ಮಕ್ಕಳ ಸರ್ವತೋಮುಖ ಪ್ರಗತಿಗೆ ಶ್ರಮಿಸಿ

KannadaprabhaNewsNetwork |  
Published : Nov 14, 2026, 03:00 AM IST
12ಚದಸಚಚಮಚ | Kannada Prabha

ಸಾರಾಂಶ

ಪ್ರಾಮಾಣಿಕ ಸೇವೆ ಸಲ್ಲಿಸುವ ಮೂಲಕ ಮಕ್ಕಳ ಮತ್ತು ತಾಯಂದಿರ ಪ್ರೀತಿಗೆ ಪಾತ್ರರಾಗುವಂತೆ ಶಾಸಕ ನಿಖಿಲ್ ಕತ್ತಿ ನೂತನವಾಗಿ ನೇಮಕಾತಿ ಆದೇಶ ಪಡೆದಿರುವ ಅಂಗನವಾಡಿ ಸಿಬ್ಬಂದಿಗೆ ಸಲಹೆ ಮಾಡಿದರು.

ಕನ್ನಡಪ್ರಭ ವಾರ್ತೆ ಹುಕ್ಕೇರಿ

ಪ್ರಾಮಾಣಿಕ ಸೇವೆ ಸಲ್ಲಿಸುವ ಮೂಲಕ ಮಕ್ಕಳ ಮತ್ತು ತಾಯಂದಿರ ಪ್ರೀತಿಗೆ ಪಾತ್ರರಾಗುವಂತೆ ಶಾಸಕ ನಿಖಿಲ್ ಕತ್ತಿ ನೂತನವಾಗಿ ನೇಮಕಾತಿ ಆದೇಶ ಪಡೆದಿರುವ ಅಂಗನವಾಡಿ ಸಿಬ್ಬಂದಿಗೆ ಸಲಹೆ ಮಾಡಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹೊಸದಾಗಿ ನೇಮಕಗೊಂಡಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗುರುವಾರ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿ, ಶಿಸ್ತು, ಸಂಯಮದಿಂದ ಕೆಲಸ ಮಾಡಿ ಮಕ್ಕಳ ಸರ್ವತೋಮುಖ ಪ್ರಗತಿಗಾಗಿ ಶ್ರಮಿಸುವಂತೆ ಕಿವಿಮಾತು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುಕ್ಕೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ವ್ಯಾಪ್ತಿಯ ಹುಕ್ಕೇರಿ ಮತಕ್ಷೇತ್ರದಲ್ಲಿ ಈ ವರ್ಷದಲ್ಲಿ ಒಟ್ಟು 11 ಕಾರ್ಯಕರ್ತೆಯರು ಮತ್ತು 21 ಸಹಾಯಕಿಯರನ್ನು ಅತ್ಯಂತ ಪ್ರಾಮಾಣಿಕ ಮತ್ತು ಪಾರದರ್ಶಕತೆಯಿಂದ ಆಯ್ಕೆ ಮಾಡಲಾಗಿದೆ. ಇಲಾಖೆಯ ನಿಯಮದಂತೆ ವಿಧವೆಯರಿಗೆ ಮೊದಲ ಆದ್ಯತೆ ನೀಡಲಾಗಿದೆ. ನಿಮ್ಮಲ್ಲಿರುವ ಅರ್ಹತೆ ಮತ್ತು ಪ್ರತಿಭೆಯೇ ಈ ಆಯ್ಕೆಗೆ ಕಾರಣವಾಗಿದೆ ಎಂದು ಶಾಸಕ ಕತ್ತಿ ಹೇಳಿದರು.

ಗ್ರಾಮೀಣ ಮತ್ತು ನಗರ ಪ್ರದೇಶಗಳ ಮಕ್ಕಳ ಆರೈಕೆ ಮತ್ತು ಪೌಷ್ಠಿಕಾಂಶ ಹೆಚ್ಚಿಸಲು ನೂತನವಾಗಿ ನೇಮಕಗೊಂಡ ಸಿಬ್ಬಂದಿ ಶ್ರಮಿಸಬೇಕು. ಮಕ್ಕಳಿಗೆ ಆಟದ ಮೂಲಕ ಮೂಲಭೂತ ಕಲಿಕೆ ಮತ್ತು ಶಾಲಾಪೂರ್ವ ಗುಣಮಟ್ಟದ ಶಿಕ್ಷಣ ನೀಡಬೇಕು. ಮುಂದಿನ ದಿನಗಳಲ್ಲಿ 6 ವರ್ಷದೊಳಗಿನ ಮಕ್ಕಳ ಬೆಳವಣಿಗೆಯಲ್ಲಿ ಈ ಸಿಬ್ಬಂದಿ ಪಾತ್ರ ಮಹತ್ವದ್ದಾಗಿದೆ. ಎಲ್ಲ ಮಕ್ಕಳನ್ನು ಒಂದೇ ತೆರನಾಗಿ ನೋಡಿಕೊಳ್ಳಬೇಕು. ಬಾಣಂತಿಯರಿಗೆ ಉತ್ತಮ ಗುಣಮಟ್ಟದ ಪೌಷ್ಠಿಕಾಂಶವುಳ್ಳ ಆಹಾರವನ್ನು ವಿತರಿಸಬೇಕು ಎಂದರು.

ಈ ವೇಳೆ ತಹಸೀಲ್ದಾರ್‌ ಬಲರಾಮ ಕಟ್ಟಿಮನಿ, ತಾಪಂ ಇಒ ಟಿ.ಆರ್.ಮಲ್ಲಾಡದ, ಮ್ಯಾನೇಜರ್‌ ಅವಿನಾಶ ಹೊಳೆಪ್ಪಗೋಳ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಶಾನೂಲ್ ತಹಶೀಲ್ದಾರ್‌, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ.ವಿ.ರಾಮಮೂರ್ತಿ, ಪುರಸಭೆ ಮುಖ್ಯಾಧಿಕಾರಿ ಈಶ್ವರ ಸಿದ್ನಾಳ, ಬಿಇಒ ರೇವತಿ ಮಠದ, ಮುಖಂಡರಾದ ಗುರುರಾಜ ಕುಲಕರ್ಣಿ, ರಾಜು ಮುನ್ನೋಳಿ, ರಾಯಪ್ಪ ಢೂಗ, ಶಿವನಗೌಡ ಪಾಟೀಲ, ಸಿಬ್ಬಂದಿ ನಾಗೇಶ ವಾಳವಿ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸಿಯಾಗಿ ಪದೋನ್ನತಿ ಹೊಂದಿದ ತಹಸೀಲ್ದಾರ್‌ ಬೋಸಗಿ
ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ: ಚಿತ್ರನಟ ಅಭಯವೀರ