ವಿದ್ಯಾರ್ಥಿಗಳು ಸಾಧನೆಯತ್ತ ಗಮನಹರಿಸಲು ಸಲಹೆ

KannadaprabhaNewsNetwork |  
Published : Sep 08, 2025, 01:00 AM IST
ಫೋಟೋ: 6 ಹೆಚ್‌ಎಸ್‌ಕೆ 1ಹೊಸಕೋಟೆ ನಗರದ ಮಹದೇವ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಫ್ರೆಶೋತ್ಸವ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮೋಹನ್ ಕುಮಾರ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ಮನುಷ್ಯ ಜೀವನದಲ್ಲಿ ಎತ್ತರದ ಸ್ಥಾನಕ್ಕೆ ತಲುಪಬೇಕಾದರೆ ಕಾಲೇಜು ಹಂತದಿಂದಲೆ ನಿಶ್ಚಿತ ಗುರಿ ಹೊಂದಿ ಆ ಗುರಿಯನ್ನು ತಲುಪುವತ್ತ ಗಮನಹರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮೋಹನ್ ಕುಮಾರ್ ತಿಳಿಸಿದರು.

ಹೊಸಕೋಟೆ: ಮನುಷ್ಯ ಜೀವನದಲ್ಲಿ ಎತ್ತರದ ಸ್ಥಾನಕ್ಕೆ ತಲುಪಬೇಕಾದರೆ ಕಾಲೇಜು ಹಂತದಿಂದಲೆ ನಿಶ್ಚಿತ ಗುರಿ ಹೊಂದಿ ಆ ಗುರಿಯನ್ನು ತಲುಪುವತ್ತ ಗಮನಹರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮೋಹನ್ ಕುಮಾರ್ ತಿಳಿಸಿದರು.

ನಗರದ ಮಹದೇವ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚಿನ ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ತಾಲೂಕು ಹೊಸಕೋಟೆ. ಉತ್ತಮ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ. ಇದರ ಪರಿಣಾಮವಾಗಿಯೇ ರಾಜಧಾನಿ ಬೆಂಗಳೂರಿನ ಸಮೀಪವಿರುವ ಹೊಸಕೋಟೆ ಹೆಚ್ಚಿನ ವಿದ್ಯಾರ್ಥಿಗಳನ್ನು ಆಕರ್ಷಿಸುತ್ತಿದೆ. ಪ್ರಮುಖವಾಗಿ ಪಿಯು ಫಲಿತಾಂಶದಲ್ಲಿ ಕಳೆದ ಬಾರಿ ೮ನೇ ಸ್ಥಾನ ಪಡೆದಿದ್ದು ಮುಂದಿನ ಬಾರಿ ಪ್ರಥಮ ಸ್ಥಾನ ಪಡೆಯಲು ಹೆಚ್ಚಿನ ಶ್ರಮ ಹಾಕಬೇಕು. ಬೋಧಕ ಸಿಬ್ಬಂದಿ ಜೊತೆಗೆ ವಿದ್ಯಾರ್ಥಿಗಳ ಪರಿಶ್ರಮ ಕೂಡ ಅಗತ್ಯ. ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳಲ್ಲಿ ಚಂಚಲತೆ ಸ್ವಭಾವವಿರುತ್ತದೆ. ಅದನ್ನು ದೂರವಿಟ್ಟು ಓದಿನತ್ತ ಗಮನಹರಿಸಿ ಗುರಿ ಸಾಧಿಸಬೇಕು ಎಂದು ಹೇಳಿದರು.

ಮಹದೇವ ಕಾಲೇಜು ಪ್ರಾಂಶುಪಾಲ ರಾಮನಾಥ್ ಮಾತನಾಡಿ, ಪೋಷಕರು ಹಲವು ಕನಸು ಹೊತ್ತು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುತ್ತಿದ್ದಾರೆ. ವಿದ್ಯಾರ್ಥಿಗಳು ಅದನ್ನು ಮನಸ್ಸಿನಲ್ಲಿಟ್ಟುಕೊಂಡು ಕಠಿಣ ಪರಿಶ್ರಮ, ನಿರಂತರ ಓದಿನ ಮೂಲಕ ಸಾಧನೆಯತ್ತ ದಾಪುಗಾಲಿಡಬೇಕು. ಕಳೆದ ಬಾರಿ ಮಹದೇವ ಕಾಲೇಜು ಕಾಮರ್ಸ್ ವಿಷಯದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದು, ವಿಜ್ಞಾನದಲ್ಲಿ 3ನೇ ಸ್ಥಾನ ಪಡೆದಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ವಿಷಯದಲ್ಲಿಯೂ ಪ್ರಥಮ ಸ್ಥಾನ ಪಡೆಯಬೇಕು. ಅದಕ್ಕೆ ಕಠಿಣ ಅಧ್ಯಯನ ಮಾಡಬೇಕು ಎಂದು ಸಲಹೆ ಮಾಡಿದರು.

ಕಾರ್ಯಕ್ರಮದಲ್ಲಿ ಮಹದೇವ ವಿದ್ಯಾಸಂಸ್ಥೆಗಳ ಅಧ್ಯಕ್ಷ ರಾಮಾಂಜಿನಿ, ಸಂಪನ್ಮೂಲ ವ್ಯಕ್ತಿಗಳಾದ ತೇಜಸ್, ಶ್ರೀನಿವಾಸ್, ಮಹದೇವ ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ಹರೀಶ್, ಮಯೂರ್, ನವನೀಶ್ವರ್ ರೆಡ್ಡಿ, ಲಿಖಿತ್‌ರಾಜ್‌ನಂದ ಹಾಜರಿದ್ದರು.

ಫೋ: 6 ಹೆಚ್‌ಎಸ್‌ಕೆ 1

ಹೊಸಕೋಟೆಯ ಮಹದೇವ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭವನ್ನು ಬೆಂಗಳೂರು ಗ್ರಾಮಾಂತರ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮೋಹನ್ ಕುಮಾರ್ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು