ಮಲ್ಲಿಕಾರ್ಜುನ ಶ್ರೀ ಹೆಸರಲ್ಲಿ ವಿದ್ಯಾರ್ಥಿ ನಿಲಯ

KannadaprabhaNewsNetwork |  
Published : Aug 09, 2025, 02:03 AM IST
ಚಿತ್ರದುರ್ಗ ಎರಡನೇ ಪುಟದ ಮಿಡ್ಲ್      | Kannada Prabha

ಸಾರಾಂಶ

ಮುರುಘಾಮಠದ ಲಿಂಗೈಕ್ಯ ಜಗದ್ಗುರು ಮಲ್ಲಿಕಾರ್ಜನ ಹೆಸರಲ್ಲಿ ನಿರ್ಮಾಣಗೊಳ್ಲುತ್ತಿರುವ ವಿದ್ಯಾರ್ಥಿನಿಲಯ ಕಟ್ಟಡಕ್ಕೆ ಎಸ್ ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷ ಸಿವಯೋಗಿ ಸಿ.ಕಳಸದ ಭೂಮಿ ಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ನಗರದ ಬಸವಕೇಂದ್ರ ಮುರುಘಾಮಠದ ಲಿಂಗೈಕ್ಯ ಜಗದ್ಗುರು ಮಲ್ಲಿಕಾರ್ಜನ ಮುರುಘರಾಜೇಂದ್ರ ಸ್ವಾಮೀಜಿಯವರ ಹೆಸರಲ್ಲಿ ಬೃಹತ್ ವಿದ್ಯಾರ್ಥಿ ನಿಲಯವೊಂದು ತಲೆ ಎತ್ತಲಿದೆ.

ನಗರದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಆವರಣ (ಎಸ್‌ಜೆಎಂ ಕ್ಯಾಂಪಸ್)ನಲ್ಲಿ ಶುಕ್ರವಾರ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಲಿಂಗೈಕ್ಯ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಸ್ಮರಣೋತ್ಸವದ ನಿಮಿತ್ತ ಅವರ ಹೆಸರಿನಲ್ಲಿ ಅಂದಾಜು 13 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ 126 ಕೊಠಡಿಗಳುಳ್ಳ 4 ಅಂತಸ್ತಿನ ವಿದ್ಯಾರ್ಥಿ ನಿಲಯ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.

ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್ ಜೆಎಂ ವಿದ್ಯಾಪೀಠ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ.ಕಳಸದ , ಸದಸ್ಯರಾದ ಡಾ.ಪಿ.ಎಸ್ ಶಂಕರ್ ಗುದ್ದಲಿ ಪೂಜೆ ಮಾಡಿ ಕಾಮಗಾರಿಗೆ ಚಾಲನೆ ನೀಡಿದರು.

ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಮಹಾಸ್ವಾಮಿಗಳು, ಎಸ್.ಎನ್ ಚಂದ್ರಶೇಖರ್, ಮೋಕ್ಷಪತಿ ಮಹಾಸ್ವಾಮಿಗಳು, ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮಿಗಳು, ಗುರುಮಠಕಲ್‌ನ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿಗಳು, ಕೆಇಬಿ ಷಣ್ಮುಖಪ್ಪ, ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ಪ್ರಶಾಂತ್, ವೈದ್ಯಕೀಯ ಅಧೀಕ್ಷಕ ಡಾ.ರಾಜೇಶ್, ನಾಗೇಂದ್ರಗೌಡ, ನಾಗರಾಜ್, ಡಾ.ಕೊಟ್ರೇಶ್ ಮತ್ತು ಸಂಸ್ಥೆಯ ಎಲ್ಲಾ ಶಾಲಾ ಕಾಲೇಜುಗಳ ಮುಖ್ಯಸ್ಥರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌