ಶಿಕ್ಷಣ ಪಡೆಯುವ ವಿದ್ಯಾರ್ಥಿ ಜೀವನ ಸುವರ್ಣಯುಗ: ಚೇಗರಡ್ಡಿ

KannadaprabhaNewsNetwork |  
Published : Jun 30, 2025, 12:34 AM IST
ಗಜೇಂದ್ರಗಡದ ಅನ್ನದಾನೇಶ್ವರ ಪದವಿ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ವಿವಿಧ ಸಾಂಘಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದರು. | Kannada Prabha

ಸಾರಾಂಶ

ಮನುಷ್ಯನ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು, ವಿದ್ಯಾರ್ಥಿಗಳು ಗುರುಗಳು ತೋರಿಸುವ ಉತ್ತಮ ಮಾರ್ಗದಲ್ಲಿ ಸಾಗಬೇಕು ಹಾಗೂ ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ನರೇಗಲ್‌ನ ನಿವೃತ್ತ ಪ್ರಾಚಾರ್ಯ ಬಿ.ಎಸ್ ಚೇಗರಡ್ಡಿ ಹೇಳಿದರು.

ಗಜೇಂದ್ರಗಡ:ಮನುಷ್ಯನ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು, ವಿದ್ಯಾರ್ಥಿಗಳು ಗುರುಗಳು ತೋರಿಸುವ ಉತ್ತಮ ಮಾರ್ಗದಲ್ಲಿ ಸಾಗಬೇಕು ಹಾಗೂ ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ನರೇಗಲ್‌ನ ನಿವೃತ್ತ ಪ್ರಾಚಾರ್ಯ ಬಿ.ಎಸ್. ಚೇಗರಡ್ಡಿ ಹೇಳಿದರು.

ಪಟ್ಟಣದ ಪುರ್ತಗೇರಿ ಕ್ರಾಸ್ ಬಳಿ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ವಿವಿಧ ಸಾಂಘಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.ಸಮಾಜದಲ್ಲಿ ಮೌಲ್ಯಯುತ ಬದುಕನ್ನು ನಡೆಸುವಂತಾಗಲು ಶಿಕ್ಷಣ ಬಹುಮುಖ್ಯ ಪಾತ್ರ ವಹಿಸುತ್ತದೆ. ಅಂತಹ ಶಿಕ್ಷಣ ಪಡೆಯುವ ವಿದ್ಯಾರ್ಥಿ ಜೀವನ ಸುವರ್ಣಯುಗ ಇದ್ದಂತೆ. ಆದ್ದರಿಂದ ಈ ಸಮಯವನ್ನು ಎಳ್ಳಷ್ಟು ವ್ಯರ್ಥ ಮಾಡದೆ ಶಿಕ್ಷಣದೊಂದಿಗೆ ಸಂಸ್ಕಾರ ಹೊಂದಿ ತಂದೆ-ತಾಯಿಗೆ, ಗುರುಹಿರಿಯರಿಗೆ ಗೌರವ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ಪಿಯು ಕಾಲೇಜಿನ ಚೇರಮನ್‌ ವೀರಯ್ಯ ವಸ್ತ್ರದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಕ ಗಳಿಕೆ ಜೊತೆಗೆ ಮಕ್ಕಳಿಗೆ ಕೌಶಲ್ಯ, ಸಂವಹನ ಕಲೆ, ಕ್ರಿಡೆ ಹಾಗೂ ಸಾಂಘಿಕ ಚಟುವಟಿಕೆಗಳಲ್ಲಿ ತಮ್ಮ ಪ್ರತಿಭೆಯನ್ನು ವೃದ್ಧಿಸಲು ಒತ್ತುಕೊಡಬೇಕು. ಕಾಲೇಜಿಗೆ ಬರುವ ಪ್ರತಿ ವಿದ್ಯಾರ್ಥಿಯು ಸಿಇಟಿ, ನೀಟ್, ಜೆಇಇ ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ನಡೆಸಬೇಕು. ದಿನ ನಿತ್ಯದ ಅಭ್ಯಾಸದ ಜೊತೆಗೆ ಸ್ಪರ್ಧಾತ್ಮ ವಿಷಯಗಳ ಬಗ್ಗೆ ಓದಿದರೆ ಗೆಲುವು ನಿಶ್ಚಿತ ಎಂದು ಸಲಹೆ ನೀಡಿದರು.ಪಿಯು ಪ್ರಾಚಾರ್ಯ ವಸಂತರಾವ್ ಗಾರಗಿ ಮಾತನಾಡಿ, ವಿದ್ಯಾರ್ಥಿಗಳು ಹೆತ್ತ ತಂದೆ ತಾಯಿ, ಕಲಿತ ಶಾಲೆ, ಕಲಿಸಿದ ಗುರು ಮತ್ತು ಹೊತ್ತು ಭೂಮಿಯ ಋಣ ತೀರಿಸಬೇಕಾದರೆ ಸಮಾಜ ಮೆಚ್ಚುವ ರೀತಿಯಲ್ಲಿ ಉತ್ತಮ ಪ್ರಜೆಗಳಾಗಬೇಕು. ಹಾಗೆ ಸಾಧಕರಾಗಬೇಕಾದರೆ ಅಧ್ಯಯನಶೀಲ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದರು.ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಶೈಕ್ಷಣಿಕ ಸಲಹೆಗಾರ ಬಿ.ಎಸ್. ಗೌಡರ ಮಾತನಾಡಿದರು. ಕಳೆದ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು, ಆಡಳಿತ ಮಂಡಳಿಯವರನ್ನು ಸನ್ಮಾನಿಸಲಾಯಿತು. ಈ ವೇಳೆ ಆಡಳಿತ ಮಂಡಳಿ ಸದಸ್ಯರಾದ ಸದಾಶಿವ ಕರಡಿ, ಶರಣಪ್ಪ ರೇವಡಿ, ಪ್ರಭು ಚವಡಿ, ಐಟಿಐ ಪ್ರಾಚಾರ್ಯ ಎ.ಪಿ.ಗಾಣಗೇರ, ಬಸಯ್ಯ ಹಿರೇಮಠ, ಶಿಕ್ಷಕ ಮಂಜುನಾಥ ಕಾಡದ ಹಾಗೂ ಸಿಬ್ಬಂದಿಗಳು, ಪಾಲಕರು, ವಿದ್ಯಾರ್ಥಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ