ಡಿಎಲ್‌ ಇಲ್ಲದೆ ವಾಹನ ಚಲಾಯಿಸಿ ಅಪಘಾತ: ಕೇಸ್‌ಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

KannadaprabhaNewsNetwork |  
Published : Dec 22, 2024, 01:31 AM IST
ಧನುಷ್‌  | Kannada Prabha

ಸಾರಾಂಶ

ತಡಂಬೈಲ್ ವೆಂಕಟ್ರಮಣ ಕಾಲೊನಿ ನಿವಾಸಿ ಮೋಹನ್ ಆಚಾರ್ಯ ಅವರ ಪುತ್ರ ಧನುಷ್ (20) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೂಲ್ಕಿ: ಡ್ರೈವಿಂಗ್‌ ಲೈಸೆನ್ಸ್‌ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದ ವಿದ್ಯಾರ್ಥಿಯೊಬ್ಬ ಕೇಸ್‌ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್‌ ಸಮೀಪದ ತಡಂಬೈಲ್‌ ಎಂಬಲ್ಲಿ ನಡೆದಿದೆ. ತಡಂಬೈಲ್ ವೆಂಕಟ್ರಮಣ ಕಾಲೊನಿ ನಿವಾಸಿ ಮೋಹನ್ ಆಚಾರ್ಯ ಅವರ ಪುತ್ರ ಧನುಷ್ (20) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಐಟಿಐ ವಿದ್ಯಾರ್ಥಿ ಧನುಷ್‌ ಡಿಸೆಂಬರ್ 11ರಂದು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವೇಳೆ ಅಪಘಾತ ನಡೆಸಿದ್ದ. ಆತನಿಗೆ ವಾಹನ ಚಾಲನಾ ಪರವಾನಗಿ ಇರಲಿಲ್ಲ. ಅಪಘಾತ ನಡೆದ ಮತ್ತೊಂದು ದ್ವಿಚಕ್ರ ವಾಹನ ಸವಾರನೊಂದಿಗೆ ಮಾತುಕತೆ ನಡೆದು ಆತನಿಗೆ ಹಣ ನೀಡಲು ವ್ಯವಸ್ಥೆಯಾಗದ ಕಾರಣ ಹಾಗೂ ಇದರಿಂದ ಕೇಸ್ ಆದರೆ ತೊಂದರೆಯಾಗುತ್ತದೆ ಎಂದು ಹೆದರಿ ಶುಕ್ರವಾರ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸುರತ್ಕಲ್‌ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

---------

ಪ್ರತ್ಯೇಕ ಕಳವು ಪ್ರಕರಣ: ಮೂವರು ಮಹಿಳಾ ಆರೋಪಿಗಳ ಬಂಧನ

ಪುತ್ತೂರು: ಎರಡು ಪ್ರತ್ಯೇಕ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸರು ಮೂವರು ಮಹಿಳಾ ಆರೋಪಿಗಳನ್ನು ಶನಿವಾರ ಬಂಧಿಸಿ, ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.ಬೆಂಗಳೂರು ರಾರಾಜಿನಗರ ನಿವಾಸಿಗಳಾದ ಜ್ಯೋತಿ ಹಾಗೂ ಯಶೋದ ಮತ್ತು ಮಂಗಳೂರು ನೀರುಮಾರ್ಗ ನಿವಾಸಿ ವಿದ್ಯಾ ಬಂಧಿತರು.

ಡಿ.12ರಂದು ಪುತ್ತೂರು ಬಸ್‌ ನಿಲ್ದಾಣದಲ್ಲಿ ಗೋಳ್ತಮಜಲು ನಿವಾಸಿ ಸರಸ್ವತಿ ಎಂಬವರ ಬ್ಯಾಗ್‌ನಿಂದ ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಜ್ಯೋತಿ ಮತ್ತು ಯಶೋದಾಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 25 ಸಾವಿರ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.ಇನ್ನೊಂದು ಪ್ರಕರಣದಲ್ಲಿ ಡಿ.13ರಂದು ಪುತ್ತೂರು ಕೋರ್ಟ್‌ ರಸ್ತೆಯಲ್ಲಿರುವ ಜುವೆಲ್ಲರ್ಸ್‌ ಶಾಪ್‌ನಿಂದ ಚಿನ್ನ ಖರೀದಿ ನೆಪದಲ್ಲಿ 9 ಗ್ರಾಂ ತೂಕದ ಮೂರು ಉಂಗುರಗಳನ್ನು ಕಳವು ಮಾಡಲಾಗಿತ್ತು. ಪ್ರಕರಣ ಸಂಬಂದ ತನಿಖೆ ನಡೆಸುತ್ತಿದ್ದ ಪುತ್ತೂರು ನಗರ ಪೊಲೀಸರು ಮಂಗಳೂರು ನೀರುಮಾರ್ಗ ನಿವಾಸಿ ವಿದ್ಯಾಳನ್ನು ಬಂಧಿಸಿ, ಚಿನ್ನ ವಶಕ್ಕೆ ಪಡೆದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ