ಅಂಗಾಂಗ ಕಳ್ಳಸಾಗಾಣಿಕೆಯಂತಹ ಅಮಾನವೀಯ ಚಟುವಟಿಕೆಗಳಿಗೆ ಬಳಸುವುದೇ ಮಾನವ ಕಳ್ಳ ಸಾಗಾಣಿಕೆಯಾಗಿದೆ.
ಕೆಜಿಎಫ್:ಮಾನವ ಕಳ್ಳ ಸಾಗಾಣಿಕೆ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಈ ಸಮಸ್ಯೆ ತಡೆಗಟ್ಟಲು ಎಲ್ಲರೂ ಸೇರಿ ಶ್ರಮಿಸಬೇಕೆಂದು ಅಪರ ಸಿವಿಲ್ ನ್ಯಾಯಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸದಸ್ಯರಾದ ಶೆಮಿದಾ ಕೆ. ತಿಳಿಸಿದರು.ಕೆಜಿಎಫ್ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಜಂಟಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮಾನವ ಕಳ್ಳಸಾಗಣಿಕೆ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಮೋಸ, ಬೆದರಿಕೆ ಅಥವಾ ಬಲವಂತದಿಂದ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸುವುದು, ಲೈಂಗಿಕ ಶೋಷಣೆ ಅಥವಾ ಇತರೆ ಕೆಲಸ ಮಾಡಿಸುವುದು, ಅಂಗಾಂಗ ಕಳ್ಳಸಾಗಾಣಿಕೆಯಂತಹ ಅಮಾನವೀಯ ಚಟುವಟಿಕೆಗಳಿಗೆ ಬಳಸುವುದೇ ಮಾನವ ಕಳ್ಳ ಸಾಗಾಣಿಕೆಯಾಗಿದೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ವಿಶ್ವದಾದ್ಯಂತ ದೊಡ್ಡ ಅಪರಾಧವಾಗಿ ಪರಿಗಣಿಸಲಾಗಿದೆ. ಮಹಿಳೆಯರು, ಮಕ್ಕಳು ಮತ್ತು ಆರ್ಥಿಕವಾಗಿ ದುರ್ಬಲ ವರ್ಗದ ಜನರು ಹೆಚ್ಚಾಗಿ ಇದರ ಬಲಿಯಾಗುತ್ತಾರೆ ಎಂದರು.ಡಿವೈಎಸ್ಪಿ, ಲಕ್ಷ್ಮಯ್ಯ ಮಾತನಾಡಿ, ಮಕ್ಕಳ ರಕ್ಷಣಾ ನೀತಿ ೨೦೧೬ ಪರಿಷ್ಕೃತ ೨೦೨೨ರ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಪಾಲಿಸಬೇಕಾದ ನಿಯಮಗಳ ಕುರಿತು ಪ್ರತಿಯೊಂದು ಶಾಲೆ, ಕಾಲೇಜು ತನ್ನದೇ ಆದ ಲಿಖಿತ ಮಕ್ಕಳ ರಕ್ಷಣಾ ನೀತಿ ಹೊಂದಿರಬೇಕು ಎಂದರು.
ವಕೀಲರ ಸಂಘದ ಅಧ್ಯಕ್ಷರಾದ ಎಸ್.ಎನ್.ರಾಜಗೋಪಾಲಗೌಡ ಮಾತನಾಡಿದರು. ಈ ಸಂದರ್ಭದಲ್ಲಿ ಒಂದನೇ ಅಪರ ಸಿವಿಲ್ ನ್ಯಾಯಾಧೀಶರಾದ ಅಶ್ವಿನಿ ವಿ., ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಎಲ್.ನರಸಿಂಹಮೂರ್ತಿ, ಕ್ಷೇತ್ರಶಿಕ್ಷಣಾಧಿಕಾರಿ ಬಿ.ಜಿ. ನಾರಾಯಣಸ್ವಾಮಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ನಾಗರಾಜ್ ಇತರ ಗಣ್ಯರು ಮಾನವ ಕಳ್ಳ ಸಾಗಣಿಕೆ ಕುರಿತು ಅರಿವು ಮೂಡಿಸಿದರು.
೩೦ಕೆಜಿಎಫ್೨ವಿಶ್ವ ಮಾನವ ಕಳ್ಳ ಸಾಗಣಿಕೆ ವಿರೋಧಿ ದಿನಾಚರಣೆ ಉದ್ಘಾಟಿಸಿದ ಗಣ್ಯರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.