ಕನ್ನಡಪ್ರಭ ವಾರ್ತೆ ರಾಯಚೂರು
ಸ್ಥಳೀಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಹಮ್ಮಿಕೊಂಡಿದ್ದ 13 ನೇ ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ. ವಿವಿಧ ವಿಭಾಗಗಳಲ್ಲಿ ಕೃಷಿ ಪದವಿ, ಸ್ನಾತಕ, ಸ್ನಾತಕೋತ್ತರ ಮತ್ತು ಡಾಕ್ಟರೇಟ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಗುರುವಾರ ಮಾತನಾಡಿದರು.
ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕೃಷಿ ವಲಯವು ಪ್ರಮುಖ ಆಧಾರ ಸ್ತಂಬವಾಗಿದ್ದು, ಕೃಷಿ ಹಾಗೂ ರೈತರು ಎದುರಿಸುತ್ತಿರುವ ಸವಾಲುಗಳನ್ನು ಸ್ವೀಕರಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸವನ್ನು ವಿವಿ, ಸಂಶೋಧಕರು ಮಾಡಬೇಕು ಎಂದರು.ಕೃಷಿ ಕ್ಷೇತ್ರದ ಮೇಲೆ ದೇಶದ ಆರ್ಥಿಕತೆ ಅವಲಂಬಿತವಾಗಿದೆ. ದೇಶದ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಕೃಷಿ ಪೂರಕವಾಗಿದೆ. ಇಂದು ನಡೆದ ಸಮಾರಂಭದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿನಿಯರು ಕೃಷಿ ಶಿಕ್ಷಣ ಪಡೆದಿದ್ದಾರೆ. ಅದಲ್ಲಿಯೂ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾಗಿರುವುದು ವಿಶೇಷವಾದ ಸಂಗತಿಯಾಗಿದೆ ಎಂದು ಹೇಳಿದರು.
ರೈತರಿಗೆ ಬೇಸಾಯದಲ್ಲಿ ಕಂಡುಬರುವ ರೋಗಗಳ ಕುರಿತು ಹಾಗೂ ಬೆಳೆಗಳ ವಿವಿಧ ಪರೀಕ್ಷೆಗಳನ್ನು ಕೈಗೊಂಡು ರೋಗಗಳನ್ನು ನಿರ್ಮೂಲನೆ ಮಾಡುವ ಕೀಟನಾಶಕಗಳ ಬಗ್ಗೆ ಉತ್ತಮ ಮಾಹಿತಿ ನೀಡುವಲ್ಲಿ ಉತ್ತಮ ಕಾರ್ಯವನ್ನು ನಿರ್ವಹಿಸುತ್ತಿದೆ.
ಸಮಾರಂಭದಲ್ಲಿ ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ (ಐಸಿಎಆರ್) ಕೃಷಿ ತಾಂತ್ರಿಕತೆ ವಿಭಾಗದ ಉಪ ಮಹಾನಿರ್ದೇಶಕ ಡಾ.ಎಸ್.ಎನ್ ಝಾ ಅವರು ಘಟಿಕೋತ್ಸವ ಭಾಷಣ ನೆರವೇರಿಸಿದರು.
ಈ ಸಂದರ್ಭದಲ್ಲಿ ರಾಯಚೂರು ವಿವಿಯ ಕುಲಪತಿ ಹರೀಶ ರಾಮಸ್ವಾಮಿ, ಜಿಪಂ ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಸೇರಿದಂತೆ ವಿವಿದ ವ್ಯವಸ್ಥಾಪನಾ ಮಂಡಳಿ ಸದಸ್ಯರು, ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು, ವಿವಿ ಬೋಧಕ-ಬೋಧಕೇತರ ಸಿಬ್ಬಂದಿ, ಕೃಷಿ ವಿದ್ಯಾರ್ಥಿಗಳು, ಪಾಲಕರು ಉಪಸ್ಥಿತರಿದ್ದರು.