ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ವಿದ್ಯಾರ್ಥಿ ಕೇಂದ್ರಿತ ಉನ್ನತ ಶಿಕ್ಷಣ ವಿಚಾರ ಸಂಕಿರಣ ಸಂಪನ್ನ

KannadaprabhaNewsNetwork |  
Published : Mar 05, 2025, 12:31 AM IST
04ಪಿಪಿಸಿ | Kannada Prabha

ಸಾರಾಂಶ

ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಹಾಗೂ ಪೂರ್ಣಪ್ರಜ್ಞ ಸಮೂಹ ಶಿಕ್ಷಣ ಸಂಸ್ಥೆ ಇದರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣದ ಬಗ್ಗೆ ವಿಚಾರ ಸಂಕಿರಣ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಹಾಗೂ ಪೂರ್ಣಪ್ರಜ್ಞ ಸಮೂಹ ಶಿಕ್ಷಣ ಸಂಸ್ಥೆ ಇದರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣದ ಬಗ್ಗೆ ವಿಚಾರ ಸಂಕಿರಣ ನಡೆಯಿತು.

ವಿಚಾರಸಂಕಿರಣವನ್ನು ಉದ್ಘಾಟಿಸಿದ ನಿಟ್ಟೆ ಸಂಸ್ಥೆಯ ಪ್ರೊ.ಡಾ.ಗೋಪಾಲ ಮುಗೇರಾಯ ಅವರು ಆತ್ಮವಿಶ್ವಾಸ, ಆರೋಗ್ಯ, ಅಪರಿಮಿತ ಪರಿಶ್ರಮ ಇವು ವಿದ್ಯಾರ್ಥಿಗಳ ಯಶಸ್ಸಿಗೆ ದಾರಿದೀಪವಾಗಲಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಜ್ಞಾನಾಧಾರಿತ ಶಿಕ್ಷಣ ವ್ಯವಸ್ಥೆಯೋದೇ ಸೂಕ್ತ ಮಾರ್ಗ. ಇಲ್ಲಿ ಶಿಲ್ಪಿಗಳಂತೆ ಇರುವ ಶಿಕ್ಷಕರ ಪಾತ್ರವೂ ಹಿರಿದಾದದ್ದು. ಇಂದಿನ ಶಿಕ್ಷಣ ಪದ್ದತಿಯನ್ನು ಮೌಲ್ಯಾಧಾರಿತ ಶಿಕ್ಷಣ ವ್ಯವಸ್ಥೆಯನ್ನಾಗಿಸುವಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಒಟ್ಟಾಗಿ ಶ್ರಮವಹಿಸಬೇಕಿದೆ ಎಂದು ಅಭಿಪ್ರಾಯಪಟ್ಟರು. ಪೂರ್ಣಪ್ರಜ್ಞ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ.ಎ.ಪಿ.ಭಟ್, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮಂಗಳೂರು ವಿಮಾನ ನಿಲ್ದಾಣದ ನಿವೃತ್ತ ಮುಖ್ಯ ಅಧಿಕಾರಿ ಎಂ.ಆರ್.ವಾಸುದೇವ್, ಕಾರ್ಕಳದ ನ್ಯಾಯವಾದಿ ಸುವ್ರತ್ ಕುಮಾರ್, ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್ಮೆಂಟ್‌ನ ನಿರ್ದೇಶಕ ಡಾ.ಪಿ.ಎಸ್. ಐತಾಳ್, ಪೂರ್ಣಪ್ರಜ್ಞ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ರಾಮು ಎಲ್., ಕಾರ್ಯಕ್ರಮ ಸಂಯೋಜಕ ಡಾ.ಸುರೇಂದ್ರ ಶೆಟ್ಟಿ ಅವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಡಾ.ಪಿ.ಎಸ್. ಐತಾಳ್ ಹಾಗೂ ಡಾ.ರಾಮು ಎಲ್. ಅವರು ಉನ್ನತ ಶಿಕ್ಷಣದ ಕುರಿತು ವಿಶೇಷ ಉಪನ್ಯಾಸ ನಡೆಸಿಕೊಟ್ಟರು.ಕೆ.ಆರ್.ಎಂ.ಎಸ್.ಎಸ್.ನ ಮಂಗಳೂರು ವಿಭಾಗದ ಕಾರ್ಯದರ್ಶಿಗಳಾದ ರಾಜೇಶ್ ಅವರು ಶಿಕ್ಷಕರ ಸಂಘಟನೆಯ ಕುರಿತು ಮಾಹಿತಿ ನೀಡಿದರು. ಡಾ.ಸುರೇಂದ್ರ ಶೆಟ್ಟಿ ಸ್ವಾಗತಿಸಿದರು. ಡಾ.ಭೈರವಿ ಆರ್. ಪಂಡ್ಯಾ ವಂದಿಸಿದರು. ಜಯಶ್ರೀ ಎ.ನಾಯಕ್ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ