ವಿದ್ಯಾರ್ಥಿಗೆ ಹಲ್ಲೆ; ನಿರ್ವಾಹಕ ಅಮಾನತಿಗೆ ಪಟ್ಟು

KannadaprabhaNewsNetwork |  
Published : Sep 24, 2026, 01:30 AM IST
ಚಿತ್ರ 23ಬಿಡಿಆರ್50 | Kannada Prabha

ಸಾರಾಂಶ

ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಔರಾದ್ ಘಟಕದ ನಿರ್ವಾಹಕ ಧೂಳಪ್ಪ ಅವರನ್ನು ಕೂಡಲೇ ಅಮಾನತು ಮಾಡಬೇಕೆಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬುಧವಾರ ಬೆಳಗ್ಗೆ ಪಟ್ಟಣದ ಬಸ್‌ ನಿಲ್ದಾಣದ ಎದುರು ಬೃಹತ್ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಔರಾದ್ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಔರಾದ್ ಘಟಕದ ನಿರ್ವಾಹಕ ಧೂಳಪ್ಪ ಅವರನ್ನು ಕೂಡಲೇ ಅಮಾನತು ಮಾಡಬೇಕೆಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬುಧವಾರ ಬೆಳಗ್ಗೆ ಪಟ್ಟಣದ ಬಸ್‌ ನಿಲ್ದಾಣದ ಎದುರು ಬೃಹತ್ ಪ್ರತಿಭಟನೆ ನಡೆಸಿದರು.ಬೆಳಗ್ಗೆ 7 ಗಂಟೆಗೆ ಆರಂಭವಾದ ಪ್ರತಿಭಟನೆಯಲ್ಲಿ ಎಬಿವಿಪಿ ಕಾರ್ಯಕರ್ತರು ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ನಿಲ್ದಾಣದ ಎದುರು ಜಮಾಯಿಸಿ, ನಿರ್ವಾಹಕ ಧೂಳಪ್ಪ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕೆಲಕಾಲ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದ್ದರಿಂದ ಸಾರಿಗೆ ಸಂಚಾರಕ್ಕೆ ಅಡಚಣೆ ಉಂಟಾಯಿತು. ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿ ಹಲ್ಲೆ ನಡೆಸಿದ ಘಟನೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಗಂಭೀರವಾಗಿ ಪರಿಗಣಿಸಿ ಕೂಡಲೇ ಕ್ರಮ ಕೈಗೊಳ್ಳಬೇಕು. ನಿರ್ವಾಹಕಕನನ್ನು ಅಮಾನತು ಮಾಡಿ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನಿರ್ವಾಹಕನ ವಿರುದ್ಧ ಕ್ರಮ ಕೈಗೊಳ್ಳುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಎಬಿವಿಪಿ ಕಾರ್ಯಕರ್ತರು ಪಟ್ಟು ಹಿಡಿದರು.ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಘಟಕ ವ್ಯವಸ್ಥಾಪಕ ಮಲ್ಲಿಕಾರ್ಜುನ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ಆದರೆ, ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅಮಾನತು ಕುರಿತು ಸ್ಪಷ್ಟ ಭರವಸೆ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು. ಬಳಿಕ ಸಾರಿಗೆ ಇಲಾಖೆಯ ಡಿಟಿಒ ಶಾರದಾದೇವಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ನಿರ್ವಾಹಕ ಧೂಳಪ್ಪ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳ ಲಾಗುವುದು ಎಂದು ಭರವಸೆ ನೀಡಿದರು. ಆದರೆ, ವಿದ್ಯಾರ್ಥಿಗಳು ಅಮಾನತು ಮಾಡಲೇಬೇಕು ಎಂದು ಘೋಷಣೆ ಕೂಗಿದರು. ಅಧಿಕಾರಿಗಳ ಭರವಸೆ ಹಿನ್ನೆಲೆ ಯಲ್ಲಿ ಬೆಳಗ್ಗೆ 9ರ ಸುಮಾರಿಗೆ ಪ್ರತಿಭಟನೆ ಅಂತ್ಯಗೊಂಡಿತು.

ಇದೇ ವೇಳೆ ಔರಾದ್–ಬೀದರ್‌ ಮಾರ್ಗದಲ್ಲಿ ಸಮರ್ಪಕವಾಗಿ ಬಸ್‌ಗಳು ಸಂಚರಿಸುತ್ತಿಲ್ಲ. ಪ್ರತಿನಿತ್ಯ ಬೆಳಗ್ಗೆ ಔರಾದ್‌ನಿಂದ ಬೀದರ ಹಾಗೂ ಸಂಜೆ ಬೀದರ್‌ನಿಂದ ಔರಾದ್‌ಗೆ ತೆರಳಲು ವಿದ್ಯಾರ್ಥಿಗಳು ಬಸ್‌ಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ವಿದ್ಯಾರ್ಥಿಗಳ ತರಗತಿಗಳಿಗೆ ತೆರಳಲು ಹಾಗೂ ಮನೆಗೆ ಮರಳಲು ತೊಂದರೆಯಾಗುತ್ತಿದೆ. ಕೂಡಲೇ ಹೆಚ್ಚುವರಿ ಬಸ್‌ಗಳನ್ನು ಓಡಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ವಿಭಾಗ ಸಂಚಾಲಕ ಪವಾನ ಕುಂಬಾರ, ಜಿಲ್ಲಾ ಸಂಚಾಲಕ ನಾಗರಾಜ ಸುಲ್ತಾನಪುರೆ, ಸುರೇಶ, ಹಿರಿಯ ಕಾರ್ಯಕರ್ತರಾದ ಅಶೋಕ ಶೆಂಬೆಳ್ಳಿ, ಹಾವಪ್ಪ ದ್ಯಾಡೆ, ಅಂಬಾದಾಸ ನಳಗೆ, ಅಭಿಷೇಕ ಮಾನೆ, ಅಭಿಷೇಕ ಪಾಟೀಲ್, ಕಲ್ಲೇಶ ಬಿರಾದಾರ್, ಅಂಬಿಕಾ, ಭಾಗ್ಯಲತಾ, ಮಾರುತಿ ಉದಗೀರೆ, ಪವಾನ ಬುಕ್ಕಾ, ಜಗದೀಶ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಾಂಚಜನ್ಯ ಗಣಪತಿ ಅದ್ಧೂರಿ ವಿಸರ್ಜನಾ ಮೆರವಣಿಗೆ
ವಿದ್ಯಾಭ್ಯಾಸ ವೇಳೆ ಕಲಿಕೆ ತುಡಿತ, ಉತ್ಸಾಹ ಸ್ವಾಭಿಮಾನದ ಬದುಕಿಗೆ ಸಹಕಾರಿ: ಡಾ. ಕೃಷ್ಣೇಗೌಡ