ವಿದ್ಯಾರ್ಥಿ ದಿಂಗತ್‌ ನಾಪತ್ತೆ: ಪೊಲೀಸ್‌ ವೈಫಲ್ಯ ಖಂಡಿಸಿ ಬೃಹತ್‌ ಪ್ರತಿಭಟನೆ

KannadaprabhaNewsNetwork | Published : Mar 2, 2025 1:15 AM

ಸಾರಾಂಶ

ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಮಡಿವಾಳ ಅವರ ಮಗ ಪಿಯುಸಿ ವಿದ್ಯಾರ್ಥಿ ದಿಗಂತ್ ‌ನಿಗೂಢ ನಾಪತ್ತೆಯಾಗಿ ಐದು ದಿನಗಳು ಕಳೆದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸ್‌ ವೈಫಲ್ಯ ಖಂಡಿಸಿ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಫರಂಗಿಪೇಟೆ ಜಂಕ್ಷನ್ ನಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಮಡಿವಾಳ ಅವರ ಮಗ ಪಿಯುಸಿ ವಿದ್ಯಾರ್ಥಿ ದಿಗಂತ್ ‌ನಿಗೂಢ ನಾಪತ್ತೆಯಾಗಿ ಐದು ದಿನಗಳು ಕಳೆದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸ್‌ ವೈಫಲ್ಯ ಖಂಡಿಸಿ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಫರಂಗಿಪೇಟೆ ಜಂಕ್ಷನ್ ನಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು.

ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಮಾನಾಡಿ, ಈ ಬಗ್ಗೆ ಪೋಲೀಸ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಮಾತನಾಡಿದ್ದೆ. ಗಾಂಜಾ ವಿರುದ್ಧ ಪೋಲೀಸರು ತನಿಖೆ ಮುಂದುವರಿಸಿ ಸೂಕ್ತವಾದ ‌ಕಾನೂನು ಕ್ರಮ ಕೈಗೊಂಡರೆ ಇಂತಹ ಘಟನೆಗಳು ಮರುಕಳಿಸಲು ಸಾಧ್ಯವಿಲ್ಲ. ಡ್ರಗ್ ಮತ್ತು ಗಾಂಜಾ ಎಂಬ ವಿಷಕಾರಿಯ ವಿರುದ್ದ ಪೋಲಿಸ್ ಇಲಾಖೆ ಟೊಂಕಟ್ಟಿ ನಿಂತು ಹಾವಳಿಯನ್ನು ಬೇರು ಸಹಿತ ಕಿತ್ತೊಗೆದು ಮುಂದಾದರೆ ಹದಿಹರೆಯದ ಬಾಲಕ ಬಾಲಕಿಯರ ನಾಪತ್ತೆ ಪ್ರಕರಣಕ್ಕೆ ಬ್ರೇಕ್ ಬೀಳುತ್ತದೆ ಎಂದರು.

ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಮಾತನಾಡಿ, ಗಾಂಜಾ ವ್ಯಸನಿಗಳ ಸಮಸ್ಯೆಯಿಂದ ಇಲ್ಲಿನ ದಾರಿಯಲ್ಲಿ ‌ನಡೆದುಕೊಂಡು ಹೋಗಲು ಸಾಧ್ಯವಾಗದೆ ಇರುವ ಬಗ್ಗೆ ಅನೇಕ ಮಹಿಳೆಯರು ‌ದೂರು ನೀಡಿದ್ದಾರೆ. ಆದರೆ ಪೋಲೀಸ್ ಇಲಾಖೆಯಿಂದ ಯಾವುದೇ ಸ್ಪಂದನೆ ಇಲ್ಲ, ಪೋಲೀಸ್ ಇಲಾಖೆಯ ಮೇಲೆ ಗೌರವ ಕಳೆದುಹೋಗಿದೆ ಎಂದರು. ಕಾನೂನು ಸುವ್ಯವಸ್ಥೆ ಹದಗೆಡುವ ಮುಂಚೆ, ಕಾನೂನನ್ನು ಕೈಗೆ ತೆಗೆದುಕೊಳ್ಳುವ ಮುಂಚೆ ಇಲಾಖೆ ಎಚ್ಚೆತ್ತುಕೊಳ್ಳುವಂತೆ ಆಗ್ರಹಿಸಿದರು.

ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಗಾಂಜಾ ಮಾಫಿಯಾ ಮಿತಿ ಮೀರಿದೆ ಎಂದರು.

ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಫರಂಗಿಪೇಟೆ ಪರಿಸರ ಗಾಂಜಾ ಮಾಫಿಯಾ ಹೆಚ್ಚಾಗಿದೆ. ಎರಡು ದಿನಗಳಲ್ಲಿ ಬಾಲಕನ ನಾಪತ್ತೆ ಪ್ರಕರಣ ಭೇದಿಸದಿದ್ದರೆ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾತನಾಡಿ, ಹಿಂದೂ ಸಂಘಟನೆಯವರು ಪ್ರತಿಬಾರಿ ರಸ್ತೆಗೆ ಇಳಿದು ಪ್ರತಿಭಟನೆ ಮಾಡುವ ಹಿಂದೂ ಸಮಾಜವನ್ನು ಕೆಣಕುವ ಕೆಲಸ ಮಾಡಬೇಡಿ. ಒಮ್ಮೆ ಹಿಂದೂ ಸಂಘಟನೆ ರಸ್ತೆಗಳಿದರೆ ಮುಂದೆ ಆಗಬಹುದಾದ ನಷ್ಟಕ್ಕೂ ನೀವು ಕಾರಣರಾಗುತ್ತೀರಿ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಪ್ರಸಾದ್ ಕುಮಾರ್ ರೈ, ರವೀಂದ್ರ ಕಂಬಳಿ, ಭರತ್ ಕುಮ್ಡೆಲು, ಉಮೇಶ್ ಶೆಟ್ಟಿ ಬರ್ಕೆ, ತಾರಾನಾಥ ಕೊಟ್ಟಾರಿ, ಫಾರೂಕ್ ಪರಂಗಿಪೇಟೆ, ರಮ್ಲಾನ್,ನಂದನ್ ಮಲ್ಯ, ಮನೋಜ್ ಆರ್ಯ, ರವೀಂದ್ರ ರೈ ಮತ್ತಿತರರು ಭಾಗಿಯಾಗಿದ್ದರು.ಹಿಂದೂ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದರ ಹಿನ್ನಲೆಯಲ್ಲಿ ಫರಂಗಿ ಪೇಟೆಯ ಎಲ್ಲಾ ಅಂಗಡಿಗಳನ್ನು ಸ್ವಯಂಪ್ರೇರಿತ ಬಂದ್ಆ ಚರಿಸಲಾಯಿತು............................

ತನಿಖೆ ತೀವ್ರ: ಎಸ್ಪಿ ಭರವಸೆಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರು, ದಿಗಂತ್‌ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ, ಇಲಾಖೆ ತನಿಖೆ ತೀವ್ರಗೊಳಿಸಿದೆ ಎಂದರು. ಈ ಪ್ರಕರಣ ಪ್ರತಿಭಟನೆ ಮಾಡುವ ಹಂತದವರೆಗೆ ಬರಬಾರದಿತ್ತು, ಆದರೆ ಕ್ಲಿಷ್ಟಕರವಾದ ಪ್ರಕರಣಗಳು ಸ್ವಲ್ಪ ಸಮಯ ಬೇಕಾಗುತ್ತದೆ. ಘಟನೆ ಬಗ್ಗೆ ನಿಮ್ಮಲ್ಲಿ ‌ಮಾಹಿತಿ ಇದ್ದರೆ ನಮ್ಮ ಜೊತೆ ಹಂಚಿಕೊಳ್ಳಿ, ನಮ್ಮ ಮೇಲೆ ಭರವಸೆ ಇರಲಿ ಎಂದರು..............................................................ಅಪರಿಚಿತ ಕಾರಿನ ಬಗ್ಗೆ ಅನುಮಾನಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ಫೆ.25ರಂದು ಸಂಜೆ 7 ಗಂಟೆಗೆ ನಾಪತ್ತೆ ಆಗಿದ್ದಾನೆ. ಇದರ ಹಿಂದೆ ಗಾಂಜಾ ಗ್ಯಾಂಗ್ ಕೈವಾಡವಿದೆ ಎಂದು ಸಂಘಟನೆಗಳು ಆರೋಪಿಸಿವೆ. ಇದೀಗ ದೇವಸ್ಥಾನದ ಬಳಿ ಅಪರಿಚಿತ ಕ್ವಾಲಿಸ್ ಕಾರೊಂದು ಓಡಾಡಿದ ದೃಶ್ಯ ಆಂಜನೇಯ ದೇವಸ್ಥಾನದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೀಗಾಗಿ ದಿಗಂತ್ ನಾಪತ್ತೆ ಹಿಂದೆ ಗಾಂಜಾ ವ್ಯಸನಿಗಳ ಕೈವಾಡವಿದೆಯೇ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

Share this article