ಸಂವಿಧಾನ ಬದಲಾಯಿಸ ಹೊರಟರೆ ಹೋರಾಟ

KannadaprabhaNewsNetwork |  
Published : Dec 29, 2023, 01:30 AM ISTUpdated : Dec 29, 2023, 01:31 AM IST
28ಕೆಆರ್ ಎಂಎನ್ 17ರಾಮನಗರದ ಗುರುಭವನದಲ್ಲಿ ನಡೆದ ಸಮತಾ ಸೈನಿಕ ದಳ ಮತ್ತು ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾದ ಜಿಲ್ಲಾ ನೂನತ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.  | Kannada Prabha

ಸಾರಾಂಶ

ರಾಮನಗರ: ದೇಶ, ರಾಜ್ಯವನ್ನಾಳಿದ ಎಲ್ಲಾ ಪಕ್ಷಗಳು ದಲಿತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಾ ಬಂದಿದೆ. ಈಗ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡುತ್ತಿವೆ. ಅಂತಹ ಸಂದರ್ಭ ಬಂದರೆ ಮತ್ತೊಂದು ಭೀಮಾ ಕೋರೆಗಾಂವ್ ಹೋರಾಟ ಮಾಡಬೇಕಾಗುತ್ತದೆ ಎಂದು ಸಮತಾ ಸೈನಿಕದಳ ರಾಜ್ಯ ಕಾರ್ಯಾಧ್ಯಕ್ಷ ಡಾ. ಜಿ.ಗೋವಿಂದಯ್ಯ ಎಚ್ಚರಿಸಿದರು.

ರಾಮನಗರ: ದೇಶ, ರಾಜ್ಯವನ್ನಾಳಿದ ಎಲ್ಲಾ ಪಕ್ಷಗಳು ದಲಿತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಾ ಬಂದಿದೆ. ಈಗ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡುತ್ತಿವೆ. ಅಂತಹ ಸಂದರ್ಭ ಬಂದರೆ ಮತ್ತೊಂದು ಭೀಮಾ ಕೋರೆಗಾಂವ್ ಹೋರಾಟ ಮಾಡಬೇಕಾಗುತ್ತದೆ ಎಂದು ಸಮತಾ ಸೈನಿಕದಳ ರಾಜ್ಯ ಕಾರ್ಯಾಧ್ಯಕ್ಷ ಡಾ. ಜಿ.ಗೋವಿಂದಯ್ಯ ಎಚ್ಚರಿಸಿದರು.

ನಗರದಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್‌ ಇಂಡಿಯಾ (ಆರ್‌ಪಿಐ) ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ನವರಿಗೆ ಮಾನ ಮರ್ಯಾದೆ ಇಲ್ಲ. ಈ ಹಿಂದೆಯೇ ಖರ್ಗೆ ಅವರನ್ನು ಸಿಎಂ ಮಾಡಲಾಗದವರು ಈಗ ಅವರನ್ನು ಪಿಎಂ ಮಾಡುವ ಬಗ್ಗೆ ಹೇಳುತ್ತಿದ್ದಾರೆ. ನಿಮಗೆ ದಲಿತ ನಾಯಕರು ಮತ್ತು ಮತದಾರು ಚುನಾವಣೆಗಷ್ಟೆ ಬೇಕು ಎಂದು ಟೀಕಿಸಿದರು.

ಕರ್ನಾಟಕದಲ್ಲಿ 2004 ರಲ್ಲೇ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಬಹುದಿತ್ತು. ಆದರೆ, ಮಾಡಲಿಲ್ಲ. ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಮಾಡಲು ಇದುವರೆಗೂ ಸಾಧ್ಯವಾಗಲಿಲ್ಲ. ಈಗ ಪಕ್ಷಕ್ಕೆ ಕಷ್ಟ ಬಂದಿದೆ ಎಂದು ದಲಿತರ ಹೆಸರೇಳುತ್ತಿದ್ದಾರೆ.

ದಲಿತರಿಗೆ ಸಾಮಾಜಿಕ ನ್ಯಾಯ ಸಿಗುತ್ತಿಲ್ಲ. ನಮ್ಮನ್ನಾಳಿದ ಪಕ್ಷಗಳು ದಲಿತ ಮತದಾರರನ್ನು, ಮುಖಂಡರನ್ನು ತಮಗೆ ಬೇಕಾದ ರೀತಿಯಲ್ಲಿ ಬಳಸಿಕೊಂಡು ರಾಜಕೀಯವಾಗಿ ಬೆಳೆಯಲು ಅವಕಾಶ ನೀಡದೆ ದಲಿತರನ್ನು ಮರೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಲಿತರು ಸಂವಿಧಾನದತ್ತ ಹಕ್ಕುಗಳನ್ನು ಬಳಸಿಕೊಂಡು ಸ್ವಾವಲಂಬಿಗಳಾಗಬೇಕು. ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸಬೇಕು. ಇದಕ್ಕಾಗಿ ರಿಪಬ್ಲಿಕನ್ ಪಾರ್ಟಿ ಆಫ್‌ ಇಂಡಿಯಾ ಪಕ್ಷವನ್ನು ಸಂಘಟಿಸುತ್ತಿದ್ದೇವೆ. ಡಾ.ಬಿ.ಆರ್.ಅಂಬೇಡ್ಕರ್‌ ಸಂವಿಧಾನದ ಮೂಲಕ ಎಲ್ಲವನ್ನೂ ಕೊಟ್ಟಿದ್ದಾರೆ. ಸಂವಿಧಾನ ರಕ್ಷಣೆ ನಮ್ಮೆಲ್ಲರ ಹೊಣೆ. ಇದಕ್ಕಾಗಿ ರಿಪಬ್ಲಿಕನ್ ಪಾರ್ಟಿ ಆಫ್‌ ಇಂಡಿಯಾ ದೇಶದ ಚುಕ್ಕಾಣಿ ಹಿಡಿಯಲು ನೂತನ ಪದಾಧಿಕಾರಿಗಳು ಪಕ್ಷವನ್ನು ಸಂಘಟಿಸಬೇಕು ಎಂದರು.

ಸಮತಾ ಸೈನಿಕ ದಳ ರಾಜ್ಯ ಪ್ರಧಾನ ಕಾರ್ಯದರ್ಶಿ ವೆಂಕಟರಮಣಪ್ಪ ಮಾತನಾಡಿ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೋಸ್ಕರ ಪರಿಶಿಷ್ಟರಿಗೆ ಮೀಸಲಾದ 11 ಸಾವಿರ ಕೋಟಿ ಹಣವನ್ನು ಬಳಕೆ ಮಾಡುತ್ತಿದೆ. ಇದರಿಂದ ಸಮಾಜ ಕಲ್ಯಾಣ ಇಲಾಖೆ, ಅಂಬೇಡ್ಕರ್‌ ಅಭಿವೃದ್ಧಿ ನಿಗಮ ಮುಂತಾದ ಇಲಾಖೆಗಳಲ್ಲಿ ಹಣ ಇಲ್ಲದೇ ಸಾಕಷ್ಟು ತೊಂದರೆಯಾಗಿದೆ. ಈ ಬಗ್ಗೆ ಪಕ್ಷ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.

ಆರ್‌ಪಿಐ ರಾಜ್ಯಾಧ್ಯಕ್ಷ ಸತೀಶ್ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್‌ ಅವರು ಕಟ್ಟಿದ ಪಕ್ಷ . ದೇಶದಲ್ಲಿ ಸ್ವಚ್ಚ ಆಡಳಿತ ನೀಡುವುದು ಪಕ್ಷದ ಗುರಿಯಾಗಿದೆ. ಅಂಬೇಡ್ಕರ್ ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿ ಕಲುಷಿತಗೊಂಡ ರಾಜಕೀಯವನ್ನು ಸರಿಪಡಿಸುತ್ತೇವೆ ಎಂದರು.

ಸಭೆಯಲ್ಲಿ ಮುಖಂಡರಾದ ಬನಶಂಕರಿ ನಾಗು, ವಕೀಲ ಪುರುಷೋತ್ತಮ್, ಚಂದ್ರು, ಶೋಭಾ, ತತ್ಸಮ್‌ ಇದ್ದರು. ಬಾಕ್ಸ್‌...............

ಪದಾಧಿಕಾರಿಗಳ ಆಯ್ಕೆ:

ಪಕ್ಷದ ಜಿಲ್ಲಾ ಗೌರವಾಧ್ಯಕ್ಷ ಜಕ್ಕಸಂದ್ರ ಕುಮಾರ್, ಜಿಲ್ಲಾಧ್ಯಕ್ಷ ಲಕ್ಷ್ಮಣ್ ಕಲ್ಬಾಳ್, ಜಿಲ್ಲಾ ಕಾರ್ಯಾಧ್ಯಕ್ಷ ಮರಳವಾಡಿ ಮಂಜು, ಜಿಲ್ಲಾ ಉಪಾಧ್ಯಕ್ಷಕೆ.ಆರ್.ಗೋವಿಂದಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಾಲೆ ವೆಂಕಟೇಶ್, ಸಂಘಟನಾ ಕಾರ್ಯದರ್ಶಿ ಶಿವಪ್ಪ, ಜಿಲ್ಲಾ ಕಾರ್ಯದರ್ಶಿ ಎಡುವನಹಳ್ಳಿ ಚಂದ್ರು, ಉಪಾಧ್ಯಕ್ಷ ಅಪ್ಪಗೆರೆ ಶ್ರೀನಿವಾಸ್, ಜಿಲ್ಲಾ ಖಜಾಂಚಿ ಮರಳವಾಡಿ ರವಿಕುಮಾರ್, ಯುವ ಘಟಕದ ಜಿಲ್ಲಾಧ್ಯಕ್ಷ ಜಿ.ಕೆ.ಸತೀಶ್‌ ಇವರನ್ನು ರಿಪಬ್ಲಿಕನ್ ಪಾರ್ಟಿ ಆಫ್‌ ಇಂಡಿಯಾದ ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಯಿತು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ