ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿ

KannadaprabhaNewsNetwork |  
Published : Jan 07, 2026, 02:00 AM IST
ಪೋಟೋ: 06ಎಸ್‌ಎಂಜಿಕೆಪಿ02ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪರಿವರ್ತನಾ ಟ್ರಸ್ಟ್, ಬೆಂಗಳೂರು, ಜಿಲ್ಲಾಡಳಿತ, ರೋಟರಿ ಸಂಸ್ಥೆ ಶಿವಮೊಗ್ಗದ ವಿವಿಧ ವಲಯಗಳ ಸಹಯೋಗದಲ್ಲಿ ಡ್ರಗ್ಸ್  ಮುಕ್ತ ಕರ್ನಾಟಕ ಜನಜಾಗೃತಿ ವಾಹನಕ್ಕೆ ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಚಾಲನೆ ನೀಡಿದರು. | Kannada Prabha

ಸಾರಾಂಶ

ದೇಶದ ರಕ್ಷಣೆ, ಸ್ವಸ್ಥ ಸಮಾಜ ನಿರ್ಮಾಣ, ಭಾರತದ ಭವ್ಯಭವಿಷ್ಯಕ್ಕಾಗಿ ಮಾದಕ ವಸ್ತುಗಳ ವ್ಯಸನ, ಮಾರಾಟ ಮತ್ತು ಕಳ್ಳಸಾಗಾಣೆ ವಿರುದ್ಧ ಜನಜಾಗೃತಿಗೊಳಿಸಲು ಹಾಗೂ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಸಂಕಲ್ಪ ಮಾಡಬೇಕು ಎಂದು ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಕರೆ ನೀಡಿದರು.

ಶಿವಮೊಗ್ಗ: ದೇಶದ ರಕ್ಷಣೆ, ಸ್ವಸ್ಥ ಸಮಾಜ ನಿರ್ಮಾಣ, ಭಾರತದ ಭವ್ಯಭವಿಷ್ಯಕ್ಕಾಗಿ ಮಾದಕ ವಸ್ತುಗಳ ವ್ಯಸನ, ಮಾರಾಟ ಮತ್ತು ಕಳ್ಳಸಾಗಾಣೆ ವಿರುದ್ಧ ಜನಜಾಗೃತಿಗೊಳಿಸಲು ಹಾಗೂ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಸಂಕಲ್ಪ ಮಾಡಬೇಕು ಎಂದು ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಕರೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪರಿವರ್ತನಾ ಟ್ರಸ್ಟ್, ಜಿಲ್ಲಾಡಳಿತ, ರೋಟರಿ ಸಂಸ್ಥೆ ಶಿವಮೊಗ್ಗದ ವಿವಿಧ ವಲಯಗಳ ಸಹಯೋಗದಲ್ಲಿ ಡ್ರಗ್ಸ್ ಮುಕ್ತ ಕರ್ನಾಟಕ ಜನಜಾಗೃತಿ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಹಜ ಕುತೂಹಲದಿಂದ ನಿಧಾನವಾಗಿ ಆರಂಭಗೊಳ್ಳುವ ಮಾದಕ ವಸ್ತುಗಳ ಸೇವನೆ, ಕೊನೆಯಲ್ಲಿ ಚಟವಾಗಿ ಪರಿಣಮಿಸಲಿದೆ. ಇದರಿಂದಾಗಿ ಅಸಂಖ್ಯಾತ ಯುವಕ-ಯುವತಿಯರು ತಮಗೆ ಅರಿವಿಲ್ಲದೆಯೆ ಅಮೂಲ್ಯವಾದ ಭವಿಷ್ಯವನ್ನು ಯಾತನಾಮಯವಾಗಿಸಿಕೊಳ್ಳುತ್ತಿದ್ದಾರೆ ಎಂದರು.

ಮನೋರಂಜನೆ, ಹವ್ಯಾಸಿ ಕ್ಲಬ್‌ಗಳು, ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ ಅಭಿವೃದ್ಧಿಯಾದಂತೆ ಪರಿಸರದ ಮೇಲೆ ಆಗಿರುವ ಪ್ರಭಾವ, ಅದರ ಪರಿಣಾಮಗಳು ಗೋರವಾಗಿವೆ. ಇಂದಿನ ಯುವ ಪೀಳಿಗೆ ಮಾದಕ ವಸ್ತುಗಳ ಮೋಹಕ್ಕೆ ಒಳಗಾಗದಂತೆ ಮುನ್ನೆಚ್ಚರಿಕೆ ಕ್ರಮ ಅಗತ್ಯವಾಗಿದೆ. ಮಾನಸಿಕ ಸ್ಥಿಮಿತತೆ ಕಳೆದುಕೊಳ್ಳದೆ ಇರುವಂತೆ ಯುವಕರ ಗಮನ ಕೇಂದ್ರೀಕರಿಸಬೇಕಾದ ಅಗತ್ಯವಿದೆ. ನೈತಿಕ ಸ್ವಭಾವವೂ ಬದಲಾಗದಂತೆ ನೋಡಿಕೊಳ್ಳಬೇಕಾದ ಅಗತ್ಯ ಸಮಾಜ ಹಾಗೂ ಪೋಷಕರ ಮೇಲಿದೆ ಎಂದರು.

ಮಾದಕ ವ್ಯಸನ ಎಂಬ ಮಾಯಾಜಾಲಕ್ಕೆ ಬೀಳುವ ಮೊದಲು ಅದನ್ನು ಬಲವಾಗಿ ಕಟ್ಟಿಹಾಕಬೇಕಾಗಿದೆ. ಅದಕ್ಕಾಗಿ ಇಡಿ ಸಮಾಜವೇ ಎಚ್ಚೆತ್ತುಕೊಳ್ಳಬೇಕಾದ ಅಗತ್ಯವಿದೆ. ಜಾಗೃತ ಸಮಾಜ ನಿರ್ಮಿಸುವಲ್ಲಿ ಹಾಗೂ ಭಾರತದ ಭವಿಷ್ಯವನ್ನು ಸಂರಕ್ಷಿತಗೊಳಸುವ ರೂಪಿಸುವ ಇಂತಹ ಕಾರ್ಯಕ್ರಮಗಳಲ್ಲಿ ಎಲ್ಲರ ಭಾಗವಹಿಸುವಿಕೆ ಅಗತ್ಯವಾಗಿದೆ ಎಂದು ಹೇಳಿದರು.

ಮಾದಕ ವಸ್ತು ವ್ಯವನಿಗಳನ್ನು ಮಾತ್ರವಲ್ಲದೇ ಅವರ ಮೂಲಕ ಇಡಿ ಸಮಾಜವನ್ನು ಆವರಿಸಿಕೊಂಡು ವಿನಾಶದಂಚಿಗೆ ಕೊಂಡೊಯ್ಯುತ್ತದೆ. ಭವ್ಯ ಇತಿಹಾಸ, ಸಾಂಸ್ಕೃತಿಕ-ಆಧ್ಯಾತ್ಮಿಕ ಪರಂಪರೆ ಹೊಂದಿರುವ ಈ ನಾಡಿನಲ್ಲಿ ಹಿರಿಯರ ಆಶಯದಂತೆ ನಡೆದುಕೊಳ್ಳುವ, ಅನುಸರಿಸುವ ಅಗತ್ಯವಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು , ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್, ಚಂದ್ರಶೇಖರ್, ಹರ್ಷಕಾಮತ್, ಬಿ.ಜಿ.ಧನರಾಜ್, ಶ್ರೀಮತಿ ಭಾರತಿ ಚಂದ್ರಶೇಖರ್, ಸುದರ್ಶನ್, ಉದಯಕದಂಬ, ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಗಳ ನಿಯಂತ್ರಣ, ನಶೆ ಮುಕ್ತ ಸಮಾಜ ನಿರ್ಮಾಣ ಎಂಬ ಹೆಸರಿನಲ್ಲಿ ಅನೇಕ ಜನಜಾಗೃತಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಲೇ ಇವೆ. ಆದರೆ, ಇನ್ನೊಂದು ಕಡೆಯಲ್ಲಿ ಮದ್ಯದಂಗಡಿಗಳಿಗೆ ಸರ್ಕಾರವೇ ಪರವಾನಿಗೆ ನೀಡುತ್ತಿದೆ. ಎಂತಹ ವಿಪರ್ಯಾಸ.

– ಎಸ್.ಎನ್.ಚನ್ನಬಸಪ್ಪ, ಶಾಸಕ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ