ವಿದ್ಯಾರ್ಥಿನಿ ಅತ್ಯಾಚಾರಕ್ಕೆಚಿಂದಿ ಆಯುವ ವ್ಯಕ್ತಿ ಯತ್ನ

KannadaprabhaNewsNetwork |  
Published : Jun 05, 2026, 02:00 AM IST
ಸೈಫಲ್ ಮಂಡಲ್ | Kannada Prabha

ಸಾರಾಂಶ

ತನ್ನ ಪಿಜಿಗೆ ನಡೆದುಕೊಂಡು ಹೋಗುತ್ತಿದ್ದಾಗ ಹಿಂಬಾಲಿಸಿ ಬಂದು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಚಿಂದಿ ಆಯುವ ವ್ಯಕ್ತಿಯೊಬ್ಬನನ್ನು ವೈಟ್‌ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ತನ್ನ ಪಿಜಿಗೆ ನಡೆದುಕೊಂಡು ಹೋಗುತ್ತಿದ್ದಾಗ ಹಿಂಬಾಲಿಸಿ ಬಂದು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಚಿಂದಿ ಆಯುವ ವ್ಯಕ್ತಿಯೊಬ್ಬನನ್ನು ವೈಟ್‌ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಸೈಫಲ್ ಮಂಡಲ್ ಬಂಧಿತನಾಗಿದ್ದು, ಎರಡು ದಿನಗಳ ಹಿಂದೆ ವೈಟ್‌ಫೀಲ್ಡ್ ಸಮೀಪ ನಸುಕಿನಲ್ಲಿ ತನ್ನ ಪಿಜಿಗೆ ಸಂತ್ರಸ್ತೆ ಮರಳುವಾಗ ಈ ಕೃತ್ಯ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವೈಟ್‌ಫೀಲ್ಡ್ ಸಮೀಪದ ಖಾಸಗಿ ಕಾಲೇಜಿನಲ್ಲಿ ಪದವಿ ಓದುತ್ತಿರುವ ಕೇರಳ ಮೂಲದ ಸಂತ್ರಸ್ತೆ, ಆ ಕಾಲೇಜು ಹತ್ತಿರದಲ್ಲೇ ಪಿಜಿಯಲ್ಲಿ ನೆಲೆಸಿದ್ದಾಳೆ. ತನ್ನ ಸ್ನೇಹಿತರ ಜತೆ ಮಂಗಳವಾರ ರಾತ್ರಿ ಆಕೆ ಓದಲು ಹೋಗಿದ್ದಳು. ತರುವಾಯ ಅಲ್ಲಿಂದ ನಸುಕಿನಲ್ಲಿ ಆಟೋದಲ್ಲಿ ಬಂದ ಆಕೆ, ತನ್ನ ಪಿಜಿ ಹತ್ತಿರದಲ್ಲೇ ಆಟೋ ಇಳಿದ ನಡೆದುಕೊಂಡು ಹೊರಟಿದ್ದಳು. ಆಗ ಆಕೆಯನ್ನು ಹಿಂಬಾಲಿಸಿ ಬಂದ ಕಿಡಿಗೇಡಿ, ಪಿಜಿ ಪ್ರವೇಶ ದ್ವಾರದಲ್ಲಿ ಸಂತ್ರಸ್ತೆಯನ್ನು ಹಿಡಿದು ಎಳೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ್ದಾನೆ.

ಅನಿರೀಕ್ಷಿತ ಘಟನೆಯಿಂದ ಆತಂಕಗೊಂಡ ಆಕೆ ರಕ್ಷಣೆಗೆ ಜೋರಾಗಿ ಕೂಗಿಕೊಂಡಿದ್ದಾಳೆ. ಈ ಚೀರಾಟ ಕೇಳಿ ಸ್ಥಳೀಯರು ಜಮಾಯಿಸಿದ್ದಾರೆ. ಜನರು ಸೇರುತ್ತಿದ್ದಂತೆ ತಪ್ಪಿಸಿಕೊಳ್ಳಲು ಮುಂದಾದ ಆತನನ್ನು ಸ್ಥಳೀಯರು ಹಿಡಿದಿದ್ದಾರೆ. ಕೂಡಲೇ ಈ ಬಗ್ಗೆ ಪೊಲೀಸರಿಗೆ ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಿದ್ದಾರೆ. ವಿಷಯ ಗೊತ್ತಾದ ತಕ್ಷಣವೇ ಘಟನಾ ಸ್ಥಳಕ್ಕೆ ತೆರಳಿದ ವೈಟ್‌ಫೀಲ್ಡ್ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ. ನಂತರ ಸಂತ್ರಸ್ತೆ ನೀಡಿದ ದೂರು ಆಧರಿಸಿ ಎಫ್‌ಐಆರ್ ದಾಖಲಿಸಿ ಆತನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಚಿಂದಿ ಆಯುವ ಕೆಲಸ

ಹಲವು ದಿನಗಳಿಂದ ನಗರದಲ್ಲಿ ಚಿಂದಿ ಆಯುವ ಕೆಲಸ ಮಾಡಿಕೊಂಡು ಆರೋಪಿ ಜೀವನ ಸಾಗಿಸುತ್ತಿದ್ದ. ವೈಟ್‌ಫೀಲ್ಡ್ ಸಮೀಪ ಜೋಪಡಿಗಳಲ್ಲಿ ಆತ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಐಟಿ ರಚನೆ ಆದಾಗ ಡಾ। ಹೆಗ್ಗಡೆ ಜೈಲಿಗೆ ಹೋಗ್ತಾರೆ ಅಂತ ಸಂಭ್ರಮಿಸಿತ್ತು ಬುರುಡೆ ಗ್ಯಾಂಗ್‌: ಚಿನ್ನಯ್ಯ
ಗೃಹಲಕ್ಷ್ಮಿ ಸ್ಕೀಂನಿಂದ 3.89 ಲಕ್ಷ ಮಂದಿ ಫಲಾನುಭವಿಗಳು ಔಟ್‌