ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಬೇಕಿದ್ದು, ಪಕ್ಷದಿಂದ ಕೈಗೊಂಡಿರುವ ವಾರ್ಡ್ ಚಲೋ ಅಭಿಯಾನದ ಯಶಸ್ಸಿಗೆ ಎಲ್ಲರೂ ಶ್ರಮಿಸುವಂತೆ ಶಾಸಕ ಮಹೇಶ ಟೆಂಗಿನಕಾಯಿ ಕರೆ ನೀಡಿದರು.
ನಗರದ ಪಕ್ಷದ ಕಾರ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಹು-ಧಾ ಸೆಂಟ್ರಲ್ ಕ್ಷೇತ್ರದ ಬೂತ್ ಮಟ್ಟದ ಮಂಡಳ ಜಿಲ್ಲಾ ಪದಾಧಿಕಾರಿಗಳ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.ಇನ್ನೆರಡು ತಿಂಗಳಲ್ಲಿ ಲೋಕಸಭಾ ಚುನಾವಣೆಗೆ ಎದುರಿಸಲು ನಾವೆಲ್ಲರೂ ಸನ್ನದ್ಧರಾಗಬೇಕಾಗಿದೆ. ಇದರ ಅಂಗವಾಗಿ ವಾರ್ಡ್ ಚಲೋ ಅಭಿಯಾನ, ಬೂತ್ ಸಶಸ್ತಿಕರಣ, ಶಕ್ತಿ ವಂದನ ಅಭಿಯಾನ, ಗೋಡೆ ಬರಹ, ವಿಕಸಿತ ಭಾರತ ಅಭಿಯಾನಗಳನ್ನು ಯಶಸ್ವಿಗೊಳಿಸಬೇಕು.
ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ನಮ್ಮ ಕ್ಷೇತ್ರದಿಂದ ಅತಿ ಹೆಚ್ಚು ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದೇವು. ಈ ಬಾರಿಯೂ ನಾವು ಅತಿ ಹೆಚ್ಚು ಮತಗಳನ್ನು ಪ್ರಹ್ಲಾದ ಜೋಶಿ ಅವರಿಗೆ ಲೀಡ್ ನೀಡಬೇಕಾಗಿದೆ. ಈ ಎಲ್ಲ ಅಭಿಯಾನಗಳನ್ನು ಅತ್ಯಂತ ಯಶಸ್ವಿಯಾಗಿ ಮಾಡಬೇಕೆಂದು ಕರೆ ನೀಡಿದರು.ಕೇಂದ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಸಾಕಷ್ಟು ಜನಪರ ಅಭಿವೃದ್ಧಿ ಯೋಜನೆಗಳನ್ನು ತರುವ ಮೂಲಕ ಯಶಸ್ವಿಯಾಗಿದೆ. ತಾವು ಮೊದಲು ಬೂತ್ ಗಟ್ಟಿಗೊಳಿಸಬೇಕು. ಬೂತ್ ಗಟ್ಟಿಯಾದರೆ ಮಾತ್ರ ಚುನಾವಣೆಯಲ್ಲಿ ಹೆಚ್ಚಿನ ಮತಗಳನ್ನು ಗಳಿಸಲು ಸಾಧ್ಯವಾಗಲಿದೆ ಎಂದರು.
ಗ್ರಾಮ ಚಲೋ ಅಭಿಯಾನದ ವಿಭಾಗ ಪ್ರಭಾರಿ ಜಯತೀರ್ಥ ಕಟ್ಟಿ ಮಾತನಾಡಿದರು. ಈ ವೇಳೆ ಪಾಲಿಕೆ ಮೇಯರ್ ವೀಣಾ ಭರದ್ವಾಡ್, ಲಿಂಗರಾಜ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಗೋವಿಂದ ಜೋಶಿ, ಶಿವು ಮೆಣಸಿನಕಾಯಿ, ಪ್ರಭು ನವಲಗುಂದಮಠ, ಡಾ. ಕ್ರಾಂತಿ ಕಿರಣ್, ಮಾ. ನಾಗರಾಜ್. ಸಂತೋಷ್ ಚೌಹಾಣ, ಮಹೇಂದ್ರ ಕೌತಾಳ ಸೇರಿದಂತೆ ಹಲವರಿದ್ದರು.ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರಗತಿ ವಾಹನಕ್ಕೆ ಚಾಲನೆಹುಬ್ಬಳ್ಳಿ:ಧಾರವಾಡ ಜಿಲ್ಲಾ ಬಿಜೆಪಿಯ ವತಿಯಿಂದ ಬಿಜೆಪಿಯ "ಪ್ರಗತಿ ವಾಹನ "ಕ್ಕೆ ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಎಂ.ಆರ್. ಪಾಟೀಲ ಜಂಟಿಯಾಗಿ ಚಾಲನೆ ನೀಡಿದರು.ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರ ಬಳಿಗೆ ತಲುಪಿಸುವ ನಿಟ್ಟಿನಲ್ಲಿ ಈ ಪ್ರಗತಿ ವಾಹನಕ್ಕೆ ಚಾಲನೆ ನೀಡಲಾಗಿದೆ. ಇದು ಕ್ಷೇತ್ರಾದ್ಯಂತ ಸಂಚರಿಸಿ ಕೇಂದ್ರ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಲಿದೆ ಎಂದು ಟೆಂಗಿನಕಾಯಿ ಇದೇ ವೇಳೆ ಹೇಳಿದರು. ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿರುವ ಕೇಂದ್ರ ಸಚಿವರ ಕಚೇರಿಯ ಮುಂದೆ ಪ್ರಗತಿ ವಾಹನಕ್ಕೆ ಚಾಲನೆನೀಡಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ವಿಪ ಮಾಜಿ ಸದಸ್ಯ ನಾಗರಾಜ ಛಬ್ಬಿ, ಪಾಲಿಕೆ ಮೇಯರ್ ವೀಣಾ ಭರದ್ವಾಡ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಸಂತೋಷ ಚವ್ಹಾಣ ಸೇರಿದಂತೆ ಹಲವರಿದ್ದರು.