, ಪೋಕ್ಸೊ ಮತ್ತು ಬಾಲಕಾರ್ಮಿಕ ಮುಕ್ತ ಜಿಲ್ಲೆಗೆ ಶ್ರಮಿಸಬೇಕು ಎಂದರು.

ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ಭಟ್ ಉಪನ್ಯಾಸ ನೀಡಿದರು. ಕಾರ್ಯಾಗಾರದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮುದುಕಪ್ಪ, ಅಂಗವಿಕಲ ಇಲಾಖೆ ಅಧಿಕಾರಿ ರಾಮಾಂಜನೇಯ ಮತ್ತಿತರರಿದ್ದರು.

ಹೊಸಪೇಟೆಯಲ್ಲಿ ಪಿಡಿಒಗಳಿಗೆ ಏರ್ಪಡಿಸಿದ ಕಾರ್ಯಾಗಾರಕ್ಕೆ ಜಿಪಂ ಸಿಇಒ ಅಲಿ ಅಕ್ರಂ ಷಾ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾಮಿ ವಿವೇಕಾನಂದರ ಆದರ್ಶ ಪಾಲಿಸಿ
ಪಾಟೀಲ ಪುಟ್ಟಪ್ಪ ಕನ್ನಡ ನಾಡು ಕಂಡ ಧೀಮಂತ ಸಾಹಿತಿ