ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಶಂಕೆ: ಶೋಧ ಕಾರ್ಯ

KannadaprabhaNewsNetwork |  
Published : Jun 13, 2025, 01:11 AM IST

ಸಾರಾಂಶ

ಮದ್ದೂರಿನ ಅಂಬರಹಳ್ಳಿ ಗ್ರಾಮದ ಮಹಾಲಕ್ಷ್ಮೀ (18) ಎಂಬ ವಿದ್ಯಾರ್ಥಿನಿಯ ಐಡಿ ಕಾರ್ಡ್, ಬ್ಯಾಗ್, ಚಪ್ಪಲಿಗಳು ದೊರೆತಿದೆ.

ಚನ್ನಪಟ್ಟಣ: ತಾಲೂಕಿನ ಸಿಂಗರಾಜಿಪುರ ಕೆರೆಯ ಬಳಿ ವಿದ್ಯಾರ್ಥಿನಿಯೊಬ್ಬಳ ಗುರುತಿನ ಚೀಟಿ, ಬ್ಯಾಗ್ ಹಾಗೂ ಚಪ್ಪಲಿ ದೊರೆತ್ತಿದ್ದು, ಆಕೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ.ಗುರುವಾರ ಸಂಜೆ ಸಿಂಗರಾಜಿಪುರ ಕೆರೆಯ ಬಳಿ ಮಂಡ್ಯ ಜಿಲ್ಲೆಯ ಮದ್ದೂರಿನ ಅಂಬರಹಳ್ಳಿ ಗ್ರಾಮದ ಮಹಾಲಕ್ಷ್ಮೀ (18) ಎಂಬ ವಿದ್ಯಾರ್ಥಿನಿಯ ಐಡಿ ಕಾರ್ಡ್, ಬ್ಯಾಗ್, ಚಪ್ಪಲಿಗಳು ದೊರೆತ್ತಿದ್ದು, ಈಕೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ. ಕೆರೆ ದಡದಲ್ಲಿ ಸಿಕ್ಕ ವಸ್ತುಗಳನ್ನು ಗಮನಿಸಿ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೆರೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧಕಾರ್ಯಾಚರಣೆ ನಡೆಸಿದ್ದಾರೆ. ಸ್ಥಳಕ್ಕೆ ಅಕ್ಕೂರು ಪೊಲೀಸ್ ಠಾಣೆ ಪೊಲೀಸರು ಸಹ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಾತ್ರಿಯಾದ ಕಾರಣ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌