ಬೊಮ್ಮಸಾಗರ ಜಾತ್ರೆ ಯಶಸ್ಸಿಗೆ ಶ್ರಮಿಸಿ: ಜಿ.ಎಸ್. ಪಾಟೀಲ್‌

KannadaprabhaNewsNetwork |  
Published : Feb 04, 2025, 12:31 AM IST
3 ರೋಣ 1. ಬೊಮ್ಮಸಾಗರ ಗ್ರಾಮದಲ್ಲಿ ದುರ್ಗಾದೇವಿ ಜಾತ್ರಾಮಹೋತ್ಸವ ಅಂಗವಾಗಿ ಜರುಗಿದ ಪೂರ್ವಭಾವಿ ಸಭೆಯಲ್ಲಿಬಶಾಸಕ ಜಿ.ಎಸ್.ಪಾಟೀಲ ಮಾತನಾಡಿದರು. | Kannada Prabha

ಸಾರಾಂಶ

ಉತ್ತರ ಕರ್ನಾಟಕ ಪ್ರಸಿದ್ಧ ಜಾತ್ರೆಗಳಲ್ಲೊಂದಾದ ಸುಕ್ಷೇತ್ರ ಬೊಮ್ಮಸಾಗರ ದುರ್ಗಾದೇವಿ ಜಾತ್ರೆ ಫೆ. 11ರಿಂದ ನಡೆಯಲಿದ್ದು, ಜಾತ್ರೆಗೆ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಭಕ್ತರಿಗೆ ತೊಂದರೆಯಾಗದಂತೆ ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಸೌಕರ್ಯ ಕಲ್ಪಿಸುವಲ್ಲಿ ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಂಡು ಶ್ರಮಿಸಬೇಕು ಶಾಸಕ ಜಿ.ಎಸ್. ಪಾಟೀಲ್‌ ಹೇಳಿದರು.

ರೋಣ: ಉತ್ತರ ಕರ್ನಾಟಕ ಪ್ರಸಿದ್ಧ ಜಾತ್ರೆಗಳಲ್ಲೊಂದಾದ ಸುಕ್ಷೇತ್ರ ಬೊಮ್ಮಸಾಗರ ದುರ್ಗಾದೇವಿ ಜಾತ್ರೆ ಫೆ. 11ರಿಂದ ನಡೆಯಲಿದ್ದು, ಜಾತ್ರೆಗೆ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಭಕ್ತರಿಗೆ ತೊಂದರೆಯಾಗದಂತೆ ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಸೌಕರ್ಯ ಕಲ್ಪಿಸುವಲ್ಲಿ ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಂಡು ಶ್ರಮಿಸಬೇಕು ಶಾಸಕ ಜಿ.ಎಸ್. ಪಾಟೀಲ್‌ ಹೇಳಿದರು.

ಅವರು ಸೋಮವಾರ ಬೊಮ್ಮಸಾಗರ ಗ್ರಾಮದ ಶ್ರೀ ದುರ್ಗಾದೇವಿ ದೇವಸ್ಥಾನ ಆವರಣದಲ್ಲಿ ಜರುಗಿದ ಜಾತ್ರೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಭಕ್ತರು ಉಳಿದುಕೊಳ್ಳುವ ಜಾಗದಲ್ಲಿಯೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ರಸ್ತೆ, ಚರಂಡಿ ದುರಸ್ತಿಗೊಳಿಸಬೇಕು. ವಿದ್ಯುತ್ ವ್ಯತ್ಯಯವಾಗದಂತೆ ಹೆಸ್ಕಾಂ ಕಾರ್ಯ ನಿರ್ವಹಿಸಬೇಕು. ಗ್ರಾಮದಲ್ಲಿ ನೈರ್ಮಲ್ಯ ಕಾಪಾಡಬೇಕು. ಆರೋಗ್ಯ ಇಲಾಖೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ ಜನರ ಆರೋಗ್ಯ ಕಾಪಾಡುವಲ್ಲಿ ನೋಡಿಕೊಳ್ಳಬೇಕು. ಫೆ. 11ರಂದು ಹೇಳಿಕೆ, 13ರಂದು ರಥೋತ್ಸವ ಜರುಗಲಿದ್ದು, ಫೆ. 11ರಿಂದ 5 ದಿನಗಳ ಕಾಲ ಜಾತ್ರೆಗೆ ಆಗಮಿಸುವ ಭಕ್ತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ, ಅಗತ್ಯ ಸೌಕರ್ಯಗಳನ್ನು ಕಲ್ಪಿಸುವಲ್ಲಿ ರೋಣ ಹಾಗೂ ಗಜೇಂದ್ರಗಡ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದರು.

ಸಭೆಯಲ್ಲಿ ಜಿಪಂ ಮಾಜಿ ಸದಸ್ಯೆ ಮಂಜಳಾ ಹುಲ್ಲಣ್ಣವರ, ಶರಣಗೌಡ ಪಾಟೀಲ ಸರ್ಜಾಪುರ, ವಿ.ಬಿ. ಸೋಮನಕಟ್ಟಿಮಠ, ಗಜೇಂದ್ರಗಡ ತಾಪಂ ಇಒ ಮಂಜುಳಾ ಹಕಾರಿ, ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ ರಾಠೋಡ, ವೀರಣ್ಣ ಶೆಟ್ಟರ್, ಲೋಕೋಪಯೋಗಿ ಬೆಇಇ ಬಲವಂತ ನಾಯಕ, ಅಕ್ಷರ ದಾಸೋಹ ಅಧಿಕಾರಿ ಆರ್.ಎಂ. ನಾಯ್ಕರ, ಹನುಮಂತರಡ್ಡಿ ಕಳಕಾಪುರ, ಪಿಎಸ್‌ಐ ಪ್ರಕಾಶ ಬಣಕಾರ ಎ.ವಿ. ಹಾದಿಮನಿ, ಹೆಸ್ಕಾಂ ಎಇಇ ವಿ.ಟಿ. ರಾಜೂರ, ಮೋಹನ ಹುಲ್ಲಣ್ಣವರ, ಬಾಲಪ್ಪ‌ ಮಾದರ, ಆರೋಗ್ಯ ಶಿಕ್ಷಣಾಧಿಕಾರಿ ಕೆ.ಎ. ಹಾದಿಮನಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು