ಕನ್ನಡಪ್ರಭ ವಾರ್ತೆ ಮೈಸೂರು
ಜಿಪಂನ ಡಿ. ದೇವರಾಜ ಅರಸು ಸಭಾಂಗಣದಲ್ಲಿ ಆಯೋಜಿಸಿದ್ದ ಮೈಸೂರು ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಶೈಕ್ಷಣಿಕ ಫಲಿತಾಂಶವನ್ನು ಉತ್ತಮಗೊಳಿಸುವ ಉದ್ದೇಶದಿಂದ ಆಯೋಜಿಸಿದ್ದ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿದರು.
ಉಪನ್ಯಾಸಕರು ಮಕ್ಕಳ ಸಾಮರ್ಥ್ಯವನ್ನು ಗುರುತಿಸಿ, ವೈಯಕ್ತಿಕ ಗಮನ ನೀಡುವ ಮೂಲಕ ಫಲಿತಾಂಶ ಸುಧಾರಿಸಬೇಕು. ದುರ್ಬಲ ವಿದ್ಯಾರ್ಥಿಗಳಿಗಾಗಿ ವಿಶೇಷ ತರಗತಿ, ಮರುಪಠಣ, ಪರೀಕ್ಷಾ ಪೂರ್ವ ತಯಾರಿ ಶಿಬಿರಗಳನ್ನು ಪರಿಣಾಮಕಾರಿಯಾಗಿ ನಡೆಸುವಂತೆ ಸೂಚಿಸಿದರು.ಪಿಯುಸಿ ಪರೀಕ್ಷೇಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಮಹತ್ವದ ಮಾಹಿತಿ ನೀಡಿದರು. ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಒಂದು ಮತ್ತು ಎರಡು ವಿಷಯದಲ್ಲಿ ಅನುತ್ತೀರ್ಣವಾದ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಮೇಲೆ ವಿಶೇಷ ಕಾಳಜಿ ವಹಿಸಿ ಅವರನ್ನು ಕಡ್ಡಾಯವಾಗಿ ಮುಂಬರುವ ವಾರ್ಷಿಕ ಪರೀಕ್ಷೆಯಲ್ಲಿ ಸಫಲತೆ ಕಾಣುವಲ್ಲಿ ಶ್ರಮವಹಿಸಬೇಕು ಎಂದು ಅವರು ಹೇಳಿದರು.
ಶಿಕ್ಷಕರ ಹಾಜರಾತಿ, ಪಾಠ ಬೋಧನಾ ವಿಧಾನ, ವಿದ್ಯಾರ್ಥಿಗಳ ನಿರಂತರ ಮೌಲ್ಯಮಾಪನಕ್ಕೆ ಹೆಚ್ಚಿನ ಒತ್ತು ನೀಡುವಂತೆ ಸಲಹೆ ನೀಡಿದರು.