ಸರ್ಕಾರ ಕೃಷಿ ಶಿಕ್ಷಣ ಮತ್ತು ಉದ್ಯೋಗದ ವಿಷಯದಲ್ಲಿ ನಿರ್ಲಕ್ಷ್ಯ ತೋರಿಸುತ್ತಿದ್ದು, ಇದರಿಂದ ಸಾವಿರಾರು ಕೃಷಿ ಪದವೀಧರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕರ್ನಾಟಕದಲ್ಲಿ ಪ್ರತಿವರ್ಷ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು ಕಡ್ಡಾಯವಾಗಿ ನಡೆಸಬೇಕು. ಜೊತೆಗೆ ರಾಯಿಟೆಕ್ ಕಾಲೇಜುಗಳನ್ನು ರದ್ದುಪಡಿಸುವುದು, ಬಿ.ಇ. ಜೈವಿಕ ತಂತ್ರಜ್ಞಾನ ಕೋರ್ಸ್‌ಗೆ ಅವಕಾಶ ನೀಡದಿರುವುದು, ಕೃಷಿ ವಿದ್ಯಾರ್ಥಿಗಳಿಗೆ ಕ್ರೀಡಾ ಕೋಟಾ ಪರಿಚಯಿಸುವುದು, ಡಿಎಇಎಸ್‌ಐ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿ ಕೃಷಿ ಪದವೀಧರರ ಹಿತಾಸಕ್ತಿಯನ್ನು ಕಾಪಾಡುವುದು, ಹಾಗೂ ರಾಜ್ಯದಲ್ಲಿ ಹೊಸ ಖಾಸಗಿ ಕೃಷಿ ಕಾಲೇಜುಗಳಿಗೆ ಅನುಮತಿ ನೀಡದಿರುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ ಎಂದು ಹೇಳಿದರು.
ಕನ್ನಡಪ್ರಭ ವಾರ್ತೆ ಹಾಸನ
ರಾಜ್ಯದ ಕೃಷಿ ಪದವೀಧರರು ಮತ್ತು ವಿದ್ಯಾರ್ಥಿಗಳ ಸಂಘಟನೆಯ ನೇತೃತ್ವದಲ್ಲಿ ಹಾಸನ ತಾಲೂಕಿನ ಕಾರೆಕೆರೆಯ ಕೃಷಿ ಮಹಾವಿದ್ಯಾಲಯದ ಮುಂಭಾಗ ವಿದ್ಯಾರ್ಥಿಗಳು ಬುಧವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.ಕೃಷಿ ವಿದ್ಯಾರ್ಥಿಗಳಾದ ನಿರೀಕ್ಷಾ ಮತ್ತು ಮೋಹನ್ ಮಾತನಾಡಿ, ರಾಜ್ಯದ ಕೃಷಿ ಶಿಕ್ಷಣ ಹಾಗೂ ಕೃಷಿ ಪದವೀಧರರ ಭವಿಷ್ಯವನ್ನು ಸುರಕ್ಷಿತಗೊಳಿಸುವ ಉದ್ದೇಶದಿಂದ ಈ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಸರ್ಕಾರ ಕೃಷಿ ಶಿಕ್ಷಣ ಮತ್ತು ಉದ್ಯೋಗದ ವಿಷಯದಲ್ಲಿ ನಿರ್ಲಕ್ಷ್ಯ ತೋರಿಸುತ್ತಿದ್ದು, ಇದರಿಂದ ಸಾವಿರಾರು ಕೃಷಿ ಪದವೀಧರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕರ್ನಾಟಕದಲ್ಲಿ ಪ್ರತಿವರ್ಷ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು ಕಡ್ಡಾಯವಾಗಿ ನಡೆಸಬೇಕು. ಜೊತೆಗೆ ರಾಯಿಟೆಕ್ ಕಾಲೇಜುಗಳನ್ನು ರದ್ದುಪಡಿಸುವುದು, ಬಿ.ಇ. ಜೈವಿಕ ತಂತ್ರಜ್ಞಾನ ಕೋರ್ಸ್‌ಗೆ ಅವಕಾಶ ನೀಡದಿರುವುದು, ಕೃಷಿ ವಿದ್ಯಾರ್ಥಿಗಳಿಗೆ ಕ್ರೀಡಾ ಕೋಟಾ ಪರಿಚಯಿಸುವುದು, ಡಿಎಇಎಸ್‌ಐ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿ ಕೃಷಿ ಪದವೀಧರರ ಹಿತಾಸಕ್ತಿಯನ್ನು ಕಾಪಾಡುವುದು, ಹಾಗೂ ರಾಜ್ಯದಲ್ಲಿ ಹೊಸ ಖಾಸಗಿ ಕೃಷಿ ಕಾಲೇಜುಗಳಿಗೆ ಅನುಮತಿ ನೀಡದಿರುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ ಎಂದು ಹೇಳಿದರು.
‘ಕೃಷಿ ಶಿಕ್ಷಣವನ್ನು ಉಳಿಸಿ, ಉದ್ಯೋಗವನ್ನು ಖಾತ್ರಿಪಡಿಸಿ, ನಮ್ಮ ಭವಿಷ್ಯವನ್ನು ಸುರಕ್ಷಿತಗೊಳಿಸಿ’ ಎಂಬ ಘೋಷಣೆಗಳೊಂದಿಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಲಾಗಿದೆ. ‘ಶಿಕ್ಷಣವು ವ್ಯವಹಾರವಲ್ಲ, ಅದು ಪ್ರತಿಯೊಬ್ಬರ ಹಕ್ಕು’ ಹಾಗೂ ಸರ್ಕಾರಿ ಕಾಲೇಜುಗಳಲ್ಲಿ ಎಲ್ಲರಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಫಲಕಗಳನ್ನು ಹಿಡಿದು ಸರ್ಕಾರದ ಗಮನ ಸೆಳೆದರು. ತಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಸರ್ಕಾರ ತಕ್ಷಣವೇ ಈಡೇರಿಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ವಿದ್ಯಾರ್ಥಿ ಮುಖಂಡರು ಎಚ್ಚರಿಕೆ ನೀಡಿದರು. ಮಳೆ ಬರುತ್ತಿದ್ದರೂ ವಿದ್ಯಾರ್ಥಿಗಳೂ ಪ್ರತಿಭಟನೆಯಿಂದ ಹಿಂದೆ ಸರಿಯದೆ ಕಾಲೇಜು ಮುಖ್ಯದ್ವಾರದ ಮುಂದೆ ರಸ್ತೆ ಮೇಲೆ ಕುಳಿತು ತಮ್ಮ ಪ್ರತಿಭಟನಾ ಹೋರಾಟ ಮುಂದುವರಿಸಿದರು.
ಪ್ರತಿಭಟನೆಯಲ್ಲಿ ಕೃಷಿ ಪದವೀಧರರು, ವಿದ್ಯಾರ್ಥಿಗಳಾದ ವರ್ಷ, ರೋಹಿತ್, ಗಗನಾ, ವಿನಿತಾ, ಉಜ್ವಲ್ ಹಾಗೂ ಶಾಂತಿಗ್ರಾಮದ ಅರುಣ್ ಕುಮಾರ್, ಚರಣ್ ಇತರರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.