ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ
ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಸಾವಿರಾರು ಉಪನ್ಯಾಸಕರ ಮೇಲೆ ನೇರ ಪರಿಣಾಮ ಬೀರುವ ಈ ಮಹತ್ವದ ನಿರ್ಧಾರವನ್ನು ಸರ್ಕಾರವು ಉಪನ್ಯಾಸಕರು, ಪ್ರಾಂಶುಪಾಲರು, ವಿದ್ಯಾರ್ಥಿಗಳು, ಪೋಷಕರು, ವಿಶ್ವವಿದ್ಯಾಲಯಗಳು, ಶಿಕ್ಷಣ ತಜ್ಞರು ಹಾಗೂ ಇತರ ಹಿತಾಸಕ್ತ ಪಕ್ಷಗಳೊಂದಿಗೆ ಯಾವುದೇ ಸಮಾಲೋಚನೆ ನಡೆಸದೆ, ಅಧ್ಯಯನ ಕೈಗೊಳ್ಳದೆ ಏಕಪಕ್ಷೀಯವಾಗಿ ಪ್ರಕಟಿಸಿರುವುದು ಅಸಹನೀಯ ಮತ್ತು ಯಾವುದೇ ಪ್ರಜಾಸತ್ತಾತ್ಮಕ ಸರ್ಕಾರದ ಲಕ್ಷಣವಲ್ಲ ಎಂದು ಸ್ಪಷ್ಟಪಡಿಸಿವೆ.
ವೈಜ್ಞಾನಿಕ ಅಧ್ಯಯನ, ಶೈಕ್ಷಣಿಕ ಆಧಾರ ಹಾಗೂ ಹಿತಾಸಕ್ತ ಪಕ್ಷಗಳ ಸಮಾಲೋಚನೆ ಇಲ್ಲದೆ ಈ ಕರಡು ಮುಂದಿಡಲಾಗಿದೆ. ಶಿಕ್ಷಣ ವ್ಯವಸ್ಥೆಯ ಮೇಲೆ ನಡೆಸುತ್ತಿರುವ ಆಡಳಿತಾತ್ಮಕ ಪ್ರಯೋಗವೇ ಹೊರತು ಸುಧಾರಣೆ ಅಲ್ಲ. ಪ್ರೌಢಶಿಕ್ಷಣದಲ್ಲಿ ಶಿಕ್ಷಕರ ಕೊರತೆ ಇದ್ದಲ್ಲಿ ಸರ್ಕಾರ ತಕ್ಷಣವೇ ಶಿಕ್ಷಕರ ನೇರ ನೇಮಕಾತಿ ನಡೆಸಬೇಕು. ಬಡ್ತಿ ಮೂಲಕ ಹುದ್ದೆಗಳನ್ನು ಭರ್ತಿ ಮಾಡಬೇಕು. ಹೆಚ್ಚುವರಿ ಹುದ್ದೆಗಳನ್ನು ಸೃಷ್ಟಿಸಬೇಕು. ಸಂಬಂಧಿತ ವೃಂದದಲ್ಲೇ ಸಮರ್ಪಕ ಸಿಬ್ಬಂದಿ ನಿಯೋಜಿಸಬೇಕು. ವೈಜ್ಞಾನಿಕ ಹಾಗೂ ಸಮಗ್ರ ಮಾನವ ಸಂಪನ್ಮೂಲ ಯೋಜನೆ ರೂಪಿಸಬೇಕು ಎಂದು ಆಗ್ರಹಿಸಿ ಮತ್ತು ಪಿಯು ಉಪನ್ಯಾಸಕರನ್ನು ಪ್ರೌಢಶಾಲೆಗಳಿಗೆ ನಿಯೋಜನೆ ಕ್ರಮದ ಕರಡು ನಿಯಮಾವಳಿ ವಿರೋಧಿಸಿ ಆರಂಭಿಕವಾಗಿ ಜುಲೈ ಮೊದಲ ವಾರದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ರಾಜ್ಯಮಟ್ಟದ ಧರಣಿ ನಡೆಸಲು ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.ಸುದ್ದಿಗೊಷ್ಠಿಯಲ್ಲಿ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಎಂ.ಎನ್. ಕೃಷ್ಣಪ್ಪ, ಉಪಾಧ್ಯಕ್ಷೆ ರೆಡ್ಡಮ್ಮ, ಪ್ರಧಾನ ಕಾರ್ಯದರ್ಶಿ ಸಿ. ಮಧುಸೂಧನ,ಖಜಾಂಚಿ ಎ. ಕಾಂತರಾಜು, ಪ್ರಧಾನ ಸಂಘಟನಾ ಕಾರ್ಯದರ್ಶಿ ಕೆ.ಎನ್. ಶ್ರೀನಿವಾಸಯ್ಯ, ಕಾರ್ಯದರ್ಶಿ ಕೆ.ವಿ. ಶ್ರೀನಿವಾಸ್, ಜಂಟಿ ಕಾರ್ಯದರ್ಶಿ ಬಿ.ಕೆ. ರವಿ, ಸಂಚಾಲಕ ಹೆಚ್.ಸಿ. ಮುನಿರಾಜು ಇದ್ದರು.