ಬೀದಿನಾಯಿಗಳ ದಾಳಿಯಿಂದ ವಿದ್ಯಾರ್ಥಿಗೆ ಗಂಭೀರ ಗಾಯ

KannadaprabhaNewsNetwork |  
Published : Feb 12, 2026, 01:45 AM IST
ವಿಜೆಪಿ ವಿಜಯಪುರ ಪಟ್ಟಣದ ನಾಯಿಗಳ ದಾಳಿಯಿಂದ ತೀವ್ರವಾಗಿ ಗಾಯಗೊಂಡ ಎವರ್ ಗ್ರೀನ್ ಸ್ಕೂಲ್ ವಿದ್ಯಾರ್ಥಿ  ಹನಿಶ್ | Kannada Prabha

ಸಾರಾಂಶ

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಶಾಲಾ ಸಿಬ್ಬಂದಿ, ಬಾಲಕನನ್ನು ಶಾಲೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಕೂಡಲೇ ಪೋಷಕರಿಗೆ ಮಾಹಿತಿ ನೀಡಿ, ವಿದ್ಯಾರ್ಥಿಯನ್ನು ವಿಜಯಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು.

ಕನ್ನಡಪ್ರಭ ವಾರ್ತೆ ವಿಜಯಪುರ

ಶಾಲೆಯಿಂದ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿಯೊಬ್ಬನ ಮೇಲೆ ಬೀದಿನಾಯಿಗಳು ಅಟ್ಟಹಾಸ ಮೆರೆದ ಘಟನೆ ನಡೆದಿದೆ. ನಾಯಿಗಳ ದಾಳಿಯಿಂದ ಹೊಸಪೇಟೆ ಗ್ರಾಮದ ೬ನೇ ತರಗತಿ ವಿದ್ಯಾರ್ಥಿ ಅನೀಶ್ ಎಂಬಾತ ತೀವ್ರವಾಗಿ ಗಾಯಗೊಂಡಿದ್ದಾನೆ.

ಘಟನೆಯ ವಿವರ: ಸೋಮವಾರ ಸಂಜೆ ೩:೫೦ರ ಸುಮಾರಿಗೆ (ಎವರ್ ಗ್ರೀನ್ ಸ್ಕೂಲ್)ಶಾಲೆ ಮುಗಿಸಿ ಅನೀಶ್ ಮನೆಗೆ ತೆರಳುತ್ತಿದ್ದನು. ಶಾಲೆಯಿಂದ ಸುಮಾರು ೨೦೦ ಮೀಟರ್ ದೂರದಲ್ಲಿ ಹೊಂಚು ಹಾಕಿದ್ದ ಎರಡು ಬೀದಿನಾಯಿಗಳು ಏಕಾಏಕಿ ವಿದ್ಯಾರ್ಥಿಯ ಮೇಲೆ ದಾಳಿ ನಡೆಸಿವೆ. ನಾಯಿಗಳು ಅತ್ಯಂತ ಕ್ರೂರವಾಗಿ ಕಚ್ಚಿದ್ದರಿಂದ ಅನೀಶ್ ದೇಹದ ಮೇಲೆ ಗಂಭೀರ ಗಾಯಗಳಾಗಿವೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಶಾಲಾ ಸಿಬ್ಬಂದಿ, ಬಾಲಕನನ್ನು ಶಾಲೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಕೂಡಲೇ ಪೋಷಕರಿಗೆ ಮಾಹಿತಿ ನೀಡಿ, ವಿದ್ಯಾರ್ಥಿಯನ್ನು ವಿಜಯಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು.

ಗಾಯವು ತೀವ್ರವಾಗಿದ್ದರಿಂದ ಅದಕ್ಕೆ ಸಂಬಂಧಿಸಿದ ಅಗತ್ಯ ಔಷಧಗಳು ಲಭ್ಯವಿಲ್ಲವೆಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ತಿಳಿಸಿದರು. ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದರು.

ಬಳಿಕ ವಿದ್ಯಾರ್ಥಿಯನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ವೈದ್ಯರು ಗಾಯಗಳಿಗೆ ಹೊಲಿಗೆ ಹಾಕಿ, ಮೂರು ದಿನಗಳ ಕಾಲ ಕಡ್ಡಾಯವಾಗಿ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.

ಪುರಸಭೆಗೆ ಮನವಿ:

ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ. ಶಾಲಾ ವತಿಯಿಂದ ಪುರಸಭೆಗೆ ಅಧಿಕೃತ ಮನವಿ ಪತ್ರ ಸಲ್ಲಿಸಲಾಗಿದ್ದು, ಕೂಡಲೇ ನಾಯಿಗಳ ಹಾವಳಿಯನ್ನು ತಡೆಗಟ್ಟಿ ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಾಮರಾಜನಗರಕ್ಕೆ ವಿವಿಧ ರೈಲ್ವೆ ಬೇಡಿಕೆಗಳಿಗೆ ಪ್ರಭಾಕರ್‌ ಆಗ್ರಹ
ವಿದ್ಯಾರ್ಥಿನಿ ಆತ್ಮಹತ್ಯೆ: ಬಿಇಒ ಅಮಾನತಿಗೆ ಆಗ್ರಹ