ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸಿ

KannadaprabhaNewsNetwork | Published : Mar 6, 2025 12:32 AM

ಸಾರಾಂಶ

ಕನ್ನಡಪ್ರಭ ವಾರ್ತೆ ಇಂಡಿ ತಾಲೂಕಾದ್ಯಂತ ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಶಾಂತ ಕಾಳೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಇಂಡಿ

ತಾಲೂಕಾದ್ಯಂತ ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಶಾಂತ ಕಾಳೆ ಸೂಚಿಸಿದರು.

ತಾಪಂ ಸಭಾಭವನದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರದ ಗ್ಯಾರಂಟಿ ಯೋಜನೆಗಳ ಪರವಾಗಿ ರಾಜ್ಯಾದ್ಯಂತ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ, ವಿದ್ಯಾರ್ಥಿಗಳಿಗೆ, ಗೃಹಿಣಿಯರಿಗೆ, ವಿದ್ಯುತ್ ಗ್ರಾಹಕರಿಗೆ ಹಾಗೂ ಯುವಕರಿಗೆ ಸೇರಿದಂತೆ ಸಮಾಜದ ಪ್ರತಿಯೊಬ್ಬರಿಗೂ ಅನುಕೂಲವಾಗುತ್ತಿದೆ. ಗ್ಯಾರಂಟಿ ಯೋಜನೆಗಳು ಪಕ್ಷಾತೀತವಾದ ಹಾಗೂ ಜನಪರವುಳ್ಳ ಸಾಮಾಜಿಕ ಕಾರ್ಯಕ್ರಮವಾಗಿದೆ. ಸಾರ್ವಜನಿಕರು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಇದರ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು.

ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರು ನೆಮ್ಮದಿ ಜೀವನ ನಡೆಸುತ್ತಿದ್ದಾರೆ. ಈ ಯೋಜನೆಯಿಂದ ಹೊರಗುಳಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅಂಥವರನ್ನು ನೋಂದಣಿ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ತಾಲೂಕಿನ ಅಧಿಕಾರಿ-ಸಿಬ್ಬಂದಿಗಳು ಪ್ರಾಮಾಣಿಕ ಮತ್ತು ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಅರ್ಹರಾದ ಎಲ್ಲ ಫಲಾನುಭವಿಗಳಿಗೆ ತಲುಪಿಸಲು ಅಗತ್ಯಕ್ರಮ ಕೈಗೊಳ್ಳಬೇಕು. ಗೃಹಲಕ್ಷ್ಮೀ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಯುವನಿಧಿ ಗ್ಯಾರಂಟಿ ಯೋಜನೆಗಳು ತಾಲೂಕಿನಲ್ಲಿ ಎಲ್ಲರಿಗೂ ತಲುಪಬೇಕು. ಅರ್ಹ ವ್ಯಕ್ತಿಗಳು ಸರ್ಕಾರದ ಯೋಜನೆಯಿಂದ ಹೊರಗೆ ಉಳಿಯಬಾರದು ಎಂದು ತಿಳಿಸಿದರು.

ತಾಪಂ ಇಒ ನಂದೀಪ ರಾಠೋಡ, ಇಂಡಿ ಹೆಸ್ಕಾಂ ಎಇಇ ಎಸ್.ಆರ್.ಮೆಂಡೆಗಾರ, ಚಡಚಣ ಹೆಸ್ಕಾಂ ಎಇಇ ಹಾಲ ವಿಜಯಕುಮಾರ ಹವಾಲ್ದಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಿಕಿ ಪುತಳಿಬಾಯಿ ಭಜಂತ್ರಿ, ಸನಾ ಶೇಖ್, ಕೆಎಸ್‌ಆರ್‌ಟಿಸಿ ಘಟಕ ಪ್ರಭಾರ ವ್ಯವಸ್ಥಾಪಕ ವಿಠಲ.ಬಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಪದಾಧಿಕಾರಿಗಳಾದ ಸಂಜೀವಕುಮಾ‌ರ್ ನಾಯೊಡಿ, ಸತೀಶ ಹತ್ತಿ, ನಿರ್ಮಲಾ ತಳಕೇರಿ, ಶೈಲಜಾ ಜಾಧವ, ಶಶಿಕುಮಾರ ಹಿರೇಮಠ, ಪ್ರಭು ಕುಂಬಾರ, ಸಂಕೇತ ಜೋಶಿ, ರುದ್ರಗೌಡ ಆಲಗೊಂಡ, ಭೀಮರಾಯ ಮೇತ್ರಿ ಸಭೆಯಲ್ಲಿ ಇದ್ದರು.

Share this article