ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಬಾಲಕೀಯರ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಘಟಕ ಹಾಗೂ ಬಾಲಕಿಯ ಪದವಿ ಪೂರ್ವ ಕಾಲೇಜಿನ ವತಿಯಿಂದ ನಡೆದ ಜಿಲ್ಲಾಮಟ್ಟದ ಪ್ರೇರಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ರಾಷ್ಟ್ರ ಪ್ರೇಮ ಎನ್ನುವುದು ಜಾತಿ, ವರ್ಗಕ್ಕೆ ಸೀಮಿತವಾಗಿಲ್ಲ. ಪ್ರತಿಯೊಬ್ಬ ಭಾರತೀಯರೂ ತಮ್ಮ ಅಂತರಾಳದಲ್ಲಿ ರಾಷ್ಟ್ರಪ್ರೇಮ ಬೆಳೆಸಿಕೊಳ್ಳಬೇಕು ಎಂದರು.
ಇಸ್ರೇಲ್ ಎಂಬ ಸಣ್ಣ ದೇಶ ಸುತ್ತಲೂ ಶತ್ರು ರಾಷ್ಟ್ರಗಳನ್ನೇ ಹೊಂದಿದೆ. ಇಸ್ರೇಲ್ ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬರೂ 3 ವರ್ಷಗಳ ಕಾಲ ಸೇನೆ ಸೇರಿ ತರಬೇತಿ ಪಡೆದು ದೇಶಪ್ರೇಮ, ಶಿಸ್ತು ಬೆಳೆಸಿಕೊಳ್ಳುತ್ತಾರೆ. ಅದಕ್ಕಾಗಿ ಆ ದೇಶದಲ್ಲಿ ಸೇನೆ ಬಲಿಷ್ಠವಾಗಿದೆ. ಜತೆಗೆ ಅಭಿವೃದ್ಧಿ ಪಥದಲ್ಲೂ ಮುನ್ನಡೆಯುತ್ತಿದೆ ಎಂದು ತಿಳಿಸಿದರು.ನಮ್ಮ ದೇಶದಲ್ಲೂ ಸಹ ಸೇನೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ನಮಗೂ ಸಹ ಚೀನಾ, ಪಾಕಿಸ್ತಾನ ಹಾಗೂ ಬಾಂಗ್ಲಾ ಶತ್ರು ದೇಶಗಳ ಹಾವಳಿ ಒಂದೆಡೆಯಾದರೆ ಟೆರರಿಸ್ಟ್ ಗಳ ಹಾವಳಿ ನಡುವೆ ದೇಶವನ್ನು ರಕ್ಷಣೆ ಮಾಡಲಾಗುತ್ತಿದೆ. ಹಾಗಾಗಿ ನಾವೆಲ್ಲರೂ ದೇಶ ಪ್ರೇಮವನ್ನು ಬೆಳೆಸಿಕೊಳ್ಳಬೇಕು. ಆಗ ಮಾತ್ರ ಸದೃಢ ದೇಶ ನಿರ್ಮಾಣ ಮಾಡಲು ಸಾಧ್ಯ. ಸ್ಕೌಟ್ಸ್ ಅ್ಯಂಡ್ ಗೈಡ್ಸ್ ಸಂಸ್ಥೆಯೂ ಅರೆಸೈನ್ಯ ಹುಟ್ಟುಹಾಕುವ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.
ಇದೇ ವೇಳೆ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಬಾಲಕಿಯರ ವಿದ್ಯಾಸಂಸ್ಥೆ ವಿದ್ಯಾರ್ಥಿನಿ ಜೀವಿತ ಅವರನ್ನು ಸಂಸ್ಥೆ ಅಧ್ಯಕ್ಷರು, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಭಿನಂದಿಸಿದರು.