ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ನೌಕರರು ಸರ್ಕಾರದಿಂದ 7ನೇ ವೇತನ ಆಯೋಗ ರಚನೆ ಮಾಡಬೇಕು ಹಾಗೂ ಎನ್‌ಪಿಎಸ್ ಪಂಚಣಿ ಪದ್ಧತಿ ರದ್ದುಗೊಳಿಸಬೇಕೆಂದು ಒತ್ತಾಯ ಮಾಡಿದ್ದೀರಾ. ಮುಂದಿನ ದಿನಗಳಲ್ಲಿ ಎರಡು ಸಮಸ್ಯೆಯನ್ನು ಬಗೆಹರಿಸುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಭರವಸೆ ನೀಡಿದರು.
ಸರ್ಕಾರಿ ನೌಕರರು ಒತ್ತಡದಲ್ಲಿ ಬದುಕು ನಡೆಸುತ್ತಾರೆ. ನೌಕರರು ಒತ್ತಡ ಕಡಿಮೆ ಮಾಡಿಕೊಳ್ಳಲು ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.ನೌಕರರ ಸಂಘದ ಅಧ್ಯಕ್ಷ ಡಾ.ಸಿ.ಎ.ಅರವಿಂದ್ ಮಾತನಾಡಿ, ಶಾಸಕರು ನೌಕರರು ಬೇಡಿಕೆ ಈಡೇರಿಸಲು ಆಶ್ವಾಸನೆ ನೀಡಿದ್ದಾರೆ. ಕ್ರೀಡೆ ದೈಹಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು.
ಬಹುತೇಕ ನೌಕರರು ಓದಿಗೂ ಕೆಲಸ ಮಾಡುತ್ತಿರುವ ಕೆಲಸಕ್ಕೂ ಯಾವುದೇ ಸಂಬಂಧವಿಲ್ಲದೆ ಕೆಲಸ ಮಾಡುತ್ತಿದ್ದಾರೆ. ನೌಕರರಲೂ ಸಾಕಷ್ಟು ಪ್ರತಿಭೆ, ಕ್ರೀಡಾಪಟುಗಳಿದ್ದಾರೆ. ಅವರನ್ನು ಗುರುತಿಸುವ ಕೆಲಸವನ್ನು ಇಂತಹ ವೇದಿಕೆ ಮಾಡುತ್ತಿದೆ ಎಂದರು.
ಈ ವೇಳೆ ತಹಸೀಲ್ದಾರ್ ಶ್ರೇಯಸ್, ಮಂಜುನಾಥ್, ಕೇಶವಮೂರ್ತಿ, ಯುವರಾಜು, ವರುಣ್, ವಿಜಯ್‌ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.